Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Babar Azam: ಸತತ ವೈಫಲ್ಯಗಳಿಂದ ಕಂಗೆಟ್ಟ ಬಾಬರ್ ಅಜಮ್; ತಂಡದಿಂದ ಹೊರಗೆ?

ತವರಿನಲ್ಲಿ ಪಾಕಿಸ್ತಾನ ತಂಡವು ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿದೆ. ಪಾಕಿಸ್ತಾನ ಎದುರು ಬಾಂಗ್ಲಾದೇಶ ಟೆಸ್ಟ್ ಪಂದ್ಯಯಲ್ಲಿ ಗೆಲುವು ಸಾಧಿಸಿರುವುದು ಇದೇ ಮೊದಲು. ಈ ಸೋಲಿನ ನಂತರ ಪಾಕಿಸ್ತಾನ ತಂಡ ಸಾಕಷ್ಟು ಟೀಕೆಗಳಿಗೆ ಒಳಗಾಗಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ಮಾಜಿ ನಾಯಕ ಬಾಬರ್ ಅಜಮ್ ಬ್ಯಾಟ್ ಕೂಡ ಸೈಲೆಂಟ್ ಆಗಿದೆ. ಅಗತ್ಯವಿದ್ದಾಗ ತಂಡಕ್ಕೆ ಆಸರೆಯಾಗಬೇಕಿದ್ದ ಅವರು ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಕ್ರೀಸ್ ತೊರೆಯುತ್ತಿದ್ದಾರೆ.

Babar Azam may be left out of the Pakistan team full details

ಈಗಾಗಲೇ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ಹಿಂದುಳಿದಿದೆ. ರಾವಲ್ಪಿಂಡಿಯಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಬಾಂಗ್ಲಾದೇಶ ಗೆಲ್ಲುವ ಮೂಲಕ 1-0 ಮುನ್ನಡೆ ಸಾಧಿಸಿದೆ. ಇದೀಗ ಅದೇ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನಲ್ಲಿ ಪಾಕಿಸ್ತಾನ ಎದುರು ಬಾಂಗ್ಲಾದೇಶ ಬಿಗಿ ಹಿಡಿತ ಸಾಧಿಸಿದೆ.

16 ಇನ್ನಿಂಗ್ಸ್‌ಗಳಲ್ಲಿ ಬಾರದ ಅರ್ಧಶತಕ

ಟೆಸ್ಟ್ ಕ್ರಿಕೆಟ್‌ನಲ್ಲಿ ಬಾಬರ್ ಅಜಮ್ ಪ್ರಾಬಲ್ಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಅವರಿಂದ ಕಳೆದ 16 ಇನ್ನಿಂಗ್ಸ್ ಗಳಲ್ಲಿ ಒಂದೇ ಒಂದು ಅರ್ಧಶತಕ ಗಳಿಸಲು ಸಾಧ್ಯವಾಗಿಲ್ಲ. 2022ರ ಡಿಸೆಂಬರ್‌ನಲ್ಲಿ ಅವರು ಕೊನೆಯ ಬಾರಿ ಟೆಸ್ಟ್ ಕ್ರಿಕೆಟ್‌ನಲ್ಲಿ 50 ರನ್‌ಗಳ ಗಡಿ ದಾಟಿದ್ದರು. ಕರಾಚಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್‌ ಇನ್ನಿಂಗ್ಸ್‌ನಲ್ಲಿ 161 ರನ್ ಗಳಿಸಿದ್ದರು. ಅಂದಿನಿಂದ ಅವರು 14, 24, 27, 13, 24, 39, 21, 14, 1, 41, 26, 23, 0, 22, 31, 11 ರನ್ ಗಳಿಸಿ ಔಟಾಗಿದ್ದಾರೆ.

ತಂಡದಿಂದ ಬಾಬರ್ ಔಟ್?

ಮುಂಬರುವ ಸರಣಿಗಳಲ್ಲಿ ಪಾಕಿಸ್ತಾನ ತಂಡದ ಮ್ಯಾನೇಜ್‌ಮೆಂಟ್ ತನ್ನ ಪ್ಲೇಯಿಂಗ್-11 ರಲ್ಲಿ ದೊಡ್ಡ ಬದಲಾವಣೆ ಮಾಡಲಿದೆ. ಎರಡನೇ ಟೆಸ್ಟ್ ಪಂದ್ಯಕ್ಕೆ ಸ್ಟಾರ್ ವೇಗದ ಬೌಲರ್ ಶಾಹೀನ್ ಅಫ್ರಿದಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು. ಇದನ್ನು ತಿಳಿದ ಎಲ್ಲರು ಆಶ್ಚರ್ಯಗೊಳ್ಳಗಾಗಿದ್ದರು.

ಇದಕ್ಕೂ ಮುನ್ನ ಶಾಹೀನ್ ಪ್ಲೇಯಿಂಗ್-11 ರಿಂದ ಹೊರಗುಳಿಯಬಹುದು ಎಂದು ಯಾರೂ ಭಾವಿಸಿರಲಿಲ್ಲ. ಆದರೆ ಟೆಸ್ಟ್ ಸರಣಿಯಲ್ಲಿ ಅವರ ಅಸ್ಥಿರ ಪ್ರದರ್ಶನದಿಂದಾಗಿ ಅವರು ತಂಡದಿಂದ ಹೊರಗುಳಿಬೇಕಾಯಿತು.ಈಗ ಬಾಬರ್ ಆಜಮ್ ಅವರಿಗೂ ಇಂತಹ ಪರಿಸ್ಥಿತಿ ಎದುರಾಗಿದೆ.

ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕಿಯೂ ಬಾಬರ್ ಉತ್ತಮ ಪ್ರದರ್ಶನ ನೀಡಲಿಲ್ಲ ಎಂದರೆ ತಂಡದ ಹೊರ ಬೀಳುವುದು ಬಹುತೇಕ ಪಕ್ಕ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ ಮುಂದಿನ ತಿಂಗಳು ತವರಿನಲ್ಲಿ ಇಂಗ್ಲೆಂಡ್ ವಿರುದ್ಧ 3 ಟೆಸ್ಟ್‌ಗಳ ಸರಣಿಯನ್ನು ಆಡಲಿದೆ.

Story first published: Monday, September 2, 2024, 16:02 [IST]
Other articles published on Sep 2, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+