ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬಾಬರ್ ಅಜಮ್‌ಗೆ 'ಹೆಚ್ಚಿನ ಮೌಲ್ಯಯುತ ಕ್ರಿಕೆಟಿಗ" ಪ್ರಶಸ್ತಿ ನೀಡಿದ ಪಿಸಿಬಿ

Babar Azam named ‘Most Valuable Cricketer’ in PCB Awards

ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಕಿಸ್ತಾನ ತಂಡದ ಎಲ್ಲಾ ಮಾದರಿಯ ನಾಯಕನಾಗಿರುವ ಬಾಬರ್ ಅಜಮ್‌ಗೆ "ಹೆಚ್ಚಿನ ಮೌಲ್ಯಯುತ ಕ್ರಿಕೆಟಿಗ" ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಕಳೆದ ವರ್ಷವೂ ಬಾಬರ್ ಅಜಮ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದು ಕ್ರಿಕೆಟ್‌ನ ಎಲ್ಲಾ ಮಾದರಿಯಲ್ಲಿ 55ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.

ಕಳೆದ ವರ್ಷದಲ್ಲಿ ಆಡಿದ 4 ಟೆಸ್ಟ್ ಪಂದ್ಯಗಳಲ್ಲಿ ಬಾಬರ್ ಅಜಮ್ 67.6ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಬಾಬರ್ ಅಜಮ್ ಮೂರು ಪಂದ್ಯಗಳಲ್ಲಿ 221 ರನ್ ಗಳಿಸಿದ್ದು 110.5ರಷ್ಟು ಸರಾಸರಿಯನ್ನು ಹೊಂದಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ 6 ಪಂದ್ಯಗಳಲ್ಲಿ ಬಾಬರ್ 276 ರನ್ ಗಳಿಸಿದ್ದು 55.2ರಷ್ಟು ಸರಾಸರಿಯನ್ನು ಹೊಂದಿದ್ದಾರೆ.

2021ರ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ ಹೇಗಿದೆ ನೋಡಿ2021ರ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ ಹೇಗಿದೆ ನೋಡಿ

ನ್ಯೂಜಿಲೆಂಡ್ ವಿರುದ್ದದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಹಂಗಾಮಿ ನಾಯಕನಾಗಿ ಮುನ್ನಡೆಸಿದ ಮೊಹಮ್ಮದ್ ರಿಜ್ವಾನ್ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಯದು ಟೆಸ್ಟ್ ಪಂದ್ಯಗಳಲ್ಲಿ ರಿಜ್ವಾನ್ 302 ರನ್ ಗಳಿಸಿ ಪಾಕಿಸ್ತಾನ ತಂಡಕ್ಕೆ ನೆರವಾಗಿದ್ದಾರೆ.

ಸಿಡ್ನಿ ಟೆಸ್ಟ್: ನೆಟ್ ಅಭ್ಯಾಸದಲ್ಲಿ ನಿರತನಾದ ರೋಹಿತ್ ಶರ್ಮಾ: ವಿಡಿಯೋಸಿಡ್ನಿ ಟೆಸ್ಟ್: ನೆಟ್ ಅಭ್ಯಾಸದಲ್ಲಿ ನಿರತನಾದ ರೋಹಿತ್ ಶರ್ಮಾ: ವಿಡಿಯೋ

17ರ ಹರೆಯದ ಟೆಸ್ಟ್ ವೇಗದ ಬೌಲರ್ ನಸೀಮ್ ಶಾಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಉದಯೋನ್ಮುಖ ಅಂತಾರಾಷ್ಟ್ರೀಯ ಆಟಗಾರ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. 8 ಟೆಸ್ಟ್ ಪಂದ್ಯಗಳಲ್ಲಿ ನಸೀಮ್ ಶಾ 20 ವಿಕೆಟ್ ಪಡೆದು ಮಿಂಚಿದ್ದಾರೆ. ಇದರಲ್ಲಿ ಬಾಂಗ್ಲಾದೇಶದ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಕೂಡ ಸೇರಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಘೋಷಿಸಿದ ಈ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯುವ ಸರಣಿಯ ವೇಳೆ ನಡೆಯಲಿದೆ.

Story first published: Friday, January 1, 2021, 23:44 [IST]
Other articles published on Jan 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X