For Quick Alerts
ALLOW NOTIFICATIONS  
For Daily Alerts
 

New Record: ಟಿ20 ಕ್ರಿಕೆಟ್‌ನಲ್ಲಿ ಗೇಲ್, ಕೊಹ್ಲಿ ಹಿಂದಿಕ್ಕಿದ ಬಾಬರ್ ಅಜಮ್

ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚುರಿಯನ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಮ್ ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್‌ನ ಮಾಜಿ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಮತ್ತು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರನ್ನು ಬಾಬರ್ ಅಜಮ್ ಹಿಂದಿಕ್ಕಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಬಾಬರ್ ಅಜಮ್ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 11000 ರನ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ವೇಗವಾಗಿ 11000 ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶುಕ್ರವಾರ ಸೆಂಚುರಿಯನ್‌ ಸೂಪರ್‌ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ನಡುವೆ ಎರಡನೇ ಟಿ20 ಪಂದ್ಯ ನಡೆಯಿತು. ಈ ಪಂದ್ಯ ಬಾಬರ್ ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ಸಾಧನೆ ಮಾಡಿದರು. ಬಾಬರ್ ಅಜಮ್ ತಮ್ಮ 298ನೇ ಟಿ20 ಇನ್ನಿಂಗ್ಸ್‌ನಲ್ಲಿ 11000 ರನ್ ಪೂರೈಸಿದ್ದಾರೆ. ಕ್ರಿಸ್ ಗೇಲ್ 314 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದರು. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 330 ರನ್‌ಗಳಲ್ಲಿ 11000 ಟಿ20 ರನ್‌ಗಳನ್ನು ಕಲೆ ಹಾಕಿದ್ದರು. ವಿರಾಟ್ ಕೊಹ್ಲಿ 337 ಇನ್ನಿಂಗ್ಸ್‌ಗಳಲ್ಲಿ ಈ ದಾಖಲೆ ಮಾಡಿದ್ದರು. ಇದೀಗ ಬಾಬರ್ ಎಲ್ಲರನ್ನು ಹಿಂದಿಕ್ಕಿ ಟಿ20 ಕ್ರಿಕೆಟ್‌ನಲ್ಲಿ ಅತಿವೇಗವಾಗಿ 11000 ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

Babar Azam overtakes Chris Gayle Virat Kohli in T20 cricket

ದಕ್ಷಿಣ ಆಫ್ರಿಕಾ ವಿರುದ್ಧ ಬಾಬರ್ 20 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 31 ರನ್ ಗಳಿಸಿದರು. ಡರ್ಬನ್‌ನ ಕಿಂಗ್ಸ್‌ಮೀಡ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಬರ್ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದರು. ಈ ಪಂದ್ಯದಲ್ಲಿ ಪಾಕಿಸ್ತಾನ 7 ವಿಕೆಟ್‌ಗಳಿಂದ ಸೋತಿತ್ತು. ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 206 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 210 ರನ್ ಗಳಿಸಿ ಗೆದ್ದಿತ್ತು.

ಈ ಪಂದ್ಯದಲ್ಲಿ ಬಾಬರ್ ಅಜಮ್ ಮತ್ತೊಂದು ದಾಖಲೆ ಮಾಡಿದ್ದಾರೆ. ಬಾಬರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 14000 ರನ್ ಕಲೆ ಹಾಕಿದ ಸಾಧನೆ ಮಾಡಿದ್ದಾರೆ. ಈ ಸಾಧನೆ ಮಾಡಿದ ಐದನೇ ಪಾಕ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ರನ್ ಗಳಿಸಿದ ಬ್ಯಾಟರ್‌ಗಳಲ್ಲಿ ಇಂಜಮಾಮ್ ಉಲ್ ಹಕ್ (20541) ಮೊದಲ ಸ್ಥಾನದಲ್ಲಿದರೆ, ಯೂನಿಸ್ ಖಾನ್ (17790), ಮೊಹಮ್ಮದ್ ಯೂಸುಫ್ (17134) ಮತ್ತು ಜಾವೇದ್ ಮಿಯಾಂದಾದ್ (16213) ನಂತರದ ಸ್ಥಾನಗಳಿದ್ದಾರೆ.

Story first published: Saturday, December 14, 2024, 11:37 [IST]
Other articles published on Dec 14, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+