For Quick Alerts
ALLOW NOTIFICATIONS  
For Daily Alerts
 

ನಾಯಕತ್ವ ನನ್ನ ಬ್ಯಾಟಿಂಗ್‌ ಮೇಲೆ ಪರಿಣಾಮ ಬೀರಿಲ್ಲ: ಬಾಬರ್ ಅಜಂ

Babar Azam reaction on captaincy said Captaincy not affecting my batting

ಪಾಕಿಸ್ತಾನ ಕ್ರಿಕೆಟ್ ತಂಡ ತವರಿನಲ್ಲಿಯೇ ಇಂಗ್ಲೆಂಡ್ ವಿರುದ್ಧ ವೈಟ್‌ವಾಶ್ ಮುಖಭಂಗಕ್ಕೆ ಒಳಗಾಗಿದೆ. ಹೀಗಾಗಿ ಪಾಕಿಸ್ತಾನ ತಂಡದ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿಬರುತ್ತಿದೆ. ಪಾಕ್ ಮಾಜಿ ಆಟಗಾರರು ಪಾಕ್ ತಂಡದ ನಾಯಕ ಬಾಬರ್ ಅಜಂ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸುತ್ತಿದ್ದಾರೆ. ಬಾಬರ್ ಅಜಂಗೆ ನಾಯಕತ್ವ ಒತ್ತಡ ತರುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು ನಾಯಕತ್ವ ಬದಲಾಗಲಿ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ.

ಈ ವಿಚಾರವಾಗಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಸ್ವತಃ ಪ್ರತಿಕ್ರಿಯೆ ನೀಡಿದ್ದಾರೆ. ನಾಯಕತ್ವ ತನ್ನ ಮೇಲೆ ಯಾವುದೇ ಕಟ್ಟ ಪರಿಣಾಮ ಬೀರಿಲ್ಲ ಎಂದಿರುವ ಬಾಬರ್ ಅಜಂ, ಒತಯ್ತಡದಲ್ಲಿ ಆಡುವುದನ್ನು ನಾನು ಆನಂದಿಸುತ್ತೇನೆ ಎಂದಿದ್ದಾರೆ. ಈ ಮೂಲಕ ನಾಯಕತ್ವದ ಬಗೆಗಿನ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

"ನಾಯಕತ್ವದಿಂದಾಗಿ ಬ್ಯಾಟಿಂಗ್ ಮೇಲೆ ಪರಿಣಾಮ ಬೀರುತ್ತಿದೆ ಎಂದು ನನಗೆ ಅನಿಸುತ್ತಿಲ್ಲ. ನಾನು ಒತ್ತಡದಲ್ಲಿ ಬ್ಯಾಟಿಂಗ್ ನಡೆಸಲು ಇಷ್ಟ ಪಡುತ್ತೇನೆ. ನಾಯಕತ್ವ ಬ್ಯಾಟಿಂಗ್‌ನ ಮೇಲೆ ಪರಿಣಾಮ ಬೀರುತ್ತದೆ ಎಂದು ನನಗೆ ಅನಿಸುತ್ತಿಲ್ಲ. ನಾಯಕತ್ವ ಎಂಬುದು ದೊರೆಯುವ ಗೌರವ. ನನ್ನ ದೇಶಕ್ಕೆ ನಾನು ಯಾವಾಗಲೂ ಅತ್ಯುತ್ತಮವಾಗಿರುವುದನ್ನು ನೀಡಲು ಬಯಸುತ್ತೇನೆ" ಎಂದಿದ್ದಾರೆ ಬಾಬರ್ ಅಜಂ.

"ನನಗೆ ಪಾಕಿಸ್ತಾನ ಮೊದಲು ಉಳಿದವೆಲ್ಲಾ ನಂತರ. ಈ ತಂಡ ಸೋತಿದೆ ಮತ್ತು ನಾನು ಇಲ್ಲಿ ನಮ್ಮ ತಂಡದ ಆಟಗಾರರ ಪರವಾಗಿ ಬಂದಿದ್ದೇನೆ. ಈಬ ಸೋಲಿನ ಹೊನೆಯನ್ನು ನಾನು ಹೋರುತ್ತೇನೆ. ಇಂಥಾದ್ದು ಯಾವಾಗ ನಡೆದರೂ ನಾನು ತಂಡಕ್ಕಿಂತ ಮುಂದೆ ನಿಂತಿರುತ್ತೇನೆ" ಎಂದಿದ್ದಾರೆ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ.

17 ವರ್ಷಗಳ ಬಳಿಕ ಪಾಕಿಸ್ತಾನ ನೆಲದಲ್ಲಿ ಟೆಸ್ಟ್ ಸರಣಿ ಆಡಿರುವ ಇಂಗ್ಲೆಂಡ್ ತಂಡ ಪಾಕ್ ಪಡೆಗೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಪಾಕಿಸ್ತಾನ ತನ್ನ ತವರಿನಲ್ಲಿಯೇ ಇಂಗ್ಲೆಂಡ್ ವಿರುದ್ಧ ವೈಟ್‌ಬಾಶ್ ಅವಮಾನಕ್ಕೆ ತುತ್ತಾಗಿದೆ. ಕರಾಚಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಪಾಕಿಸ್ತಾನ ಹೀನಾಯ ಸೋಲು ಅನುಭವಿಸುವ ಮೂಲಕ ಟೆಸ್ಟ್ ಸರಣಿಯನ್ನು ಪ್ರವಾಸಿ ಇಂಗ್ಲೆಂಡ್ ತಂಡಕ್ಕೆ 0-3 ಅಂತರದಿಂದ ಬಿಟ್ಟುಕೊಟ್ಟಿದೆ.

ಮತ್ತೊಮ್ಮೆ ಸರ್ವಾಂಗೀಣ ಪ್ರದರ್ಶನ ನೀಡಿದ ಇಂಗ್ಲೆಂಡ್ ತಂಡ ಪಾಕಿಸ್ತಾನ ಪಡೆಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಗೆಲ್ಲಲು 167 ರನ್‌ಗಳ್ನು ಸ್ವೀಕರಿಸಿದ ಇಂಗ್ಲೆಂಡ್ ತಂಡ ಕೇವಲ 2 ವಿಕೆಟ್ ಕಳೆದುಕೊಂಡ ತನ್ನ ಆಕ್ರಮಣಕಾರಿ ಶೈಲಿಯಲ್ಲಿ ಬೆನ್ನಟ್ಟಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಶಾನ್ ಮಸೂದ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಸೌದ್ ಶಕೀಲ್, ಫಹೀಮ್ ಅಶ್ರಫ್, ನೌಮನ್ ಅಲಿ, ಮೊಹಮ್ಮದ್ ವಾಸಿಮ್ ಜೂನಿಯರ್, ಅಬ್ರಾರ್ ಅಹ್ಮದ್
ಬೆಂಚ್: ಇಮಾಮ್-ಉಲ್-ಹಕ್, ಮೊಹಮ್ಮದ್ ನವಾಜ್, ಮೊಹಮ್ಮದ್ ಅಲಿ, ಜಾಹಿದ್ ಮಹಮೂದ್, ಸರ್ಫರಾಜ್ ಅಹ್ಮದ್
ಇಂಗ್ಲೆಂಡ್ ಆಡುವ ಬಳಗ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಆಲಿ ರಾಬಿನ್ಸನ್, ಮಾರ್ಕ್ ವುಡ್, ಜ್ಯಾಕ್ ಲೀಚ್
ಬೆಂಚ್: ವಿಲ್ ಜ್ಯಾಕ್ಸ್, ಜೇಮ್ಸ್ ಆಂಡರ್ಸನ್, ಜೇಮೀ ಓವರ್ಟನ್, ಕೀಟನ್ ಜೆನ್ನಿಂಗ್ಸ್

Story first published: Wednesday, December 21, 2022, 5:40 [IST]
Other articles published on Dec 21, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+