ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬಾಬರ್ ಅಜಂ ಪಾಕಿಸ್ತಾನ ತಂಡದ ನಾಯಕತ್ವ ತ್ಯಜಿಸಬೇಕು ಎಂದ ಶಾಹಿದ್ ಅಫ್ರಿದಿ

Babar Azam Should Give Up Pakistan T20 Captaincy Says Shahid Afridi

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ಆಲ್‌ರೌಂಡರ್ ಶಾಹಿದ್ ಅಫ್ರಿದಿ ಅವರು ನಾಯಕ ಬಾಬರ್ ಅಜಂ ಪಾಕಿಸ್ತಾನ ಟಿ20 ತಂಡದ ನಾಯಕತ್ವವನ್ನು ತ್ಯಜಿಸಬೇಕು ಎಂದು ಆಗ್ರಹಿಸಿದ್ದು, ಇದೇ ವೇಳೆ ಏಕದಿನ ಮತ್ತು ಟೆಸ್ಟ್ ಮಾದರಿಯ ಸುದೀರ್ಘ ಸ್ವರೂಪಗಳ ಕಡೆಗೆ ಗಮನಹರಿಸುವಂತೆ ಕಿವಿಮಾತು ಹೇಳಿದ್ದಾರೆ.

ತಾವು ಬಾಬರ್ ಅಜಂ ಅವರನ್ನು ತುಂಬಾ ಗೌರವಿಸುತ್ತೇನೆ. ಟಿ20 ಕ್ರಿಕೆಟ್‌ನ ಚಂಚಲ ಸ್ವಭಾವವನ್ನು ಪರಿಗಣಿಸಿ, ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್‌ಮನ್ ಎಲ್ಲಾ 3 ಸ್ವರೂಪಗಳಲ್ಲಿ ನಾಯಕತ್ವದ ಜವಾಬ್ದಾರಿಯನ್ನು ಹೊರಲು ಬಯಸುವುದಿಲ್ಲ ಎನ್ನುವುದು ಪಾಕಿಸ್ತಾನ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅಭಿಪ್ರಾಯವಾಗಿದೆ.

ENG vs AUS: ಮಲಾನ್ ಶತಕ ವ್ಯರ್ಥ; ಇಂಗ್ಲೆಂಡ್ ವಿರುದ್ಧ ಪ್ರಚಂಡ ಗೆಲುವು ಸಾಧಿಸಿದ ಆಸೀಸ್ENG vs AUS: ಮಲಾನ್ ಶತಕ ವ್ಯರ್ಥ; ಇಂಗ್ಲೆಂಡ್ ವಿರುದ್ಧ ಪ್ರಚಂಡ ಗೆಲುವು ಸಾಧಿಸಿದ ಆಸೀಸ್

ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್‌ (ಪಿಎಸ್ಎಲ್) ನಲ್ಲಿ ಪೇಶಾವರ್ ಝಲ್ಮಿ ತಂಡದ ನಾಯಕತ್ವ ವಹಿಸಿಕೊಳ್ಳುವುದರಿಂದ ಬಾಬರ್ ಅಜಂ ದೂರವಿರಬೇಕು ಎಂದು ಶಾಹಿದ್ ಅಫ್ರಿದಿ ಒತ್ತಾಯಿಸಿದ್ದಾರೆ. ಬಾಬರ್ ಅಜಂ ಕರಾಚಿ ಕಿಂಗ್ಸ್‌ನೊಂದಿಗಿನ ತನ್ನ ಒಪ್ಪಂದವನ್ನು ಕೊನೆಗೊಳಿಸಿದರು ಮತ್ತು 2023ರ ಮಾರ್ಚ್‌ನಲ್ಲಿ ನಡೆಯಲಿರುವ ಪಿಎಸ್ಎಲ್‌ನ ಆವೃತ್ತಿಗಾಗಿ ಪೇಶಾವರ್ ಝಲ್ಮಿ ತಂಡದೊಂದಿಗೆ ಆಡಲು ಸಹಿ ಹಾಕಿದ್ದಾರೆ.

 ಆಡಿದ 7 ಪಂದ್ಯಗಳಲ್ಲಿ ಕೇವಲ 124 ರನ್‌

ಆಡಿದ 7 ಪಂದ್ಯಗಳಲ್ಲಿ ಕೇವಲ 124 ರನ್‌

28 ವರ್ಷದ ಬಾಬರ್ ಅಜಂ ವಿಶ್ವ ಕ್ರಿಕೆಟ್‌ನ ಪ್ರಮುಖ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಪಾಕಿಸ್ತಾನ ತಂಡದ ನಾಯಕ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಅಗ್ರ 3ರಲ್ಲಿ ಸ್ಥಾನ ಪಡೆದ ಏಕೈಕ ಆಟಗಾರ ಎನಿಸಿದ್ದಾರೆ. ಆದರೆ 2022ರ ಟಿ20 ವಿಶ್ವಕಪ್‌ನಲ್ಲಿ ಬಾಬರ್ ಅಜಂ ಬ್ಯಾಟಿಂಗ್ ಪ್ರದರ್ಶನವು ಚಿಂತೆಗೀಡು ಮಾಡಿದೆ.

ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಆಡಿದ 7 ಪಂದ್ಯಗಳಲ್ಲಿ ಕೇವಲ 93 ಸ್ಟ್ರೈಕ್‌ರೇಟ್‌ನಲ್ಲಿ ಮತ್ತು ಏಕೈಕ ಅರ್ಧಶತಕದೊಂದಿಗೆ 124 ರನ್‌ಗಳನ್ನು ಗಳಿಸಿದ್ದಾರೆ. ಇದು ಟಿ20 ಕ್ರಿಕೆಟ್‌ನಲ್ಲಿ ಪಾಕಿಸ್ತಾನ ತಂಡದಲ್ಲಿ ಅವರ ಬ್ಯಾಟಿಂಗ್ ಕ್ರಮಾಂಕವನ್ನು ಮಾಜಿ ಕ್ರಿಕೆಟಿಗರು ಪ್ರಶ್ನಿಸುತ್ತಿದ್ದಾರೆ.

 ಬಾಬರ್‌ ಅಜಂ ಕೆಲಸದ ಹೊರೆಯನ್ನು ಕಡಿಮೆ ಮಾಡಬೇಕು

ಬಾಬರ್‌ ಅಜಂ ಕೆಲಸದ ಹೊರೆಯನ್ನು ಕಡಿಮೆ ಮಾಡಬೇಕು

ಇದೇ ವೇಳೆ ಪಾಕಿಸ್ತಾನ ತಂಡದ ಉಪನಾಯಕರಾಗಿರುವ ಶಾದಾಬ್ ಖಾನ್, ಮೊಹಮ್ಮದ್ ರಿಜ್ವಾನ್ ಅಥವಾ ಶಾನ್ ಮಸೂದ್ ಅವರಂತಹ ಯುವ ಆಟಗಾರರು ಟಿ20 ತಂಡವನ್ನು ಮುನ್ನಡೆಸಬಹುದು ಮತ್ತು ಟಿ20 ಸ್ವರೂಪದಲ್ಲಿ ಬಾಬರ್‌ ಅಜಂ ಕೆಲಸದ ಹೊರೆಯನ್ನು ಕಡಿಮೆ ಮಾಡಬಹುದು ಎಂದು ಮಾಜಿ ಆಲ್‌ರೌಂಡರ್ ಶಾಹಿದ್ ಆಫ್ರಿದಿ ತಿಳಿಸಿದರು.

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಬಾಬರ್‌ ಅಜಂ ಅವರ ನಾಯಕತ್ವವನ್ನು ಟೀಕಿಸಲಾಗಿದೆ. ಸೆಮಿಫೈನಲ್ ತಲುಪಲು ಹೆಣಗಾಡಿದರು ಮತ್ತು ದಕ್ಷಿಣ ಆಫ್ರಿಕಾದ ಪ್ರಮಾದದಿಂದಾಗಿ ಅಂತಿಮ ನಾಲ್ಕರ ಘಟ್ಟ ತಲುಪಿದರು. ಇನ್ನು ವೈಯಕ್ತಿಕವಾಗಿ ಆರಂಭಿಕ ಸ್ಥಾನವನ್ನು ಬಿಟ್ಟುಕೊಡಲು ನಿರಾಕರಿಸಿದ ನಾಯಕ ಬಾಬರ್ ಅಜಂ, 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಹಿಂಜರಿದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

 ಇಂಗ್ಲೆಂಡ್ ವಿರುದ್ಧ ಸೋತು ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟ ಪಾಕ್

ಇಂಗ್ಲೆಂಡ್ ವಿರುದ್ಧ ಸೋತು ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟ ಪಾಕ್

ಇದೇ ಸಂದರ್ಭದಲ್ಲಿ ಮಾಜಿ ವೇಗದ ಬೌಲರ್ ವಾಸಿಂ ಅಕ್ರಮ್ ಅವರು ಪಿಎಸ್‌ಎಲ್‌ನಲ್ಲಿ ಕರಾಚಿ ಕಿಂಗ್ಸ್ ತಂಡಕ್ಕಾಗಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ವಿನಂತಿಸಿದಾಗ ಬಾಬರ್ ಅಜಂ ನಿರಾಕರಿಸಿದ್ದರು ಎಂದು ನೆನಪಿಸಿಕೊಂಡರು.

ಆಸ್ಟ್ರೇಲಿಯಾದಲ್ಲಿ ನಡೆದ 2022ರ ಟಿ20 ವಿಶ್ವಕಪ್‌ನ ಫೈನಲ್‌ ಹಂತಕ್ಕೆ ತಲುಪಿದ ಪಾಕಿಸ್ತಾನ ತಂಡ, ಮೆಲ್ಬೋರ್ನ್‌ನಲ್ಲಿ ನಡೆದ ಪ್ರಶಸ್ತಿ ಕಾಳಗದಲ್ಲಿ ಇಂಗ್ಲೆಂಡ್ ವಿರುದ್ಧ ಸೋತು ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು.

Story first published: Thursday, November 17, 2022, 21:29 [IST]
Other articles published on Nov 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X