For Quick Alerts
ALLOW NOTIFICATIONS  
For Daily Alerts
 

Babar Azam: ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್ಸ್‌ ರೀತಿ ಬ್ಯಾಟ್ ಮಾಡಿದ ಬಾಬರ್

ಚಾಂಪಿಯನ್ಸ್ ಟ್ರೋಫಿ 2025ರ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಪಾಕಿಸ್ತಾನ ತವರಿನಲ್ಲಿ ಮುಖಭಂಗ ಅನುಭವಿಸಿದೆ. ಪಾಕಿಸ್ತಾನ ಎದುರು ನ್ಯೂಜಿಲೆಂಡ್ 60 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟರ್ ಬಾಬರ್ ಅಜಮ್ ನಾಚಿಗೇಡಿನ ದಾಖಲೆಯನ್ನು ಮಾಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಸ್ ರೀತಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಬಾಬರ್ ಅಜಮನ್ ಅಪಹಾಸ್ಯಗೊಳಗಾಗಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 321 ರನ್‌ಗಳ ಗೆಲುವಿನ ಗುರಿಯನ್ನು ಪಾಕಿಸ್ತಾನಕ್ಕೆ ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ 260 ರನ್‌ಗಳಿಗೆ ಆಲೌಟಾಯಿತು. ಪಾಕಿಸ್ತಾನದ ಪರ ಅರ್ಧಶತಕ ಗಳಿಸಿದ ಬಾಬರ್ ಅಜಮ್ ಬೇಡದ ದಾಖಲೆಯನ್ನು ಸೃಷ್ಟಿಸಿದರು.

Babar Azam slowest half-century in ICC Champions Trophy history is record of shame

ನ್ಯೂಜಿಲೆಂಡ್ ವಿರುದ್ಧ ಆರಂಭಿಕನಾಗಿ ಬಾಬರ್ ಅಜಮ್ 90 ಎಸೆತಗಳಲ್ಲಿ 64 ರನ್ ಗಳಿಸಿದರು. 71.11 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಬಾಬರ್ ಅಜಮ್ 6 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು. ಇದರೊಂದಿಗೆ ಬಾಬರ್ ಅಜಮ್ ಹೆಸರಿಗೆ ಬೇಡದ ದಾಖಲೆಯೊಂದು ಸೇರ್ಪಡೆಯಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಅತ್ಯಂತ ನಿಧಾನಗತಿಯ ಅರ್ಧಶತಕ ಗಳಿಸಿದ ಪಾಕಿಸ್ತಾನದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಬಾಬರ್ ಅಜಮ್ ಪಾತ್ರರಾಗಿದ್ದಾರೆ. ಇದಲ್ಲದೆ, ಬಾಬರ್ ಅಜಮ್ ತಮ್ಮ ಸಹ ಆಟಗಾರ ಶೋಯೆಬ್ ಮಲಿಕ್ ಅವರ 16 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಭಾರತ ವಿರುದ್ಧ 2009ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಶೋಯೆಬ್ ಮಲಿಕ್ ನಿಧಾನಗತಿಯ ಅರ್ಧಶತಕ ಬಾರಿಸಿದ್ದರು.

ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನದ ಪರ ನಾಸಿರ್ ಜಮ್ಶೆಡ್ ಅತ್ಯಂತ ನಿಧಾನಗತಿಯ ಅರ್ಧಶತಕ ಗಳಿಸಿದ್ದಾರೆ. 2013 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ನಾಸಿರ್ ಜಮ್ಶೆಡ್ ವೆಸ್ಟ್ ಇಂಡೀಸ್ ವಿರುದ್ಧ 91 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ನಾಸಿರ್ ಜಮ್ಶೆಡ್ ನಂತರ, ಬಾಬರ್ ಅಜಮ್ ಮತ್ತು ಶೋಯೆಬ್ ಮಲಿಕ್ ಜಂಟಿಯಾಗಿ ಎರಡನೇ ಸ್ಥಾನದಲ್ಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಎರಡನೇ ಅತ್ಯಂತ ನಿಧಾನಗತಿಯ ಅರ್ಧಶತಕ ಗಳಿಸಿದ ದಾಖಲೆಯನ್ನು ಬಾಬರ್ ಅಜಮ್ ಮತ್ತು ಶೋಯೆಬ್ ಮಲಿಕ್ ಹೊಂದಿದ್ದಾರೆ. ಈ ಇಬ್ಬರೂ ಬ್ಯಾಟರ್‌ಗಳು 81 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ.

ಬುಧವಾರ ನಡೆದ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ಪರ ಆರಂಭಿಕ ಬ್ಯಾಟರ್ ವಿಲ್ ಯಂಗ್ ಮತ್ತು ನಾಯಕ ಟಾಮ್ ಲ್ಯಾಥಮ್ ಶತಕಗಳ ಸಿಡಿಸಿ ಸಂಭ್ರಮಿಸಿದರು. ಈ ಇಬ್ಬರ ಶತಕ ನೆರವಿನಿಂದ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಐದು ವಿಕೆಟ್ ನಷ್ಟಕ್ಕೆ 320 ರನ್ ಗಳಿಸಿತು. ವಿಲ್ ಯಂಗ್ 113 ಎಸೆತಗಳಲ್ಲಿ 107 ರನ್ ಗಳಿಸಿದರೆ, ಲ್ಯಾಥಮ್ ಅಜೇಯ 118 ರನ್ ಗಳಿಸಿದರು. ಮತ್ತೊಂದೆಡೆ ಗ್ಲೆನ್ ಫಿಲಿಪ್ಸ್ 39 ಎಸೆತಗಳಲ್ಲಿ 61 ರನ್ ಗಳಿಸಿದರು.

ಪಾಕಿಸ್ತಾನ ಪರ ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್ ಮತ್ತು ಸೌದ್ ಶಕೀಲ್ ಬಿಗ್ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ಪರಿಣಾಮ ಆತಿಥೇಯ ಪಾಕಿಸ್ತಾನ ತಂಡ 47.2 ಓವರ್‌ಗಳಲ್ಲಿ 260 ರನ್‌ಗಳಿಗೆ ಆಲೌಟಾಯಿತು. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಫಖರ್ ಜಮಾನ್ 41 ಎಸೆತಗಳಲ್ಲಿ ಕೇವಲ 24 ರನ್ ಗಳಿಸಲು ಶಕ್ತರಾದರು. ಇದರೊಂದಿಗೆ ನ್ಯೂಜಿಲೆಂಡ್ ತಂಡ ಪಾಕಿಸ್ತಾನವನ್ನು 60 ರನ್‌ಗಳಿಂದ ಸೋಲಿಸಿತು.

Story first published: Thursday, February 20, 2025, 11:58 [IST]
Other articles published on Feb 20, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+