ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್ ಸಂಭವದ ಬಗ್ಗೆ ಭರವಸೆ ವ್ಯಕ್ತಪಡಿಸಿದ ಬಾಬರ್ ಅಝಮ್

Babar Azam Statement About T20 World cup

ಇಂಗ್ಲೆಂಡ್ ವಿರುದ್ಧ ಸರಣಿಗಾಗಿ ಪ್ರವಾಸ ಕೈಗೊಂಡಿರುವ ಪಾಕಿಸ್ತಾನದ ಸೀಮಿತ ಓವರ್‌ಗಳ ನಾಯಕ ಬಾಬರ್ ಅಝಮ್ ಟಿ20 ವಿಶ್ವಕಪ್ ಸಂಭವದ ಬಗ್ಗೆ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ನಿಗದಿತ ಸಮಯದಲ್ಲೇ ಟಿ20 ವಿಶ್ವಕಪ್ ನಡೆಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಟಿ20 ಕ್ರಿಕೆಟ್‌ನ ನಂಬರ್1 ಬ್ಯಾಟ್ಸ್‌ಮನ್ ಎನಿಸಿರುವ ಬಾಬರ್ ಅಝಮ್ "ಟಿ20 ವಿಶ್ವಕಪ್ ನಿಗದಿತ ಸಮಯಕ್ಕೇ ನಡೆದರೆ ನಮ್ಮ ತಂಡ ಅತ್ಯುತ್ತಮ ಪ್ರದರ್ಶನವನ್ನು ನೀಡುವ ವಿಶ್ವಾಸ ನನಗೆ ಇದೆ ಎಂದು ಬಾಬರ್ ಅಜಮ್ ಹೇಳಿದ್ದಾರೆ. ನಾನೊಬ್ಬ ಆಟಗಾರನಾಗಿ ಈ ವರ್ಷವೇ ಕ್ರಿಕೆಟ್ ವಿಶ್ವಕಪ್ ನಡೆಯುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಕ್ರಿಕೆಟ್‌ ಜಗತ್ತಿನಲ್ಲಿ ನಿರ್ಮಾಣವಾಗಿರುವ ಬಲು ಅಪರೂಪದ 5 ದಾಖಲೆಗಳು!ಕ್ರಿಕೆಟ್‌ ಜಗತ್ತಿನಲ್ಲಿ ನಿರ್ಮಾಣವಾಗಿರುವ ಬಲು ಅಪರೂಪದ 5 ದಾಖಲೆಗಳು!

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕನಾಗಿ ನಾನು ವಿಶ್ವಕಪ್ ಮುಮದೂಡುವುದನ್ನು ನಾನು ಬಯಸುವುದಿಲ್ಲ. ಪಾಕಿಸ್ತಾನ ಕ್ರಿಕೆಟ್ ತಮಡವನ್ನು ನಾನು ಇದೇ ಮೊದಲ ಬಾರಿಗೆ ಮುನ್ನಡೆಸುತ್ತಿದ್ದೇನೆ. ಆದರೆ ಈ ಬಗ್ಗೆ ಅಂತಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಐಸಿಸಿಗೆ ಇದೆ ಎಂದು ಬಾಬರ್ ಅಝಮ್ ಹೇಳಿದ್ದಾರೆ.

ಇನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ಕಠಿಣ ಅಭ್ಯಾಸದಲ್ಲಿರುವ ಬಾಬರ್ ಅಝಮ್ ಅತ್ಯುತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ. ಟಿ20 ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನಿಡುವ ಮೂಲಕ ಪಾಕಿಸ್ತಾನ ತಂಡದ ಶ್ರೇಯಾಂಕವನ್ನು ಉತ್ತಮಗೊಳಿಸುವ ಪ್ರಯತ್ನವನ್ನು ನಡೆಸುತ್ತೇವೆ ಎಂದು ಅಝಮ್ ಹೇಳಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್

2016ರ ಏಪ್ರಿಲ್ ತಿಂಗಳಿನಲ್ಲಿ ಚುಟುಕು ಕ್ರಿಕೆಟ್ ಮಾದರಿಯಲ್ಲಿ ಮೊದಲ ಸ್ಥಾನಕ್ಕೇರಿದ ಪಾಕಿಸ್ತಾನ ತಂಡ ಮುಂದಿನ 27 ತಿಂಗಳು ಟಿ20 ಮಾದರಿಯ ನಂಬರ್ 1 ತಂಡವಾಗಿ ಮೆರೆದಿತ್ತು. ಆದರೆ ಕಳೆದ ವರ್ಷ ಚುಟುಕು ಮಾದರಿಯಲಕ್ಕಿ ಅತ್ಯಂತ ಕೆಟ್ಟ ಪ್ರದರ್ಶನವನ್ನು ಪಾಕ್ ತಂಡ ನೀಡಿತ್ತು. 2019ರಲ್ಲಿ ಆಡಿದ 12 ಟಿ20 ಪಂದ್ಯಗಳಲ್ಲಿ ಪಾಕಿಸ್ತಾನ 8 ಪಂದ್ಯಗಳಲ್ಲಿ ಸೋಲನ್ನು ಕಂಡು ಶ್ರೇಯಾಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

Story first published: Sunday, July 5, 2020, 11:28 [IST]
Other articles published on Jul 5, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X