For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ ಸೋಲು ಹಿನ್ನೆಲೆ: ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿದ ಪಾಕ್ ನಾಯಕ ಬಾಬರ್ ಅಜಂ

ಈ ಬಾರಿಯ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಸೆಮಿಫೈನಲ್‌ಗೆ ಪ್ರವೇಶ ಪಡೆಯಲು ವಿಫಲವಾಗಿದ್ದು ಲೀಗ್ ಹಂತದಿಂದಲೇ ನಿರ್ಗಮಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಕ್ರಿಕೆಟ್ ತಮಡದಲ್ಲಿ ದೊಡ್ಡ ಬದಲಾವಣೆಯಾಗಿದ್ದು ತಂಡದ ನಾಯಕತ್ವದಿಂದ ಬಾಬರ್ ಅಜಂ ಕೆಳಗಿಳಿದಿದ್ದಾರೆ. ಎಲ್ಲಾ ಮೂರು ಮಾದರಿಯಿಂದಲೂ ಬಾಬರ್ ಅಜಂ ನಾಯಕತ್ವವನ್ನು ತೊರೆದಿದ್ದಾರೆ.

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಲೀಗ್ ಹಂತದಲ್ಲಿ ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಹೀಗಾಗಿ ಸೆಮಿಫೈನಲ್ ಪ್ರವೇಶ ಪಡೆಯುವ ಅವಕಾಶವನ್ನು ಕಳೆದುಕೊಂಡಿದೆ. ಇದರ ಬೆನ್ನಲ್ಲೇ ಬಾಬರ್ ಅಜಂ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಈ ಬಗ್ಗೆ ಬಾಬರ್ ಅಜಂ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

Babar Azam Steps Down as Pakistans Captain Across All Formats

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಬಾಬರ ಅಜಂ ನಾಯಕತ್ವದ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಹಾಗೂ ಅಲ್ಲಿನ ಅಭಿಮಾನಿಗಳು ಸಾಕಷ್ಟು ಟೀಕೆಯನ್ನು ವ್ಯಕ್ತಪಡಿಸಿದ್ದರು. ತಂಡವನ್ನು ಸರಿಯಾದ ದಿಕ್ಕಿನಲ್ಲಿ ಮುನ್ನಡೆಸಲು ವಿಫಕವಾಗುತ್ತಿದ್ದಾರೆ ಎಂದು ಕೂಗು ಬೇಳಿ ಬಂದಿದ್ದು ನಾಯಕತ್ವ ಬದಲಾವಣೆಗೆ ಒತ್ತಡಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಬಾಬರ್ ಅಜಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

"2019ರಲ್ಲಿ ಪಾಕಿಸ್ತಾನ ತಂಡವನ್ನು ಮುನ್ನಡೆಸಬೇಕು ಎಂದು ಕರೆ ಬಂದ ಕ್ಷಣ ನನಗೆ ಬಹಳ ಚೆನ್ನಾಗಿ ನೆನಪಿದೆ. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಮೈದಾನದ ಒಳಗೆ ಹಾಗೂ ಹೊರಗೆ ಸಾಕಷ್ಟು ಎರಿಳಿತಗಳನ್ನು ಕಂಡಿದ್ದೇನೆ. ಆದರೆ ಕ್ರಿಕೆಟ್‌ ಜಗತ್ತಿನಲ್ಲಿ ಪಾಕಿಸ್ತಾನದ ಹೆಮ್ಮೆ ಮತ್ತು ಗೌರವವನ್ನು ಉಳಿಸುವ ಗುರಿ ನನ್ನದಾಗಿತ್ತು. ಇಡೀ ತಂಡದ ಒಟ್ಟಾರೆ ಪರಿಶ್ರಮದ ಕಾರಣದಿಂದಾಗಿ ವೈಟ್‌ಬಾಲ್ ಕ್ರಿಕೆಟ್‌ನಲ್ಲಿ ನಂಬರ್ 1 ಸ್ಥಾನಕ್ಕೇರಲು ಸಾಧ್ಯವಾಗಿತ್ತು. ಈ ಸಂದರ್ಭದಲ್ಲಿ ನಾನು ಪಾಕಿಸ್ತಾನ ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ಧನ್ಯವಾದವನ್ನು ಸಲ್ಲಿಸುತ್ತಿದ್ದು ಅವರಿಂದ ಅದ್ಭುತವಾದ ಬೆಂಬಲ ದೊರೆತಿದೆ" ಎಂದು ನಾಯಕತ್ವ ತೊರೆಯುವ ನಿರ್ಧಾರ ಪ್ರಕಟಿಸುವ ಸಂದರ್ಭದಲ್ಲಿ ಬಾಬರ್ ಅಜಂ ಪ್ರತಿಕ್ರಿಯೆ ನೀಡಿದ್ದಾರೆ.

ಮುಂದುವರಿದು ಅವರು "ಇಂದು ನಾನು ಪಾಕಿಸ್ತಾನ ಕ್ರಿಕೆಟ್ ತಂಡದ ಎಲ್ಲಾ ಮಾದರಿಯಿಂದಲೂ ನಾಯಕತ್ವವನ್ನು ತೊರೆಯುತ್ತಿದ್ದೇನೆ. ಇದು ಕಠಿಣವಾದ ನಿರ್ಧಾರ ಆದರೆ ಇದು ಸೂಕ್ತವಾದ ಸಮಯ ಎಂದು ನನಗೆ ಅನಿಸುತ್ತಿದೆ. ಓರ್ವ ಆಟಗಾರನಾಗಿ ನಾನು ಎಲ್ಲಾ ಮಾದರಿಯಲ್ಲಿಯೂ ಮುಂದುವರಿಯುತ್ತೇನೆ. ನಾನು ಹೊಸ ನಾಯಕ ಮತ್ತು ತಂಡಕ್ಕೆ ಬೆಂಬಲವಾಗಿ ನಿಲ್ಲಲಿದ್ದೇನೆ. ಈ ಜವಾಬ್ಧಾರಿ ನೀಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನಾನು ತುಣಬು ಹರದಯದಿಂದ ಧನ್ಯವಾದ ಹೇಳುತ್ತೇನೆ" ಎಂದು ವಿದಾಯ ಪತ್ರದಲ್ಲಿ ಬರೆದುಕೊಂಡಿದ್ದಾರೆ ಬಾಬರ್ ಅಜಂ.

Story first published: Wednesday, November 15, 2023, 20:01 [IST]
Other articles published on Nov 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+