Pak Vs Eng T20: ಬಾಬರ್ ಅಜಂ ಶತಕ, ವಿಕೆಟ್ ಕಳೆದುಕೊಳ್ಳದೆ 200 ರನ್ ಚೇಸ್ ಮಾಡಿ ಗೆದ್ದ ಪಾಕಿಸ್ತಾನ
ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ದಾಖಲೆಯ ವಿಜಯ ಸಾಧಿಸಿದೆ. ಕರಾಚಿಯಲ್ಲಿ ನಡೆದ ಟಿ20 ಪಂದ್ಯದಲ್ಲಿ ಬಾಬರ್ ಅಜಂ ಪಡೆ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಬಾಬರ್ ಅಜಂ 66 ಎಸೆತಗಳಲ್ಲಿ ಅಜೇಯ 110 ರನ್ ಗಳಿಸಿದರೆ, ಮೊಹಮ್ಮದ್ ರಿಜ್ವಾನ್ 51 ಎಸೆತಗಳಲ್ಲಿ ಅಜೇಯ 88 ರನ್ ಗಳಿಸುವ ಮೂಲಕ ಜಯ ಸಾಧಿಸಿ ಸರಣಿಯನ್ನು 1-1 ಅಂತರದಲ್ಲಿ ಸಮಬಲಗೊಳಿಸಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಫಿಲಿಪ್ ಸಾಲ್ಟ್ ಮತ್ತು ಅಲೆಕ್ಸ್ ಹೇಲ್ಸ್ ಮೊದಲ ವಿಕೆಟ್‌ಗೆ 42 ರನ್ ಕಲೆ ಹಾಕಿ ಉತ್ತಮ ಆರಂಭ ಒದಗಿಸಿದರು. ಆದರೆ ನಂತರ ಬಂದ ಡೇವಿಡ್ ಮಲನ್ ಶೂನ್ಯಕ್ಕೆ ಔಟಾಗುವ ಮೂಲಕ ಇಂಗ್ಲೆಂಡ್ ಕೊಂಚ ಹಿನ್ನಡೆ ಅನುಭವಿಸಿತು. ನಂತರ ಬಂದ ಬೆನ್ ಡಕೆಟ್ 22 ಎಸೆತಗಳಲ್ಲಿ 43 ರನ್ ಗಳಿಸಿದರು.
ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಹೆನ್ರಿ ಬ್ರೂಕ್ 19 ಎಸೆತಗಳಲ್ಲಿ 31 ರನ್ ಗಳಿಸಿದರೆ. ನಾಯಕ ಮೊಯಿನ್ ಅಲಿ 23 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ 53 ರನ್ ಗಳಿಸಿದರು. ಇಂಗ್ಲೆಂಡ್ ತಂಡ ಅಂತಿಮವಾಗಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 199 ರನ್ ಗಳಿಸಿತು.
ರಿಜ್ವಾನ್, ಬಾಬರ್ ಅಜಂ ದಾಖಲೆಯ ಜೊತೆಯಾಟ

ಬೃಹತ್ ಮೊತ್ತವನ್ನು ಬೆನ್ನತ್ತಿದ ಪಾಕಿಸ್ತಾನ ತಂಡಕ್ಕೆ ಈ ಮೊತ್ತ ಎಲ್ಲಿಯೂ ಸವಾಲಿನದ್ದು ಎನಿಸಲೇ ಇಲ್ಲ. ಆರಂಭದಲ್ಲಿ ರಿಜ್ವಾನ್ ಪ್ರತಿ ಓವರ್ ನಲ್ಲಿ ಬೌಂಡರಿಗಳನ್ನು ಗಳಿಸುತ್ತಿದ್ದರೆ ಬಾಬರ್ ಅಜಂ ಮಾತ್ರ ಎಚ್ಚರಿಕೆಯ ಆಟವಾಡಿದರೆ. ಮೊದಲು ನಿಧಾನಗತಿಯ ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಾಯಕ ನಂತರ ಇಂಗ್ಲೆಂಡ್ ಬೌಲರ್ ಗಳನ್ನು ಬೆಂಡೆತ್ತಿದರು.
ಅಂತಿಮವಾಗಿ 19.3 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಪಾಕಿಸ್ತಾನ 203 ರನ್ ಗಳಿಸಿ ವಿಜಯ ಸಾಧಿಸಿತು. ಈ ಮೂಲಕ ಮೊದಲ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು.
ಎರಡೂ ತಂಡಗಳ ಪ್ಲೇಯಿಂಗ್ IX
ಪಾಕಿಸ್ತಾನ : ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ , ಹೈದರ್ ಅಲಿ, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಉಸ್ಮಾನ್ ಖಾದಿರ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ಶಾನವಾಜ್ ದಹಾನಿ
ಇಂಗ್ಲೆಂಡ್ : ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್ , ಡೇವಿಡ್ ಮಲಾನ್, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ (ನಾಯಕ), ಸ್ಯಾಮ್ ಕರ್ರಾನ್, ಡೇವಿಡ್ ವಿಲ್ಲಿ, ಲ್ಯೂಕ್ ವುಡ್, ಆದಿಲ್ ರಶೀದ್, ಲಿಯಾಂ ಡಾಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications