Pakistan Squad For T20 World Cup 2024: ಟಿ20 ವಿಶ್ವಕಪ್‌ಗೆ ಪಾಕಿಸ್ತಾನ ಬಲಿಷ್ಠ ತಂಡ ಪ್ರಕಟ
ಮುಂಬರುವ ಬಹು ನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 15 ಸದಸ್ಯರ ಬಲಿಷ್ಠ ಪಾಕಿಸ್ತಾನ ತಂಡವನ್ನು ಶುಕ್ರವಾರ, ಮೇ 24ರಂದು ಪ್ರಕಟಿಸಿದೆ.
ಅಬ್ದುಲ್ ರಜಾಕ್, ಅಸದ್ ಶಫೀಕ್, ಬಾಬರ್ ಅಜಮ್, ಬಿಲಾಲ್ ಅಫ್ಜಲ್, ಗ್ಯಾರಿ ಕರ್ಸ್ಟನ್, ಮೊಹಮ್ಮದ್ ಯೂಸುಫ್ ಮತ್ತು ವಹಾಬ್ ರಿಯಾಜ್ ಅವರು ಶುಕ್ರವಾರ ಎರಡು ಗಂಟೆಗಳ ಕಾಲ ಸಭೆ ನಡೆಸಿದ ನಂತರ ತಂಡವನ್ನು ಘೋಷಿಸಲಾಗಿದೆ.

ಜೂನ್ 2ರಿಂದ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ಸಹ-ಆತಿಥ್ಯದಲ್ಲಿ ಪ್ರಾರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವನ್ನು ಅನುಭವಿ ಬಾಬರ್ ಅಜಂ ಮುನ್ನಡೆಸಲಿದ್ದಾರೆ.
15 ಆಟಗಾರರ ಪೈಕಿ ಅಬ್ರಾರ್ ಅಹ್ಮದ್, ಅಜಮ್ ಖಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಸೈಮ್ ಅಯೂಬ್ ಮತ್ತು ಉಸ್ಮಾನ್ ಖಾನ್ ಅವರು ತಮ್ಮ ಚೊಚ್ಚಲ ಟಿ20 ವಿಶ್ವಕಪ್‌ಗೆ ಆಯ್ಕೆಯಾಗಿದ್ದಾರೆ.
ನಿವೃತ್ತಿಯಿಂದ ಯು-ಟರ್ನ್ ಪಡೆದ ಮೊಹಮ್ಮದ್ ಅಮೀರ್ ಮತ್ತು ಇಮಾದ್ ವಾಸಿಮ್ ಕೂಡ ಪಾಕಿಸ್ತಾನ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. 2009ರಲ್ಲಿ ಪ್ರಶಸ್ತಿ ಗೆದ್ದ ತಂಡದ ಭಾಗವಾದ ನಂತರ, ಮೊಹಮ್ಮದ್ ಅಮೀರ್ ತನ್ನ ಎರಡನೇ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಆಡಲಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಇದೇ ವೇಳೆ ಮೊಹಮ್ಮದ್ ಅಮೀರ್ ಮತ್ತು ಇಮಾದ್ ವಾಸಿಮ್ ಅವರು ಕೊನೆಯ ಬಾರಿಗೆ ಕ್ರಮವಾಗಿ 2016 ಮತ್ತು 2021 ಪಂದ್ಯಾವಳಿಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇತರ ಎಂಟು ಆಟಗಾರರು 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.
"ಇದು ಯುವ ಮತ್ತು ಅನುಭವದ ಮಿಶ್ರಣವನ್ನು ಹೊಂದಿರುವ ಅತ್ಯಂತ ಪ್ರತಿಭಾವಂತ ಮತ್ತು ಸಮತೋಲಿತ ತಂಡವಾಗಿದೆ. ಈ ಆಟಗಾರರು ಕೆಲವು ಸಮಯದಿಂದ ಒಟ್ಟಿಗೆ ಆಡುತ್ತಿದ್ದಾರೆ ಮತ್ತು ಮುಂದಿನ ತಿಂಗಳ ಟಿ20 ಪಂದ್ಯಾವಳಿಗೆ ಉತ್ತಮವಾಗಿ ಸಿದ್ಧರಾಗಿದ್ದಾರೆ," ಎಂದು ಪಿಸಿಬಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
"ವೇಗಿ ಹ್ಯಾರಿಸ್ ರೌಫ್ ಅವರು ಸಂಪೂರ್ಣವಾಗಿ ಫಿಟ್ ಆಗಿದ್ದಾರೆ ಮತ್ತು ನೆಟ್ಸ್‌ನಲ್ಲಿ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಮುಂಬರುವ ಪಂದ್ಯಗಳಲ್ಲಿ ಅವರು ಮೇಲ್ಮುಖ ಪಥವನ್ನು ಮುಂದುವರಿಸುತ್ತಾರೆ ಎಂದು ನಾವು ವಿಶ್ವಾಸ ಹೊಂದಿದ್ದೇವೆ. ಏಕೆಂದರೆ ರೌಫ್ ಟಿ20 ವಿಶ್ವಕಪ್‌ನಲ್ಲಿ ಇತರ ಸ್ಟ್ರೈಕ್ ಬೌಲರ್‌ಗಳೊಂದಿಗೆ ಪ್ರಮುಖ ಪಾತ್ರವನ್ನು ವಹಿಸುತ್ತಾರೆ," ಎಂದು ಪಿಸಿಬಿ ಹೇಳಿದೆ.
2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಪ್ರಾರಂಭವಾದಾಗಿನಿಂದ ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವು ಅತ್ಯಂತ ಪ್ರಭಾವಶಾಲಿ ದಾಖಲೆಗಳನ್ನು ಹೊಂದಿದೆ.
ಪಾಕಿಸ್ತಾನ ತಂಡವು 2009ರ ಟಿ20 ವಿಶ್ವಕಪ್ ಪಂದ್ಯಾವಳಿಯನ್ನು ಯೂನಿಸ್ ಖಾನ್ ನಾಯಕತ್ವದಲ್ಲಿ ಗೆದ್ದಿತು ಮತ್ತು ಶೋಯೆಬ್ ಮಲಿಕ್ (2007) ಮತ್ತು ಬಾಬರ್ ಅಜಂ (2022) ನಾಯಕತ್ವದಲ್ಲಿ ಎರಡು ಬಾರಿ ಫೈನಲ್ ತಲುಪಿತ್ತು. 2010, 2012 ಮತ್ತು 2021ರಲ್ಲಿ ಸೆಮಿಫೈನಲ್ ಹಂತಕ್ಕೆ ಮುನ್ನಡೆದಿತ್ತು.
2024ರ ಐಸಿಸಿ ಟಿ20 ವಿಶ್ವಕಪ್‌ಗೆ ಪಾಕಿಸ್ತಾನ ತಂಡ ಪ್ರಕಟ
ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಸೈಮ್ ಅಯೂಬ್, ಫಖರ್ ಜಮಾನ್, ಉಸ್ಮಾನ್ ಖಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಶಾದಾಬ್ ಖಾನ್, ಮೊಹಮ್ಮದ್ ಅಮೀರ್, ಶಾಹೀನ್ ಶಾ ಆಫ್ರಿದಿ, ನಸೀಮ್ ಶಾ, ಅಬ್ಬಾಸ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications