BAN vs AFG: ಬಾಂಗ್ಲಾದೇಶ vs ಅಫ್ಘಾನಿಸ್ತಾನ 2ನೇ ಏಕದಿನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಶನಿವಾರ, ಜುಲೈ 8ರಂದು ಚಟ್ಟೋಗ್ರಾಮ್‌ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ಮತ್ತು ಪ್ರವಾಸಿ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.
ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟ್ಟನ್ ದಾಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಹಶ್ಮತುಲ್ಲಾ ಶಹಿದಿ ನಾಯಕತ್ವದ ಅಫ್ಘಾನಿಸ್ತಾನ ತಂಡ ಮೊದಲು ಬ್ಯಾಟಿಂಗ್ ಆರಂಭಿಸಲಿದೆ.

ಮೊದಲ ಏಕದಿನ ಪಂದ್ಯದಲ್ಲಿ ಡಿಎಲ್ಎಸ್ ವಿಧಾನದ ಮೂಲಕ 17 ರನ್‌ಗಳ ಗೆಲುವು ಸಾಧಿಸಿದ ನಂತರ ಅಫ್ಘಾನಿಸ್ತಾನ ತಂಡ ಸರಣಿಯಲ್ಲಿ ಪ್ರಸ್ತುತ 1-0 ಅಂತರದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ.
ಗಮನಾರ್ಹವಾಗಿ, ಮೊದಲ ಪಂದ್ಯದ ನಂತರ ಬಾಂಗ್ಲಾದೇಶ ನಾಯಕ ತಮೀಮ್ ಇಕ್ಬಾಲ್ ಆರಂಭದಲ್ಲಿ ನಿವೃತ್ತಿ ಘೋಷಿಸಿದ್ದರಿಂದ, ಉಳಿದ ಏಕದಿನ ಪಂದ್ಯಗಳಿಗೆ ಲಿಟ್ಟನ್ ದಾಸ್ ನಾಯಕತ್ವ ವಹಿಸಲಿದ್ದಾರೆ. ಆದರೆ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ತಮೀಮ್ ಇಕ್ಬಾಲ್ ತನ್ನ ನಿರ್ಧಾರವನ್ನು ವಾಪಸ್ ಪಡೆದರು. ಒಂದೂವರೆ ತಿಂಗಳ ವಿಶ್ರಾಂತಿ ಪಡೆಯಲಿದ್ದಾರೆ.
ಬಾಂಗ್ಲಾದೇಶ vs ಅಫ್ಘಾನಿಸ್ತಾನ ಆಡುವ 11ರ ಬಳಗ
ಬಾಂಗ್ಲಾದೇಶ: ಮೊಹಮ್ಮದ್ ನೈಮ್, ಲಿಟ್ಟನ್ ದಾಸ್ (ನಾಯಕ), ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋಡ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್.
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಫಜಲ್ಹಕ್ ಫಾರೂಕಿ, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ಸಲೀಮ್ ಶಫಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications