
ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಅಫ್ಘಾನಿಸ್ತಾನ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಮೂರನೇ ಏಕದಿನ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಚಟ್ಟೋಗ್ರಾಮ್‌ನಲ್ಲಿ ನಡೆದ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಅಫ್ಘಾನಿಸ್ತಾನ ಆತಿಥೇಯರಿಗೆ ಸರಣಿಯಲ್ಲಿ ಮೊದಲ ಸೋಲಿನ ರುಚಿ ತೋರಿಸುವಲ್ಲಿ ಯಶಸ್ವಿಯಾಗಿದೆ.
ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ಉತ್ತಮ ಆರಂಭವನ್ನು ಪಡೆಯಿತು. ಆದರೆ ಮಧ್ಯಮ ಕ್ರಮಾಂಕದ ಆಟಗಾರರು ಸಂಪೂರ್ಣ ವೈಫಲ್ಯ ಅನುಭವಿಸಿದ ಕಾರಣ 192 ರನ್‌ಗಳ ಸಾಧಾರಣ ಮೊತ್ತವನ್ನು ಪೇರಿಸಲಷ್ಟೇ ಬಾಂಗ್ಲಾದೇಶಕ್ಕೆ ಸಾಧ್ಯವಾಯಿತು. ಆರಂಭಿಕ ಆಟಗಾರ ಲಿಟನ್ ದಾಸ್ ಈ ಪಂದ್ಯದಲ್ಲಿಯೂ ಮಿಂಚಿದ್ದು 86 ರನ್‌ಗಳಿಸಿ ಮಿಂಚಿದರು.
ಇನ್ನು ಬೌಲಿಂಗ್‌ನಲ್ಲಿ ಅಫ್ಘಾನಿಸ್ತಾನದ ಪರವಾಗಿ ರಶೀದ್ ಖಾನ್ ಭರ್ಜರಿ ಪ್ರದರ್ಶನ ನೀಡಿದರು. ರಶೀದ್ ಖಾನ್ ತಮ್ಮ 10 ಓವರ್‌ಗಳ ಬೌಲಿಂಗ್ ಕೋಟಾದಲ್ಲಿ ಕೇವಲ 37 ರನ್ ನೀಡಿ ಮೂರು ವಿಕೆಟ್ ಸಂಪಾದಿಸಿದರು. ಅನುಭವಿ ನಬಿ ಎರಡು ವಿಕೆಟ್ ಪಡೆದರು. ಈ ಮೂಲಕ ಬಾಂಗ್ಲಾದೇಶಕ್ಕೆ ಆಘಾತ ನೀಡಿದರು.
ಸ್ಕೋರ್‌ಕಾರ್ಡ್ ಹೀಗಿದೆ
ಇನ್ನು ಬಾಂಗ್ಲಾದೇಶ ತಂಡ ನೀಡಿದ 193 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡಕ್ಕೆ ಉತ್ತಮ ಆರಂಭ ದೊರೆಯಿತು. ಆರಂಭಿಕ ಆಟಗಾರ ರೆಹ್ಮಾನುಲ್ಲಾ ಗುರ್ಬಾಜ್ ಹಾಗೂ ರಿಯಾಜ್ ಹಸನ್ ಮೊದಲ ವಿಕೆಟ್‌ಗೆ 79 ರನ್‌ಗಳ ಜೊತೆಯಾಟವನ್ನು ನೀಡಿದರು. ರಿಯಾಜ್ ಹಸನ್ 35 ರನ್‌ಗಳಿಸಿ ವಿಕೆಟ್ ಕಳೆದುಕೊಂಡ ಬಳಿಕ ರಹಮತ್ ಶಾ ಜೊತೆಯಾದರು. ಪಂದ್ಯದ ಅಂತಿಮ ಹಂತದಲ್ಲಿ ವಿಕೆಟ್ ಕಳೆದುಕೊಂಡ ಶಾ 47 ರನ್‌ಗಳಿಸಿದ್ದರು.
ನಂತರ ನಾಯಕ ಹಶ್ಮತುಲ್ಲಾ ಶಾಹಿದಿ ಗುರ್ಬಾಜ್ ವಿಕೆಟ್ ಕಳೆದುಕೊಂಡರೂ ನಾಲ್ಕನೇ ವಿಕೆಟ್‌ಗೆ ಬಾಂಗ್ಲಾದೇಶ ನೀಡಿದ ಗುರಿಯನ್ನು ಬೆನ್ನಟ್ಟಿ ತಲುಪಿವಲ್ಲಿ ಅಪ್ಘಾನಿಸ್ತಾಮ ಯಶಸ್ವಿಯಾಯಿತು. ಈ ಮೂಲಕ ಅಫ್ಘಾನಿಸ್ತಾನ ತಂಡ ಐದು ಪಂದ್ಯಗಳ ಸರಣಿಯಲ್ಲಿ 1-2 ಅಂತರದಿಂದ ಸರಣಿಯ ಹಿನ್ನಡೆ ಅಂತರವನ್ನು ಕಡಿಮೆಗೊಳಿಸಿದೆ. ಇನ್ನು ಈ ಪಂದ್ಯದಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹ್ಮನುಲ್ಲಾಹ್ ಗರ್ಬಾಜ್ ಭರ್ಜರಿ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
ಬಾಂಗ್ಲಾದೇಶ ಆಡುವ ಬಳಗ: ಲಿಟನ್ ದಾಸ್, ತಮೀಮ್ ಇಕ್ಬಾಲ್ (ನಾಯಕ), ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಯಾಸಿರ್ ಅಲಿ, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್, ಶೋರಿಫುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್
ಬೆಂಚ್: ಮಹಮ್ಮದುಲ್ ಹಸನ್ ಜಾಯ್, ನಸುಮ್ ಅಹ್ಮದ್, ನಜ್ಮುಲ್ ಹೊಸೈನ್ ಶಾಂಟೊ, ಎಬಾಡೋತ್ ಹೊಸೈನ್
ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಗುಲ್ಬದಿನ್ ನೈಬ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಯಾಮಿನ್ ಅಹ್ಮದ್ಜಾಯ್, ಫಜಲ್ಹಕ್ ಫಾರೂಕಿ
ಬೆಂಚ್ : ರಿಯಾಜ್ ಹಸನ್, ಫರೀದ್ ಅಹ್ಮದ್ ಮಲಿಕ್, ಶಾಹಿದುಲ್ಲಾ ಕಮಾಲ್, ಇಕ್ರಮ್ ಅಲಿಖಿಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್