
ಬಾಂಗ್ಲಾದೇಶ ಹಾಗೂ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯ ಕೂಡ ಅಂತ್ಯವಾಗಿದ್ದು ಆತಿಥೆಉ ಬಾಂಗ್ಲಾದೇಶ ವಿರುದ್ಧ ಇಂಗ್ಲೆಂಡ್ ನೆರಡನೆ ಪಂದ್ಯದಲ್ಲಿಯೂ ಗೆಲುವು ಸಾಧಿಸಿದೆ. ಈ ಗೆಲುವಿನಿಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಇಂಗ್ಲೆಂಡ್ ಒಂದು ಪಂದ್ಯ ಬಾಕಿಯಿರುವಂತೆಯೇ 2-0 ಅಂತರದಿಂದ ವಶಕ್ಕೆ ಪಡೆದುಕೊಂಡಿದೆ. ಈ ಮೂಲಕ ಆತಿಥೆಯ ಬಾಂಗ್ಲಾದೇಶ ಬರೊಬ್ಬರಿ 7 ವರ್ಷಗಳ ಬಳಿಕ ತವರಿನಲ್ಲಿ ಏಕದಿನ ಸರಣಿಯನ್ನು ಸೋತಂತಾಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಬಾಂಗ್ಲಾದೇಶ ಮೊದಲಿಗೆ ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿತ್ತು. ಢಾಕಾದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಆರಂಭಿಕ ಆಟಗಾರ ಜೇಸನ್ ರಾಯ್ ಅಮೋಗ ಶತಕ ಸಿಡಿಸಿ ಅಬ್ಬರಿಸಿದರೆ ನಾಯಕ ಜೋಸ್ ಬಟ್ಲರ್ 76 ರನ್‌ಗಳ ಕೊಡುಗೆ ನಿಡಿ ಮಿಂಚಿದರು. ಅಲ್ಲದೆ ಅಂತಿಮ ಹಂತದಲ್ಲಿ ಮೊಯೀನ್ ಅಲಿ ಹಾಗೂ ಸ್ಯಾಮ್ ಕರನ್ ಕೂಡ ಇಂಗ್ಲೆಂಡ್ ತಂಡದ ಬೃಹತ್ ಮೊತ್ತಕ್ಕೆ ಕಾರಣವಾದರು. ನಿಗದಿತ 50 ಓವರ್‌ಗಳಲ್ಲಿ ಇಂಗ್ಲೆಂಡ್ 326 ರನ್‌ಗಳನ್ನು ಗಳಿಸಿತ್ತು.
ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ಹೀನಾಯ ಪ್ರದರ್ಶನ ನೀಡಿದೆ. ಆರಂಭದಲ್ಲಿಯೇ ಬಾಂಗ್ಲಾ ಪಡೆ ಮುಗ್ಗರಿಸಿದ್ದು 9 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಯಕ ತಮೀಮ್ ಇಕ್ಬಾಲ್ ಹಾಗೂ ಶಕೀಬ್ ಅಲ್ ಹಸನ್ ಹೋರಾಟದ ಪ್ರದರ್ಶನ ನೀಡಿದರಾದರೂ ಅದರಿಂದ ಹೆಚ್ಚಿನ ಲಾಭವಾಗಲಿಲ್ಲ. ಶಕೀಬ್ ಅಲ್ ಹಸನ್ 58 ರನ್‌ಗಳಿಸಿ ತಂಡದ ಪರ ಹೆಚ್ಚಿನ ಸ್ಕೋರ್ ಗಳಿಸಿದ ಆಟಗಾರ ಎನಿಸಿಕೊಂಡರು.
ಇನ್ನು ಅಂತಿಮವಾಗಿ ಬಾಂಗ್ಲಾದೇಶ ತಂಡ ಈ ಪಂದ್ಯದಲ್ಲಿ ಕೇವಲ 194 ರನ್ ಮಾತ್ರವೇ ಗಳಿಸಲು ಸಾಧ್ಯವಾಯಿತು. ಹೀಗಾಗಿ ಈ ಪಂದ್ಯದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡ 132 ರನ್‌ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಏಕದಿನ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ 3 ವಿಕೆಟ್‌ಗಳ ಅಂತರದ ರೋಚಕ ಗೆಲುವು ಸಾಧಿಸಿತ್ತು.
ಬಾಂಗ್ಲಾದೇಶ: ತಮೀಮ್ ಇಕ್ಬಾಲ್ (ನಾಯಕ), ಲಿಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಶಾಕಿಬ್ ಅಲ್ ಹಸನ್, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ತೈಜುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್
ಬೆಂಚ್: ತೌಹಿದ್ ಹೃದಯ್, ಹಸನ್ ಮಹಮೂದ್, ಎಬಾಡೋಟ್ ಹೊಸೈನ್,
ಇಂಗ್ಲೆಂಡ್: ಜೇಸನ್ ರಾಯ್, ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಜೇಮ್ಸ್ ವಿನ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಆದಿಲ್ ರಶೀದ್, ಸಾಕಿಬ್ ಮಹಮೂದ್, ಮಾರ್ಕ್ ವುಡ್
ಬೆಂಚ್: ಕ್ರಿಸ್ ವೋಕ್ಸ್, ಜೋಫ್ರಾ ಆರ್ಚರ್, ರೀಸ್ ಟೋಪ್ಲಿ, ರೆಹಾನ್ ಅಹ್ಮದ್