Ban vs Eng T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್: ವೈಟ್‌ವಾಶ್ ಮಾಡುವ ಉತ್ಸಾಹದಲ್ಲಿ ಬಾಂಗ್ಲಾದೇಶ

ಬಾಂಗ್ಲಾದೇಶದ ವಿರುದ್ಧದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಎರಡು ಪಂದ್ಯಗಳಲ್ಲಿ ಸೋತು ಸರಣಿಯನ್ನು ಕಳೆದುಕೊಂಡಿರುವ ಇಂಗ್ಲೆಂಡ್ ಕೊನೆಯ ಪಂದ್ಯವನ್ನು ಗೆಲ್ಲುವ ಯೋಜನೆ ಹೊಂದಿದ್ದರೆ, ಬಾಂಗ್ಲಾದೇಶ ಸರಣಿ ವೈಟ್‌ವಾಶ್ ಮಾಡುವ ಉತ್ಸಾಹದಲ್ಲಿದೆ.
ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಹಾಲಿ ವಿಶ್ವ ಚಾಂಪಿಯನ್ ಬಲಿಷ್ಠ ಇಂಗ್ಲೆಂಡ್ ತಂಡ ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ಮುಖಭಂಗ ಅನುಭವಿಸಿದೆ.
ಹಾಲಿ ಟಿ20 ವಿಶ್ವಚಾಂಪಿಯನ್ನರಿಗೆ ಬಾಂಗ್ಲಾದೇಶ ಮೊದಲ ಎರಡು ಟಿ20 ಪಂದ್ಯಗಳಲ್ಲಿ ಆಘಾತ ನೀಡಿದೆ. ಭಾನುವಾರ ಮೀರ್‌ಪುರದ ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದಿದ್ದ ಎರಡನೇ ಪಂದ್ಯದಲ್ಲಿ 4 ವಿಕೆಟ್‌ಗಳ ಜಯ ಸಾಧಿಸಿದ ಬಾಂಗ್ಲಾದೇಶ 2-0 ಅಂತರದಲ್ಲಿ ಸರಣಿಯನ್ನು ಗೆದ್ದಿದೆ. ಕೊನೆಯ ಪಂದ್ಯವನ್ನಾದರೂ ಗೆದ್ದು ಅವಮಾನದಿಂದ ತಪ್ಪಿಸಿಕೊಳ್ಳುವ ಯೋಜನೆಯಲ್ಲಿದೆ ಇಂಗ್ಲೆಂಡ್.
ಸ್ಫೋಟಕ ಬ್ಯಾಟರ್ ಗಳು ಬಾಂಗ್ಲಾದೇಶದಲ್ಲಿ ರನ್ ಗಳಿಸಲು ಪರದಾಡುತ್ತಿರುವುದು ತಂಡಕ್ಕೆ ದೊಡ್ಡ ತಲೆನೋವಾಗಿದೆ. ಬೌಲಿಂಗ್ ವಿಭಾಗ ಉತ್ತಮವಾಗಿದ್ದರು, ಸವಾಲಿನ ಮೊತ್ತ ಕಲೆಹಾಕುವಲ್ಲಿ ಬ್ಯಾಟರ್ ಗಳು ಸೋತಿದ್ದಾರೆ. ಮೂರನೇ ಪಂದ್ಯದಲ್ಲಿ ಇದನ್ನು ಸರಿಪಡಿಸಿಕೊಂಡರೆ ಮಾತ್ರ ಇಂಗ್ಲೆಂಡ್ ಗೆಲುವು ಕಾಣಬಹುದಾಗಿದೆ.

ಮತ್ತೊಂದು ಬೌಲಿಂಗ್ ಸ್ನೇಹಿ ಪಿಚ್
ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು ಮತ್ತೊಂದು ಬೌಲಿಂಗ್ ಸ್ನೇಹಿ ಪಿಚ್ ನಿರ್ಮಾಣ ಮಾಡಲಾಗಿದೆ. ಸ್ಪಿನ್ನರ್ ಗಳು ಹೆಚ್ಚಿನ ಲಾಭ ಪಡೆಯುವ ಸಾಧ್ಯತೆ ಇದೆ. ಇಂಗ್ಲೆಂಡ್ ಬ್ಯಾಟರ್ ಗಳು ಆರಂಭದಲ್ಲಿ ಎಚ್ಚರಿಕೆಯಿಂದ ಆಡಿದರೆ ಮಾತ್ರ ನಂತರ ಸ್ಕೋರ್ ಗಳಿಸಲು ಸಾಧ್ಯವಾಗುತ್ತದೆ.
ಮೂರನೇ ಟಿ20 ಪಂದ್ಯಕ್ಕಾಗಿ ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡಗಳನ್ನೇ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಸಲಾಗಿದೆ.

ಉಭಯ ತಂಡಗಳ ಆಡುವ ಬಳಗ
ಇಂಗ್ಲೆಂಡ್ : ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಜೋಸ್ ಬಟ್ಲರ್ (ನಾಯಕ ಮತ್ತು ವಿಕೆಟ್ ಕೀಪರ್), ಬೆನ್ ಡಕೆಟ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್.
ಬಾಂಗ್ಲಾದೇಶ : ಲಿಟನ್ ದಾಸ್ (ವಿಕೆಟ್ ಕೀಪರ್), ರೋನಿ ತಾಲುಕ್ದಾರ್, ನಜ್ಮುಲ್ ಹೊಸೈನ್ ಶಾಂಟೋ, ತೌಹಿದ್ ಹೃದಯೋಯ್, ಶಾಕಿಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಹಸನ್ ಮಹಮೂದ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications