Ban vs Eng T20: ಇಂಗ್ಲೆಂಡ್ ಸರಣಿ ಸೋತ ಬಳಿಕ ಮೈಕಲ್ ವಾನ್‌ರನ್ನು ಟ್ರೋಲ್ ಮಾಡಿದ ವಾಸಿಂ ಜಾಫರ್

2022ರ ಟಿ20 ವಿಶ್ವಕಪ್ ಗೆದ್ದಿದ್ದ ಇಂಗ್ಲೆಂಡ್ ತಂಡ ಬಾಂಗ್ಲಾದೇಶದಲ್ಲಿ ಭಾರಿ ಮುಖಭಂಗ ಅನುಭವಿಸಿದೆ, ಮೂರು ಪಂದ್ಯಗಳ ಟಿ20 ಸರಣಿಯನ್ನು ಬಾಂಗ್ಲಾದೇಶ ವೈಟ್‌ವಾಶ್ ಮಾಡುವ ಮೂಲಕ ಇತಿಹಾಸ ನಿರ್ಮಿಸಿದೆ. ಸೋತ ಇಂಗ್ಲೆಂಡ್ ತಂಡದ ವಿರುದ್ಧ ಭಾರಿ ಟೀಕೆ ವ್ಯಕ್ತವಾಗುತ್ತಿದೆ.
ಭಾರತ ತಂಡದ ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್‌ರನ್ನು ಹೀನಾಯವಾಗಿ ಟ್ರೋಲ್ ಮಾಡಿದ್ದಾರೆ. ಇವರಿಬ್ಬರೂ ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಾಲೆಳೆದುಕೊಳ್ಳುವ ಮೂಲಕ ಸುದ್ದಿಯಾಗಿದ್ದರು.
ಇಂಗ್ಲೆಂಡ್ ಬಾಂಗ್ಲಾದೇಶದ ವಿರುದ್ಧ ಸೋತಿದ್ದನ್ನೇ ನೆಪವಾಗಿಟ್ಟುಕೊಂಡು ವಾಸಿಂ ಜಾಫರ್ ಮೈಕೆಲ್ ವಾನ್‌ರನ್ನು ಕೆಣಕಿದ್ದಾರೆ. ಟ್ವಿಟರ್ ನಲ್ಲಿ ಬಾಂಗ್ಲಾದೇಶದ ಜರ್ಸಿಯನ್ನು ಧರಿಸಿದ ಫೋಟೋವನ್ನು ಹಂಚಿಕೊಂಡಿರುವ ಅವರು, "ಹಲೋ ಮೈಕೆಲ್ ವಾನ್, ಬಹಳ ಸಮಯದಿಂದ ನೋಡಲಿಲ್ಲ" ಎಂದು ಶೀರ್ಷಿಕೆ ನೀಡಿದ್ದು, ಮಾಜಿ ಇಂಗ್ಲೆಂಡ್ ಆಟಗಾರನನ್ನು ಉಲ್ಲೇಖಿಸಿದ್ದಾರೆ.
ವಾಸಿಂ ಜಾಫರ್ ಬಾಂಗ್ಲಾದೇಶ ಅಂಡರ್ 19 ತಂಡದ ಮುಖ್ಯ ಕೋಚ್ ಆಗಿ ಕೆಲಸ ಮಾಡಿದ್ದಾರೆ. ಸದ್ಯ ಅವರು ಐಪಿಎಲ್ ತಂಡವಾದ ಪಂಜಾಬ್ ಕಿಂಗ್ಸ್‌ಗೆ ಬ್ಯಾಟಿಂಗ್ ಕೋಚ್ ಆಗಿ ಕೆಲಸ ಮಾಡುತ್ತಿದ್ದಾರೆ.

ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ
ತವರಿನಲ್ಲಿ ಬಾಂಗ್ಲಾದೇಶ ಅತ್ಯುತ್ತಮ ಗೆಲುವಿನ ಸರಾಸರಿಯನ್ನು ಹೊಂದಿದೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾದಂತಹ ದಿಗ್ಗಜ ತಂಡಗಳ ವಿರುದ್ಧದ ಸರಣಿಯನ್ನು ಗೆದ್ದುಕೊಂಡಿದೆ. ಈಗ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ವೈಟ್ ವಾಶ್ ಮಾಡುವ ಮೂಲಕ ಇತಿಹಾಸ ನಿರ್ಮಿಸಿದೆ. ಇದಕ್ಕೂ ಮುನ್ನ ನಡೆದ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಲ್ಲಿ ಗೆಲುವು ಸಾಧಿಸಿತ್ತು.
ಸ್ಫೋಟಕ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಇಂಗ್ಲೆಂಡ್ ಬಾಂಗ್ಲಾದೇಶ ಬೌಲಿಂಗ್ ವಿರುದ್ಧ ರನ್ ಗಳಿಸಲು ಪರದಾಡಿತು. ಮೂರು ಪಂದ್ಯಗಳಲ್ಲಿ ಇಂಗ್ಲೆಂಡ್ ಬ್ಯಾಟರ್ ಗಳು ವಿಫಲವಾದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಇಂಗ್ಲೆಂಡ್ ಟಿ20 ಮಾದರಿಯಲ್ಲಿ ವಿಫಲವಾಗಿದ್ದು ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ.

ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿದ ಜೋಸ್ ಬಟ್ಲರ್
ಬಾಂಗ್ಲಾದೇಶದ ವಿರುದ್ಧದ ಟಿ20 ಸರಣಿಯನ್ನು ಸೋತ ಬಳಿಕ ಮಾತನಾಡಿರುವ ನಾಯಕ ಜೋಸ್ ಬಟ್ಲರ್ ಬೇರ ವ್ಯಕ್ತಪಡಿಸಿದ್ದಾರೆ. "ಸರಣಿ ಸೋತಿರುವುದು ನಿಜಕ್ಕೂ ನಿರಾಸೆ ತಂದಿದೆ, ಬಾಂಗ್ಲಾದೇಶ ತಂಡಕ್ಕೆ ಅಭಿನಂದನೆಗಳು, ಅವರು ಉತ್ತಮವಾಗಿ ಆಡಿದರು. ಕೊನೆಯ ಪಂದ್ಯದಲ್ಲಿ ಉತ್ತಮವಾಗಿ ಆಡಿದರು, ಕೊನೆಯ ಹಂತದಲ್ಲಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿದೆವು." ಎಂದು ಅವರು ಹೇಳಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications