ರಿಷಭ್ ಪಂತ್‌ಗೆ ತನ್ನ ಜವಾಬ್ಧಾರಿಯ ಬಗ್ಗೆ ಅರಿವಿದೆ: ಟೀಮ್ ಇಂಡಿಯಾ ಬೌಲಿಂಗ್ ಕೋಚ್

ಟೀಮ್ ಇಂಡಿಯಾದ ಯುವ ಆಟಗಾರ ರಿಷಭ್ ಪಂತ್ ಮತ್ತೆ ಟೆಸ್ಟ್ ಸರಣಿಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಈಗಾಗಲೇ ಅಭ್ಯಾಸವನ್ನು ಆರಂಭಿಸಿರುವ ಪಂತ್ ತಮ್ಮ ನೆಚ್ಚಿನ ಮಾದರಿಯಾದ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲು ಸಿದ್ದವಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಟೀಮ್ ಇಂಡಿಯಾದ ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಪಂತ್ ಬಗ್ಗೆ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ರಿಷಭ್ ಪಂತ್ ಅವರಿಗೆ ಮ್ಯಾನೇಜ್‌ಮೆಂಟ್ ಆಟದ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಲು ಯಾವ ಕಾರಣಕ್ಕೂ ಹೇಳುವುದಿಲ್ಲ ಎಂದಿದ್ದಾರೆ.
ರಿಷಬ್ ಪಂತ್ ಅವರ ಸಹಜ ಶೈಲಿಯಾದ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನವನ್ನು ಬದಲಾಯಿಸುವಂತೆ ಮ್ಯಾನೇಜ್‌ಮೆಂಟ್ ಅವರಿಗೆ ಸಲಹೆ ನೀಡುವುದಿಲ್ಲ. ಪಂತ್‌ಗೆ ತಂಡದಲ್ಲಿ ತಮ್ಮ ಜವಾಬ್ಧಾರಿ ಏನು ಎಂಬುದರ ಬಗ್ಗೆ ಚೆನ್ನಾಗಿ ಅರಿವಿದೆ. ಹಾಗೂ ತಂಡ ಅವರಿಂದ ಏನನ್ನು ನಿರೀಕ್ಷಿಸುತ್ತದೆ ಎಂಬುದು ಅವರಿಗೆ ತಿಳಿದಿದೆ ಎಂದಿದ್ದಾರೆ ಭಾರತ ತಂಡದ ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ

ಪಂತ್ ಜೊತೆಗೆ ವಿಶೇಷ ಚರ್ಚೆಯಿಲ್ಲ
"ನಾವು ರಿಷಭ್ ಪಂತ್ ಜೊತೆಗೆ ವಿಶೇಷವಾಗಿ ಯಾವುದನ್ನೂ ಚರ್ಚಿಸಿಲ್ಲ. ಅವರ ಆಟದ ಬಗ್ಗೆ ನಮಗೆ ಅರಿವಿದೆ. ಅವರ ಆಟದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಲ್ಲಾ ಮಾದರಿಗೂ ಅವರು ಸಿದ್ಧವಾಗುವುದೇ ಹೀಗೆ. ತಂಡದಲ್ಲಿ ತಮ್ಮ ಪಾತ್ರದ ಬಗ್ಗೆ ಅವರಿಗೆ ಸ್ಪಷ್ಟವಾಗಿ ಅರಿವಿದೆ. ಅವರಿಗೆ ತಂಡ ತಮ್ಮಿಂದ ಏನನ್ನು ನಿರೀಕ್ಷಿಸುತ್ತಿದೆ ಎಂಬುದು ಅರಿವಿರುವ ಕಾರಣ ಯಾವ ರೀತಿ ಆಟಬೇಕು ಎಂಬ ವಿಚಾರವಾಗಿ ಮಾತುಕತೆಗಳು ನಡೆದೇ ಇಲ್ಲ" ಎಂದು ಪಂದ್ಯಕ್ಕೂ ಮುನ್ನಾ ದಿನ ಮಾಧ್ಯಮಗಳ ಜೊತೆಗೆ ಮಾತನಾಡಿದ ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಹೇಳಿದ್ದಾರೆ.

ಏಕದಿನ ತಂಡದಿಂದ ಹೊರಗುಳಿದಿದ್ದ ಪಂತ್
ರಿಷಭ್ ಪಂತ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಬಳಗವನ್ನು ಸೇರಿಕೊಂಡಿದ್ದು ಅಭ್ಯಾಸವನ್ನು ನಡೆಸಿದ್ದಾರೆ. ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿಗೆ ಪಂತ್ ಆರಂಭದಲ್ಲಿ ಆಯ್ಕೆಯಾಗಿದ್ದರು ಕೂಡ ಸರಣಿಯ ಆರಂಭದ ಕೊನೆಯ ಕ್ಷಣದಲ್ಲಿ ಅವರನ್ನು ತಂಡದಿಂದ ಬಿಡುಗಡೆಗೊಳಿಸಲಾಗಿತ್ತು. ಇದಕ್ಕೆ ಕಾರಣವೇನು ಎಂಬುದು ಅಧಿಕೃತವಾಗಿ ಬಹಿರಂಗವಾಗಿಲ್ಲ. ಇದೀಗ ಟೆಸ್ಟ್ ಸರಣಿಯ ಹಿನ್ನೆಲೆಯಲ್ಲಿ ಮತ್ತೆ ತಂಡವನ್ನು ಕೂಡಿಕೊಂಡಿದ್ದಾರೆ ರಿಷಭ್ ಪಂತ್.

ಕೆಎಲ್ ರಾಹುಲ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಸಜ್ಜು
ಕೆಎಲ್ ರಾಹುಲ್ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಲಿದ್ದು ಅಭಿಮನ್ಯು ಈಶ್ವರನ್ ಅವರನ್ನು ಮೀಸಲು ಆಟಗಾರನನ್ನಾಗಿ ನೇಮಿಸಲಾಗಿದೆ. ಇನ್ನು ಮೊಹಮ್ಮದ್ ಶಮಿ ಹಾಗೂ ರವೀಂದ್ರ ಜಡೇಜಾ ಈ ಸರಣಿಗೆ ಅಲಭ್ಯವಾಗಿರುವ ಕಾರಣ ನವ್‌ದೀಪ್ ಸೈನಿ ಹಾಗೂ ಸೌರಭ್ ಕುಮಾರ್‌ಗೆ ಅವಕಾಶ ದೊರೆತಿದೆ. ಇನ್ನು ಜಯ್‌ದೇವ್ ಉನಾದ್ಕಟ್ ಅವರು 12 ವರ್ಷಗಳ ಬಳಿಕ ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜಯದೇವ್ ಉನದ್ಕತ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications