ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾವನ್ನು ಹಿಂದಿಕ್ಕಿದ ಬಾಂಗ್ಲಾದೇಶ

ಬೆಂಗಳೂರು, ಸೆಪ್ಟೆಂಬರ್ 3: ಟಿ20 ಕ್ರಿಕೆಟ್‌ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಾ ತವರಿನಲ್ಲಿ ಎದುರಾಳಿಗಳಿಗೆ ಆಘಾತ ನೀಡುತ್ತಿದೆ ಬಾಂಗ್ಲಾದೇಶ ಕ್ರಿಕೆಟ್ ತಂಡ. ಈಗ ಐಸಿಸಿ ರ್ಯಾಂಕಿಂಗ್‌ನಲ್ಲಿಯೂ ಬಾಂಗ್ಲಾದೇಶ ಮಹತ್ವದ ಸಾಧನೆ ಮಾಡಿದೆ. ಚುಟುಕು ಕ್ರಿಕೆಟ್‌ನ ಶ್ರೇಯಾಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿರುವ ಬಾಂಗ್ಲಾದೇಶ ಆರನೇ ಸ್ಥಾನಕ್ಕೇರಿದೆ. 240 ಅಂಕ ಗಳಿಸಿರುವ ಆಸ್ಟ್ರೇಲಿಯಾ ತಂಡವನ್ನು 241 ಅಂಕಗಳನ್ನು ಗಳಿಸುವ ಮೂಲಕ ಬಾಂಗ್ಲಾದೇಶ ಏಳನೇ ಸ್ಥಾನಕ್ಕೆ ತಳ್ಳಿದೆ.

ಸದ್ಯ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ವಿರುದ್ಧ ತವರಿನಲ್ಲಿ ಟಿ20 ಸರಣಿಯಲ್ಲಿ ಭಾಗಿಯಾಗಿರುವ ಬಾಂಗ್ಲಾದೇಶ ಈ ಸರಣಿಯಲ್ಲಿ ಸತತ ಎರಡನೇ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಬಾಂಗ್ಲಾದ್ಏಶ 2-0 ಅಂತರದಿಮದ ಮುನ್ನಡೆಯಲ್ಲಿದೆ. ಇಂದು ನಡೆದ ಎರಡನೇ ಪಂದ್ಯದಲ್ಲಿಯೂ 4 ರನ್‌ಗಳಿಂದ ಗೆಲುವು ಸಾಧಿಸಿ ಈ ಸಾಧನೆ ಮಾಡಿದೆ ಮಹ್ಮದುಲ್ಲಾ ನೇತೃತ್ವದ ಬಾಂಗ್ಲಾದೇಶ ತಂಡ. ಇದಕ್ಕೂ ಮುನ್ನ ಸರಣಿಯ ಮೊದಲ ಪಂದ್ಯದಲ್ಲಿಯೂ ನ್ಯೂಜಿಲೆಂಡ್ ತಂಡವನ್ನು ಕೇವಲ 60 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಭರ್ಜರಿ ಜಯವನ್ನು ದಾಖಲಿಸಿತ್ತು.

'ಅತಿ ಕೆಟ್ಟ ಪದಗಳಿಂದ ಈ ತಂಡದ ಎಲ್ಲಾ ಆಟಗಾರರು ನನ್ನನ್ನು ನಿಂದಿಸಿದ್ದರು'; ಕಹಿ ಘಟನೆ ನೆನೆದ ಸೆಹ್ವಾಗ್'ಅತಿ ಕೆಟ್ಟ ಪದಗಳಿಂದ ಈ ತಂಡದ ಎಲ್ಲಾ ಆಟಗಾರರು ನನ್ನನ್ನು ನಿಂದಿಸಿದ್ದರು'; ಕಹಿ ಘಟನೆ ನೆನೆದ ಸೆಹ್ವಾಗ್

ನ್ಯೂಝಿಲೆಂಡ್ ವಿರುದ್ಧ ಗೆದ್ದ ಬಾಂಗ್ಲಾದೇಶ
ಢಾಕಾದ ಶೇರ್‌ ಎ ಬಾಂಗ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ಮೊದಲಿಗೆ ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್‌ಗಳಲ್ಲಿ 141 ರನ್‌ಗಳನ್ನು ಗಳಿಸಿತು. ಆರಂಭಿಕ ಆಟಗಾರರಾದ ಮಹಮ್ಮದ್ ನಯೀಮ್, ಲಿಟನ್ ದಾಸ್ ಹಾಗೂ ನಾಯಕ ಮಹಮ್ಮದುಲ್ಲಾ ಅವರ 30+ ರನ್‌ಗಳ ಕೊಡುಗೆಯಿಂದ ಬಾಂಗ್ಲಾದೇಶ ತಂಡ ಉತ್ತಮ ಮೊತ್ತವನ್ನು ದಾಖಲಿಸಿತು. ನಯೀಮ್ 39 ರನ್‌ಗಳಿಸಿದರೆ, ಲಿಟನ್ ದಾಸ್ 33 ಹಾಗೂ ನಾಯಕ ಮಹಮ್ಮದುಲ್ಲಾ 37 ರನ್‌ಗಳ ಕೊಡುಗೆಯನ್ನು ನೀಡಿದರು. ಈ ಮೂಲಕ ಆರು ವಿಕೆಟ್ ಕಳೆದುಕೊಂಡ ಬಾಂಗ್ಲಾದೇಶ ನ್ಯೂಜಿಲೆಂಡ್‌ಗೆ 142 ರನ್‌ಗಳ ಗುರಿಯನ್ನು ನೀಡಿತ್ತು.

ಬಾಂಗ್ಲಾದೇಶ ನೀಡಿದ ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಈ ಪಂದ್ಯದಲ್ಲಿಯೂ ಆರಂಭದಿಂದಲೇ ಆಘಾತವನ್ನು ಅನುಭವಿಸಿತು. ಯುವ ಆಟಗಾರರಿಂದ ದಿಟ್ಟ ಪ್ರತ್ಯುತ್ತರ ದೊರೆಯಲಿಲ್ಲ. ಆದರೆ ನಾಯಕ ಟಾಮ್ ಲಿಥಮ್ ಅಕ್ಷರಶಃ ಏಕಾಂಗಿ ಹೋರಾಟವನ್ನು ನಡೆಸಿ ಪಂದ್ಯವನ್ನು ಗೆಲುವಿನ ಸನಿಹಕ್ಕೆ ತಂದಿಟ್ಟರು. ಆದರೆ ಮತ್ತೊಂದು ತುದಿಯಲ್ಲಿ ಬೆಂಬಲ ದೊರೆಯದ ಕಾರಣದಿಂದಾಗಿ ಗೆಲುವು ಕೇವಲ 4 ರನ್‌ಗಳ ಅಂತರದಿಂದ ಕೈತಪ್ಪಿತು. ನಿಗದಿತ 20 ಓವರ್‌ಗಳಲ್ಲಿ ನ್ಯೂಜಿಲೆಂಡ್ ತಂಡ 5 ವಿಕೆಟ್ ಕಳೆದುಕೊಂಡು 137 ರನ್‌ಗಳನ್ನು ಗಳಿಸಿ ಸೋಲು ಕಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 0-2 ಅಂತರದಿಂದ ಹಿನ್ನೆಡೆಯನ್ನು ಅನುಭವಿಸಿದೆ.

ಗೆಲ್ಲಲೇಬೇಕಾದ ಒತ್ತಡದಲ್ಲಿ ನ್ಯೂಜಿಲೆಂಡ್:
ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಮೂರನೇ ಪಂದ್ಯ ಭಾನುವಾರ ಶೇರ್ ಬಾಂಗ್ಲಾ ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆರಂಭಿಕ ಎರಡು ಪಂದ್ಯಗಳನ್ನು ಕೂಡ ಸೋತಿರುವ ಕಾರಣ ಸರಣಿಯನ್ನು ವಶಕ್ಕೆ ಪಡೆಯಬೇಕಾದರೆ ಈ ಪಂದ್ಯವನ್ನು ನ್ಯೂಜಿಲೆಂಟ್ ತಂಡ ಗೆಲ್ಲೇಬೇಕಿದೆ. ಹೀಗಾಗಿ ಕೀವಿಸ್ ಪಡೆಯ ಮೇಲೆ ಒತ್ತಡ ಹೆಚ್ಚಾಗಿದೆ.

ಬಾಂಗ್ಲಾದೇಶ ತವರಿನಲ್ಲಿ ನೀಡುತ್ತಿರುವ ಈ ಪ್ರದರ್ಶನ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ. ಟಿ20 ವಿಶ್ವಕಪ್ ಸನಿಹದಲ್ಲಿರುವ ಈ ಸಂದರ್ಭದಲ್ಲಿ ಬಾಂಗ್ಲಾದೇಶ ತಂಡ ನಿಡುತ್ತಿರುವ ಈ ಪ್ರದರ್ಶನ ಅದರ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸುವುದರಲ್ಲಿ ಅನುಮಾನವಿಲ್ಲ.

ಆಸ್ಟ್ರೇಲಿಯಾ ವಿರುದ್ಧವೂ ಭಾರೀ ಗೆಲುವು ಸಾಧಿಸಿದ್ದ ಬಾಂಗ್ಲಾದೇಶ

ಇನ್ನು ಬಾಂಗ್ಲಾದೇಶ ತಂಡ ಇದಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ವಿರುದ್ಧವೂ ಅಮೋಘ ಗೆಲುವು ಸಾಧಿಸಿದೆ. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಬಾಂಗ್ಲಾದೇಶ 4-1 ಅಂತರದಿಂದ ಐತಿಹಾಸಿಕವಾಗಿ ಗೆದ್ದುಕೊಂಡಿತ್ತು. ಈ ಸರಣಿಯ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೇವಲ 62 ರನ್‌ಗಳಿಗೆ ಕಟ್ಟಿಹಾಕಿತ್ತು ಬಾಂಗ್ಲಾ ಪಡೆ. ಇದೀಗ ನ್ಯೂಜಿಲೆಂಡ್ ತಂಡದ ವಿರುದ್ಧವೂ ಇದೇ ರೀತಿಯ ಪ್ರದರ್ಶನ ನೀಡುತ್ತಿದೆ. ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಬಾಂಗ್ಲಾದೇಶ ಆಸಿಸ್ ತಂಡವನ್ನು ಇದೇ ಮೊದಲ ಬಾರಿಗೆ ಹಿಂದಿಕ್ಕಿದ ಸಾಧನೆ ಮಾಡಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Friday, September 3, 2021, 22:17 [IST]
Other articles published on Sep 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X