ತ್ರಿಕೋನ ಸರಣಿ: ಮತ್ತೆ ಪಾಕ್ ನೆರವಿಗೆ ಬಂದ ಬಾಬರ್- ರಿಜ್ವಾನ್: ಬಾಂಗ್ಲಾದೇಶಕ್ಕೆ ಮತ್ತೊಂದು ಸೋಲು

ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೇಲುಗೈ ಸಾಧಿಸಿದರೆ ಬಾಂಗ್ಲಾದೇಶ ತಂಡ ಟೂರ್ನಿಯಲ್ಲಿ ಒಂದೂ ಗೆಲುವು ಕಾಣದೆ ಹೀನಾಯವಾಗಿ ಶರಣಾಗಿದೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರೀ ಹಿನ್ನಡೆಯನ್ನು ಅನುಭವಿಸಿ ಕಾಲಿಡುತ್ತಿದೆ.
ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಪಾಕಿಸ್ತಾನಕ್ಕೆ ಸವಾಲಿನ ಮೊತ್ತವನ್ನು ಗುಡಿಯಾಗಿ ನೀಡುವಲ್ಲಿ ಯಶಸ್ವಿಯಾಗಿತ್ತು. 173 ರನ್‌ಗಳನ್ನು ಗಳಿಸಿದ ಬಾಂಗ್ಲಾದೇಶ ಪಾಕಿಸ್ತಾನಕ್ಕೆ ಉತ್ತಮ ಸವಾಲೊಡ್ಡಿತ್ತು. ಆದರೆ ಪಾಕಿಸ್ತಾನದ ಆರಂಭಿಕ ಆಟಗಾರರಾದ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಜೋಡಿ ಮತ್ತೊಂದು ಶತಕದ ಜೊತೆಯಾಟದಲ್ಲಿ ಭಾಗಿಯಾಗಿ ಭದ್ರವಾದ ಅಡಿಪಾಯವನ್ನು ಹಾಕಿದರು. ನಂತರ ಅಂತಿಮ ಓವರ್‌ನಲ್ಲಿ ಈ ಪಂದ್ಯವನ್ನು ಪಾಕಿಸ್ತಾನ ಗೆಲ್ಲುವಲ್ಲಿ ಯಶಸ್ವಿಯಾಯಿತು.

ಲಿಟನ್ ದಾಸ್, ಶಕೀಬ್ ಭರ್ಜರಿ ಆಟ
ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ ಆರಂಭಿಕ ಆಟಗಾರರು ವೈಫಲ್ಯವನ್ನು ಅನುಭವಿಸಿದ ಬಳಿಕ ಲಿಟನ್ ದಾಸ್ ಹಾಗೂ ನಾಯಕ ಶಕೀಬ್ ಅಲ್ ಹಸನ್ ಭರ್ಜರಿ ಬ್ಯಾಟಿಂಗ್ ನಡಸುವ ಮೂಲಕ ತಂಡಕ್ಕೆ ಆಸರೆಯಾದರು. ಲಿಟನ್ ದಾಸ್ 42 ಎಸೆತಗಳಲ್ಲಿ 69 ರನ್‌ಗಳಿಸಿದರೆ ನಾಯಕ ಶಕೀನ್ ಅಲ್ ಹಸನ್ 42 ಎಸೆತಗಳಲ್ಲಿ 68 ರನ್‌ಗಳನ್ನು ಕಲೆ ಹಾಕಿ ತಂಡಕ್ಕೆ ನೆರವಾದರು. ಈ ಜೋಡಿಯ ಭರ್ಜರಿ ಬ್ಯಾಟಿಂಗ್‌ನ ಕಾರಣದಿಂದಾಗಿ ಬಾಂಗ್ಲಾದೇಶ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್‌ಗಳನ್ನು ಗಳಿಸಿತು.

ಪಾಕ್ ಆರಂಭಿಕರ ಭರ್ಜರಿ ಆಟ
ಇನ್ನು ಬಾಂಗ್ಲಾದೇಶ ನೀಡಿದ ಈ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡಕ್ಕೆ ಅದ್ಭಯತ ಆರಂಬ ದೊರೆಯಿತು. ಆರಂಭಿಕರಾದ ಮೊಹಮ್ಮದ್ ರಿಜ್ವಾನ್ ಹಾಗೂ ನಾಯಕ ಬಾಬರ್ ಅಜಂ ಮೊದಲ ವಿಕೆಟ್‌ಗೆ ಭರ್ಜರಿ 101ರನ್‌ಗಳ ಜೊತೆಯಾಟ ನೀಡಿದರು. ನಾಯಕ ಅಜಂ 55 ರನ್‌ಗಳಿಸಿ ವಿಕೆಟ್ ಖಳೆದುಕೊಂಡರೆ ರಿಜ್ವಾನ್ 69 ರನ್‌ಗಳನ್ನು ಗಳಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ನವಾಜ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಪಾಕಿಸ್ತಾನದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. 20 ಎಸೆತಗಳಲ್ಲಿ 45 ರನ್ ಸಿಡಿಸಿದ ಪರಿಣಾಮವಾಗಿ ಪಾಕಿಸ್ತಾನ ಕೇವಲ ಒಂದು ಎಸೆತ ಬಾಕಿಯಿರುವಂತೆ ಗೆಲುವು ಸಾಧಿಸಲು ಯಶಸ್ವುಯಾಯಿತು.

ಫೈನಲ್‌ನಲ್ಲಿ ಮುಖಾಮುಖಿಯಾಗಲಿದೆ ಪಾಕ್-ನ್ಯೂಜಿಲೆಂಡ್
ಇನ್ನು ಈ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಲೀಗ್ ಹಂತದಲ್ಲಿ ಆಡಿದ ಎರಡು ಪಂದ್ಯಗಳ ಪೈಕಿ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆದ್ದು ಬೀಗಿತ್ತು. ಹೀಗಾಗಿ ಈ ಫೈನಲ್ ಪಂದ್ಯದ ಫಲಿತಾಂಶ ಸಾಕಷ್ಟು ಕುತೂಹಲ ಮೂಡಿಸಿದೆ. ಟಿ20 ವಿಶ್ವಕಪ್‌ಗೆ ಮುನ್ನ ನಡೆಯುತ್ತಿರುವ ಕಾರಣ ಈ ಸರಣಿಯ ಮೇಲೆ ಕುತೂಹಲ ಹೆಚ್ಚಾಗಿದೆ. ಫೈನಲ್ ಪಂದ್ಯ ಶುಕ್ರವಾರ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ ಕೀಪರ್), ಬಾಬರ್ ಅಜಮ್ (ನಾಯಕ), ಶಾನ್ ಮಸೂದ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಹೈದರ್ ಅಲಿ, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಮೊಹಮ್ಮದ್ ಹಸ್ನೇನ್
ಬೆಂಚ್: ಶಾನವಾಜ್ ದಹಾನಿ, ಮೊಹಮ್ಮದ್ ಹ್ಯಾರಿಸ್, ಹಾರಿಸ್ ರೌಫ್, ಖುಷ್ದಿಲ್ ಶಾ, ಶಾಹೀನ್ ಅಫ್ರಿದಿ, ಉಸ್ಮಾನ್ ಖಾದಿರ್
ಬಾಂಗ್ಲಾದೇಶ ಆಡುವ ಬಳಗ: ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ಮೊಹಮ್ಮದ್ ಸೈಫುದ್ದೀನ್, ಶೋರಿಫುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಹಸನ್ ಮಹಮೂದ್
ಬೆಂಚ್: ಮೊಸದ್ದೆಕ್ ಹೊಸೈನ್, ಎಬಾಡೋತ್ ಹೊಸೈನ್, ಸಬ್ಬೀರ್ ರೆಹಮಾನ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಮೆಹಿದಿ ಹಸನ್ ಮಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications