BAN vs WI 2ನೇ ಟೆಸ್ಟ್: ವೈಟ್‌ವಾಷ್ ಭೀತಿಯಲ್ಲಿ ಬಾಂಗ್ಲಾ; ಪಂದ್ಯದ ಟಾಸ್ ವರದಿ ಮತ್ತು ಲೈವ್ ಸ್ಕೋರ್ ಇಲ್ಲಿದೆ

ಶಕಿಬ್ ಅಲ್ ಹಸನ್ ನಾಯಕತ್ವದ ಬಾಂಗ್ಲಾದೇಶ ಸದ್ಯ ವೆಸ್ಟ್ ಇಂಡೀಸ್ ಪ್ರವಾಸವನ್ನು ಕೈಗೊಂಡಿದ್ದು ಕೆರಿಬಿಯನ್ನರ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ, 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಇತ್ತಂಡಗಳ ನಡುವೆ ಮೊದಲಿಗೆ ಟೆಸ್ಟ್ ಸರಣಿ ಆರಂಭವಾಗಿದ್ದು, ಈಗಾಗಲೇ ಮುಕ್ತಾಯಗೊಂಡಿರುವ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ವಿರುದ್ಧ ವೆಸ್ಟ್ ಇಂಡೀಸ್ ಗೆದ್ದು 1-0 ಅಂತರದಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.
ಮೊದಲನೇ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶ 103 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 245 ರನ್ ಕಲೆಹಾಕಿತ್ತು ಹಾಗೂ ವೆಸ್ಟ್ ಇಂಡೀಸ್ ಮೊದಲನೇ ಇನ್ನಿಂಗ್ಸ್‌ನಲ್ಲಿ 265 ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ನಷ್ಟಕ್ಕೆ 88 ರನ್ ಗಳಿಸಿ 7 ವಿಕೆಟ್‍ಗಳ ಜಯವನ್ನು ನಾಲ್ಕನೇ ದಿನವೇ ದಾಖಲಿಸಿತು.
ಹೀಗೆ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡು ಪ್ರಥಮ ಟೆಸ್ಟ್ ಪಂದ್ಯದಲ್ಲಿ ಮುಗ್ಗರಿಸಿರುವ ಶಕಿಬ್ ಅಲ್ ಹಸನ್ ಪಡೆ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಪುಟಿದೆದ್ದು ಪ್ರತ್ಯುತ್ತರ ನೀಡುವ ಯೋಜನೆಯಲ್ಲಿದ್ದರೆ, ಈಗಾಗಲೇ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ವೆಸ್ಟ್ ಇಂಡೀಸ್ ಈ ಪಂದ್ಯವನ್ನು ಗೆದ್ದು ಪ್ರವಾಸಿ ಬಾಂಗ್ಲಾದೇಶಕ್ಕೆ ವೈಟ್ ವಾಶ್ ಬಳಿಯುವ ತವಕದಲ್ಲಿದೆ. ಇತ್ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಇಂದು ( ಜೂನ್ 24 ) ಸೇಂಟ್ ಲೂಸಿಯಾದ ಡ್ಯಾರೆನ್ ಸಾಮಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ಆತಿಥೇಯ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಬಾಂಗ್ಲಾದೇಶ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಲೈವ್ ಸ್ಕೋರ್ ಕೆಳಕಂಡಂತಿದೆ.

ವೆಸ್ಟ್ ಇಂಡೀಸ್ ಆಡುವ ಬಳಗ
ಕ್ರೈಗ್ ಬ್ರಾಥ್‌ವೈಟ್(ನಾಯಕ), ಜಾನ್ ಕ್ಯಾಂಪ್‌ಬೆಲ್, ರೇಮನ್ ರೈಫರ್, ಎನ್ಕ್ರುಮಾ ಬೊನ್ನರ್, ಜೆರ್ಮೈನ್ ಬ್ಲಾಕ್‌ವುಡ್, ಕೈಲ್ ಮೇಯರ್ಸ್, ಜೋಶುವಾ ಡಾ ಸಿಲ್ವಾ(ವಿಕೆಟ್ ಕೀಪರ್), ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೇಡನ್ ಸೀಲ್ಸ್, ಆಂಡರ್ಸನ್ ಫಿಲಿಪ್

ಬಾಂಗ್ಲಾದೇಶ ಆಡುವ ಬಳಗ
ತಮೀಮ್ ಇಕ್ಬಾಲ್, ಮಹ್ಮುದುಲ್ ಹಸನ್ ಜಾಯ್, ನಜ್ಮುಲ್ ಹೊಸೈನ್ ಶಾಂಟೋ, ಅನಾಮುಲ್ ಹಕ್, ಲಿಟ್ಟನ್ ದಾಸ್, ಶಾಕಿಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್, ಖಲೀದ್ ಅಹ್ಮದ್, ಎಬಾಡೋತ್ ಹೊಸೈನ್, ಶೋರಿಫುಲ್ ಇಸ್ಲಾಂ

ಪ್ರವಾಸದ ವೇಳಾಪಟ್ಟಿ
• ಪ್ರಥಮ ಟಿ ಟ್ವೆಂಟಿ ಪಂದ್ಯ - ಜುಲೈ 2
• ದ್ವಿತೀಯ ಟಿ ಟ್ವೆಂಟಿ ಪಂದ್ಯ - ಜುಲೈ 3
• ತೃತೀಯ ಟಿ ಟ್ವೆಂಟಿ ಪಂದ್ಯ ಜುಲೈ 7
• ಪ್ರಥಮ ಏಕದಿನ ಪಂದ್ಯ - ಜುಲೈ 10
• ದ್ವಿತೀಯ ಏಕದಿನ ಪಂದ್ಯ - ಜುಲೈ 13
• ತೃತೀಯ ಏಕದಿನ ಪಂದ್ಯ - ಜುಲೈ 16
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications