ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತದ ಪ್ರಧಾನಿಯನ್ನು ಭೇಟಿ ಮಾಡಿದ ಸಂತಸ ಹಂಚಿಕೊಂಡ ಬಾಂಗ್ಲಾ ಆಲ್‌ರೌಂಡರ್ ಶಕೀಬ್

Bangladesh allrounder Shakib Al Hasan meets PM Modi in Bangladesh

ಭಾರತ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಯುವ ಸಾಧಕರನ್ನು ನರೇಂದ್ರ ಮೋದಿ ಭೇಟಿಯಾದರು. ಈ ಯುವ ಸಾಧಕರಲ್ಲಿ ಬಾಂಗ್ಲಾದೇಶದ ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಕೂಡ ಇದ್ದರು.

ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಬಳಿಕ ಶಕೀಬ್ ಅಲ್ ಹಸನ್ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿರುವುದು ಗೌರವದ ಸಂಗತಿಯಾಗಿದೆ. ಬಾಂಗ್ಲಾದೇಶಕ್ಕೆ ಅವರ ಭೇಟಿ ಎರಡೂ ದೇಶಗಳಿಗೆ ಫಲಪ್ರದವಾಗಲಿದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ ಶಕೀಬ್ ಅಲ್ ಹಸನ್.

437 ದಿನಗಳ ನಂತರ ಏಕದಿನ ಕ್ರಿಕೆಟ್‌ಗೆ ಮರಳಿದ ರಿಷಭ್ ಪಂತ್437 ದಿನಗಳ ನಂತರ ಏಕದಿನ ಕ್ರಿಕೆಟ್‌ಗೆ ಮರಳಿದ ರಿಷಭ್ ಪಂತ್

ಮುಂದುವರಿದ ಶಕೀಬ್ "ಭಾರತಕ್ಕಾಗಿ ನರೇಂದ್ರ ಮೋದಿ ತೋರಿಸಿದ ನಾಯಕತ್ವ ಅದ್ಭುತವಾಗಿದೆ. ಭವಿಷ್ಯದಲ್ಲಿ ಭಾರತದ ಬೆಳವಣಿಗೆಗೆ ಅವರಿಂದ ಸಹಕಾರಿಯಾಗಲಿದೆ ಎಂದು ನಾನು ಭಾವಿಸುತ್ತೇನೆ. ಭಾರತದೊಂದಿಗಿನ ನಮ್ಮ ಸಂಬಂಧವು ದಿನದಿಂದ ದಿನಕ್ಕೆ ಉತ್ತಮಗೊಳ್ಳುತ್ತದೆ" ಎಂದು ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಹೇಳಿದ್ದಾರೆ.

ವಿಶ್ವಾದ್ಯಂತ ಕೊರೊನಾ ವೈರಸ್ ಸ್ಪೋಟಗೊಂಡ ಬಳಿಕ ಭಾರತದ ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ಪ್ರಥಮ ವಿದೇಶ ಪ್ರವಾಸ ಇದಾಗಿದೆ. ಮಾರ್ಚ್ 27ರ ವರೆಗೆ ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು ಈ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಂಡಿದ್ದಾರೆ.

ಐಪಿಎಲ್ : ಮುಂಬೈ ಇಂಡಿಯನ್ಸ್ ಪರ ಕೇವಲ ಒಂದೇ ಒಂದು ಪಂದ್ಯ ಆಡಿರುವ ಆಟಗಾರರ ಪಟ್ಟಿಐಪಿಎಲ್ : ಮುಂಬೈ ಇಂಡಿಯನ್ಸ್ ಪರ ಕೇವಲ ಒಂದೇ ಒಂದು ಪಂದ್ಯ ಆಡಿರುವ ಆಟಗಾರರ ಪಟ್ಟಿ

ಢಾಕಾ ಏರ್ಪೋರ್ಟ್‌ಗೆ ಬೆಳಗ್ಗೆ 10 ಗಂಟೆ ವೇಳೆಗೆ ತಲುಪಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವತಃ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಸ್ವಾಗತಿಸಿದ್ದರು. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು "ಏರ್ಪೋರ್ಟ್‌ನಲ್ಲಿ ವಿಶೇಷ ಸ್ವಾಗತ ಕೋರಿದ ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ಅವರಿಗೆ ಧನ್ಯವಾದಗಳು. ಈ ಬೇಟಿ ಪರಸ್ಪರ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದೆ" ಎಂದಿದ್ದಾರೆ.

Story first published: Friday, March 26, 2021, 16:28 [IST]
Other articles published on Mar 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X