ಟಿ ಟ್ವೆಂಟಿ: ಬಾಂಗ್ಲಾದೇಶದ ವಿರುದ್ಧ ಸತತ ಎರಡನೇ ಹೀನಾಯ ಸೋಲು ಕಂಡ ಆಸ್ಟ್ರೇಲಿಯಾ!

ಒಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದರೆ ಮತ್ತೊಂದೆಡೆ ಆಸ್ಟ್ರೇಲಿಯಾ ತಂಡ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿದ್ದು 5 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡುತ್ತಿದೆ.

ಭಾರತ vs ಇಂಗ್ಲೆಂಡ್: ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳುಭಾರತ vs ಇಂಗ್ಲೆಂಡ್: ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು

ಮಂಗಳವಾರ ಆಸ್ಟ್ರೇಲಿಯ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯ ನಡೆದಿದ್ದು ಆಸ್ಟ್ರೇಲಿಯ ಬಾಂಗ್ಲಾದೇಶದ ವಿರುದ್ಧ ಹೀನಾಯವಾಗಿ ಸೋಲುವುದರ ಮೂಲಕ ಸರಣಿಯಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿತು. ಹೌದು ಬಾಂಗ್ಲಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೊದಲನೇ ಪಂದ್ಯದಲ್ಲಿ ಬಾಂಗ್ಲಾದೇಶ ಆಸ್ಟ್ರೇಲಿಯಾ ತಂಡವನ್ನು 23 ರನ್‌ಗಳಿಂದ ಸೋಲಿಸುವುದರ ಮೂಲಕ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರವನ್ನು ಕಾಯ್ದುಕೊಂಡಿದ್ದು ಮಾತ್ರವಲ್ಲದೇ ಇತಿಹಾಸದಲ್ಲಿ ಅದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಟಿ ಟ್ವೆಂಟಿ ಪಂದ್ಯವನ್ನು ಬಾಂಗ್ಲಾದೇಶ ಜಯಗಳಿಸಿತು.

ಹೌದು ಮಂಗಳವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 23 ರನ್‌ಗಳಿಂದ ಜಯ ಗಳಿಸಿದ ಬಾಂಗ್ಲಾದೇಶ ಮೊಟ್ಟಮೊದಲ ಬಾರಿಗೆ ಆಸ್ಟ್ರೇಲಿಯಾ ವಿರುದ್ಧ ಟಿ ಟ್ವೆಂಟಿ ಪಂದ್ಯವೊಂದರಲ್ಲಿ ಜಯ ಸಾಧಿಸುವುದರ ಮೂಲಕ ಇತಿಹಾಸ ಬರೆಯಿತು. ಹೀಗೆ ಸರಣಿಯಲ್ಲಿ ಶುಭಾರಂಭ ಮಾಡಿದ ಬಾಂಗ್ಲಾದೇಶ ಬುಧವಾರ ನಡೆದ ಆಸ್ಟ್ರೇಲಿಯ ವಿರುದ್ಧದ ಎರಡನೆ ಟ್ವೆಂಟಿ ಪಂದ್ಯದಲ್ಲಿಯೂ ಕೂಡ ಜಯ ಸಾಧಿಸುವುದರ ಮೂಲಕ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 2-0 ಮುನ್ನಡೆಯನ್ನು ಸಾಧಿಸಿದೆ.

ಇಂಗ್ಲೆಂಡ್ ವಿರುದ್ಧ ಟೆಸ್ಟ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿರುವ ಟಾಪ್ 5 ಭಾರತೀಯ ಬ್ಯಾಟ್ಸ್‌ಮನ್‌ಗಳುಇಂಗ್ಲೆಂಡ್ ವಿರುದ್ಧ ಟೆಸ್ಟ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿರುವ ಟಾಪ್ 5 ಭಾರತೀಯ ಬ್ಯಾಟ್ಸ್‌ಮನ್‌ಗಳು

20 ಓವರ್‌ಗಳಲ್ಲಿ ಕೇವಲ 121 ರನ್ ಕಲೆಹಾಕಿದ ಆಸ್ಟ್ರೇಲಿಯಾ

20 ಓವರ್‌ಗಳಲ್ಲಿ ಕೇವಲ 121 ರನ್ ಕಲೆಹಾಕಿದ ಆಸ್ಟ್ರೇಲಿಯಾ

ಆಗಸ್ಟ್ 4ರ ಬುಧವಾರದಂದು ಢಾಕಾದ ಶೇರ್ ಎ ಬಾಂಗ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಬಾಂಗ್ಲಾ ದೇಶದ ನಡುವಿನ ಎರಡನೇ ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿತು. 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಸಾಧಾರಣ 121 ರನ್ ಕಲೆಹಾಕಿದ ಆಸ್ಟ್ರೇಲಿಯಾ ತಂಡ ಬಾಂಗ್ಲಾದೇಶಕ್ಕೆ ಗೆಲ್ಲಲು 122 ರನ್‌ಗಳ ಗುರಿಯನ್ನು ನೀಡಿತು.

ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ

ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ

122 ರನ್‌ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ 18.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ಜಯದ ನಗೆ ಬೀರುವುದರ ಮೂಲಕ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 2-0 ಮುನ್ನಡೆಯನ್ನು ಕಾಯ್ದುಕೊಂಡಿತು. ಆಸ್ಟ್ರೇಲಿಯಾ ಪರ ಬ್ಯಾಟಿಂಗ್ ವಿಭಾಗದಲ್ಲಿ ಮಿಚೆಲ್ ಮಾರ್ಷ್ (45) ಮತ್ತು ಹೆನ್ರಿಕ್ಸ್ (30) ಮಿಂಚಿದರೆ ಬಾಂಗ್ಲಾದೇಶದ ಪರ ಬ್ಯಾಟಿಂಗ್ ವಿಭಾಗದಲ್ಲಿ ಅಫಿಫ್ ಹೊಸೈನ್ ಅಜೇಯ 37 ಮತ್ತು ನುರುಲ್ ಹಸನ್ ಅಜೇಯ 22 ರನ್ ಬಾರಿಸಿ ಮಿಂಚಿದರು.

ಸರಣಿ ಗೆಲ್ಲುವ ನಿರೀಕ್ಷೆಯಲ್ಲಿ ಬಾಂಗ್ಲಾದೇಶ

ಸರಣಿ ಗೆಲ್ಲುವ ನಿರೀಕ್ಷೆಯಲ್ಲಿ ಬಾಂಗ್ಲಾದೇಶ

ಬಾಂಗ್ಲಾದೇಶದ ಪರ ಉತ್ತಮ ಬ್ಯಾಟಿಂಗ್ ಮಾಡಿದ ಅಫೀಫ್ ಹೊಸೈನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇನ್ನು ಬಾಂಗ್ಲಾ ಮತ್ತು ಆಸ್ಟ್ರೇಲಿಯ ನಡುವಿನ ಮೂರನೇ ಟಿ ಟ್ವೆಂಟಿ ಪಂದ್ಯ ಗುರುವಾರದಂದು ಢಾಕಾದ ಶೇರ್ ಎ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೂಡ ಜಯ ಸಾಧಿಸುವುದರ ಮೂಲಕ ಬಾಂಗ್ಲಾದೇಶ ಸರಣಿಯನ್ನು ತನ್ನ ಕೈವಶಕ್ಕೆ ಪಡೆಯುತ್ತಾ ಅಥವಾ ಆಸ್ಟ್ರೇಲಿಯ ಜಯ ಸಾಧಿಸುವುದರ ಮೂಲಕ ಟಿ ಟ್ವೆಂಟಿ ಸರಣಿಯಲ್ಲಿ ತನ್ನ ಗೆಲುವಿನ ಖಾತೆಯನ್ನು ತೆರೆಯುತ್ತಾ ಎಂಬುದನ್ನು ಕಾದು ನೋಡಬೇಕು. ಒಂದುವೇಳೆ ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ಸೋತರೆ ಟಿ ಟ್ವೆಂಟಿ ಸರಣಿ ಬಾಂಗ್ಲಾದೇಶದ ಕೈವಶವಾಗಲಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, August 4, 2021, 23:41 [IST]
Other articles published on Aug 4, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X