WI vs BAN: ಟಿ20 ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ಸೋಲಿಸಿದ ಬಾಂಗ್ಲಾದೇಶ
ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯ ಸೋಮವಾರ ಸೇಂಟ್ ವಿನ್ಸೆಂಟ್‌ನ ಕಿಂಗ್‌ಸ್ಟೌನ್‌ನ ಅರ್ನೋಸ್ ವೆಲ್ ಮೈದಾನದಲ್ಲಿ ನಡೆಯಿತು. ಈ ರೋಚಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಬಾಂಗ್ಲಾದೇಶ 7 ರನ್‌ಗಳಿಂದ ಅದ್ಭುತ ಜಯ ದಾಖಲಿಸಿತು. 3 ಪಂದ್ಯಗಳ ಏಕದಿನ ಸರಣಿಯನ್ನು 0-3 ಅಂತರದಲ್ಲಿ ಕಳೆದುಕೊಂಡ ಬಾಂಗ್ಲಾದೇಶ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸುವ ಮೂಲಕ ಬಾಂಗ್ಲಾದೇಶ ಇತಿಹಾಸವನ್ನು ಸೃಷ್ಟಿಸಿದೆ. ಟಿ20 ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ವೆಸ್ಟ್ ಇಂಡೀಸ್ ವಿರುದ್ಧ ಬಾಂಗ್ಲಾದೇಶ ಗೆಲುವು ಕಂಡಿದೆ.
ವೆಸ್ಟ್ ಇಂಡೀಸ್ ನಾಯಕ ರೋವ್ಮನ್ ಪೊವೆಲ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ವೆಸ್ಟ್ ಇಂಡೀಸ್ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನದಿಂದಾಗಿ ಬಾಂಗ್ಲಾದೇಶ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 147 ರನ್ ಕಲೆ ಹಾಕಿತ್ತು. ಬಾಂಗ್ಲಾದೇಶ ಪರ ಸೌಮ್ಯ ಸರ್ಕಾರ್ ಗರಿಷ್ಠ 47 ರನ್ ಗಳಿಸಿದರು. ಜಾಕಿರ್ ಅಲಿ ಮತ್ತು ಶಮೀಮ್ ಹುಸೇನ್ ತಲಾ 27 ರನ್‌ಗಳ ಇನಿಂಗ್ಸ್ ಆಡಿದರು. ವೆಸ್ಟ್ ಇಂಡೀಸ್ ಪರ ಅಕಿಲ್ ಹೊಸೈನ್ ಮತ್ತು ಒಬೆದ್ ಮೆಕಾಯ್ ತಲಾ 2 ವಿಕೆಟ್ ಪಡೆದು ಮಿಂಚಿದರು.

ಬಾಂಗ್ಲಾದೇಶ ತಂಡಕ್ಕೆ 147 ರನ್‌ಗಳನ್ನು ರಕ್ಷಣೆ ಮಾಡಿಕೊಳ್ಳುವುದು ಸುಲಭವಾಗಿರಲಿಲ್ಲ. ಆದರೆ, ಬಾಂಗ್ಲಾದೇಶ ಬೌಲರ್‌ಗಳು ಆರಂಭದಿಂದಲೂ ವಿಂಡೀಸ್ ಬ್ಯಾಟರ್‌ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ನಾಯಕ ರೋವ್ಮನ್ ಪೊವೆಲ್ ಹೊರತುಪಡಿಸಿ ವಿಂಡೀಸ್‌ನ ಯಾವುದೇ ಬ್ಯಾಟರ್‌ಗಳು ಬಾಂಗ್ಲಾದೇಶ ಬೌಲರ್‌ಗಳನ್ನು ಎದುರಿಸುವಲ್ಲಿ ವಿಫಲರಾದರು. ಪೊವೆಲ್ 60 ರನ್‌ಗಳ ಬಾರಿಸುವ ಮೂಲಕ ವಿಂಡೀಸ್ ಗೆಲುವಿಗೆ ಹೋರಾಡಿದರು. ರೊಮಾರಿಯೊ ಶೆಫರ್ಡ್ (22) ಕೊನೆಯ ಓವರ್‌ಗಳಲ್ಲಿ ಬೌಂಡರಿ ಮತ್ತು ಸಿಕ್ಸರ್ ಸಿಡಿಸಿದರು. ಆದರೆ ಅವರ ಹೋರಾಟ ವಿಂಡೀಸ್ ಗೆಲುವಿಗೆ ಸಾಕಾಗಲಿಲ್ಲ. ಅಂತಿಮವಾಗಿ ಬಾಂಗ್ಲಾದೇಶ ತಂಡವು ವೆಸ್ಟ್ ಇಂಡೀಸ್ ಅನ್ನು 19.5 ಓವರ್‌ಗಳಲ್ಲಿ 140 ರನ್‌ಗಳಿಗೆ ಆಲೌಟ್ ಮಾಡಿತು. ಬಾಂಗ್ಲಾದೇಶ ಪರ ಮೆಹದಿ ಹಸನ್ 4, ಹಸನ್ ಮಹಮೂದ್ ಮತ್ತು ತಸ್ಕಿನ್ ಅಹ್ಮದ್ ತಲಾ 2 ವಿಕೆಟ್ ಪಡೆದರು.
ಬಾಂಗ್ಲಾದೇಶ ಎದುರು ತವರಿನಲ್ಲಿ ನಡೆದ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮೊದಲ ಬಾರಿಗೆ ಸೋಲು ಕಂಡಿದೆ. ಸ್ಟಾರ್ ಆಲ್ ರೌಂಡರ್ ಮೆಹದಿ ಹಸನ್ ಅವರ ಆಲ್ ರೌಂಡ್ ಪ್ರದರ್ಶನದಿಂದಾಗಿ ಬಾಂಗ್ಲಾದೇಶ ಮೊದಲ ಟಿ20ಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 7 ರನ್ ಗಳಿಂದ ಸೋಲಿಸಿದೆ. ಬಾಂಗ್ಲಾದೇಶದ ಈ ಗೆಲುವು ಬಹಳ ವಿಶೇಷವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications