ಬಾಂಗ್ಲಾದೇಶದಲ್ಲಿ ಐಪಿಎಲ್ ಮೇಲಿದ್ದ ಬ್ಯಾನ್ ತೆರವು
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನೇರ ಪ್ರಸಾರಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಸರ್ಕಾರ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಕೆಲ ತಿಂಗಳ ಹಿಂದೆ ಸರ್ಕಾರ ಹೇರಿದ್ದ ಐಪಿಎಲ್ ನೇರ ಪ್ರಸಾರದ ನಿಷೇಧವನ್ನು ತೆಗೆದುಹಾಕಿದೆ. ಈ ಬಗ್ಗೆ ಮಹತ್ವದ ನಿರ್ಧಾರವನ್ನು ನೂತನ ಮಾಹಿತಿ ಮತ್ತು ಪ್ರಸಾರ ಸಚಿವ ಜಹೀರುದ್ಧೀನ್ ಸ್ವಷ್ಟನೆ ನೀಡಿದ್ದಾರೆ.
ಕೋಲ್ಕತ್ತ ನೈಟ್ ರೈಡರ್ಸ್ ತಂಡ ಐಪಿಎಲ್ ಹರಾಜಿನಲ್ಲಿ ಬಾಂಗ್ಲಾದೇಶದ ಮುಸ್ತಾಫಿಜುರ್ ರಹಮಾನ್ ಅವರನ್ನು ಭಾರೀ ಮೊತ್ತವನ್ನು ನೀಡಿ ಖರೀದಿಸಿತ್ತು. ಆದರೆ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಹಿಂದುಗಳ ಮೇಲಿನ ಹಿಂಸಾಚಾರವನ್ನು ವಿರೋಧಿಸಿ, ಭಾರತದಲ್ಲಿ ಪ್ರತಿಭಟನೆ ನಡೆದಿತ್ತು. ಆಗ ಮುಸ್ತಾಫಿಜುರ್ ರಹಮಾನ್ ಅವರನ್ನು ಐಪಿಎಲ್‌ನಿಂದ ಕೈ ಬಿಡುವಂತೆ ಒತ್ತಡವನ್ನು ಹೇರಲಾಗಿತ್ತು. ಆಗ ಬಿಸಿಸಿಐ ಮುಸ್ತಾಫಿಜುರ್ ರಹಮಾನ್ ಅವರನ್ನು ಕೆಕೆಆರ್ ತಂಡದಿಂದ ಕೈ ಬಿಡುವಂತೆ ಸೂಚಿಸಿತ್ತು. ಅಲ್ಲದೆ ಬದಲಿ ಆಟಗಾರನನ್ನು ಪಡೆಯಲು ಅವಕಾಶವನ್ನು ಸಹ ನೀಡಿತ್ತು.

ನೇರ ಪ್ರಸಾರದ ನಿಷೇಧ ತೆರವು
ಐಪಿಎಲ್‌ನಿಂದ ಬಾಂಗ್ಲಾದೇಶದ ಮುಸ್ತಾಫಿಜುರ್ ರಹಮಾನ್ ಅವರನ್ನು ಕೈಬಿಟ್ಟಿದ್ದಕ್ಕಾಗಿ ಅಲ್ಲಿನ ಸರ್ಕಾರ ಕೆಂಡ ಕಾರಿತ್ತು. ಅಲ್ಲದೆ ಐಪಿಎಲ್ ನೇರ ಪ್ರಸಾರಕ್ಕೆ ಬ್ರೇಕ್ ಹಾಕಿತ್ತು. ಯುವಜನ ಮತ್ತು ಕ್ರೀಡಾ ರಾಜ್ಯ ಸಚಿವ ಅಮಿನುಲ್ ಹಕ್ ಅವರು ಹಿಂದಿನ ಮಧ್ಯಂತರ ಸರ್ಕಾರವು ಐಪಿಎಲ್ ಪ್ರಸಾರವನ್ನು ನಿಷೇಧಿಸಿದ ನಂತರ ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಹೇಳಿದ್ದರು ಎಂದು ಕ್ರಿಕ್‌ಬಜ್ ವರದಿ ಮಾಡಿದೆ. ಐಪಿಎಲ್ ಪ್ರಸಾರ ಮಾಡುವ ಬಗ್ಗೆ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ. ನಾವು ಆಟಕ್ಕೆ ರಾಜಕೀಯವನ್ನು ತರಲು ಬಯಸುವುದಿಲ್ಲ" ಎಂದು ಸ್ವಷ್ಟನೆ ನೀಡಿದ್ದಾರೆ. ಯಾವುದೇ ಚಾನೆಲ್ ಐಪಿಎಲ್ ಪ್ರಸಾರ ಮಾಡಲು ಅರ್ಜಿ ಸಲ್ಲಿಸಿದರೆ, ನಾವು ಅದನ್ನು ಸಕಾರಾತ್ಮಕವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ಐಪಿಎಲ್ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಪ್ರಸಾರ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಅದನ್ನು ಪ್ರಸಾರ ಮಾಡಲು ಅರ್ಜಿ ಸಲ್ಲಿಸಿದರೆ, ಅದಕ್ಕೆ ನಾವು ಸ್ಪಂದಿಸುತ್ತೇವೆ. ಅಥವಾ ನಮ್ಮ ದೇಶದಲ್ಲಿರುವ ಚಾನೆಲ್‌ಗಳು ಪ್ರಸಾರ ಮಾಡಲು ಇಚ್ಛಿಸಿದರೆ ನಾವು ಸಹಾಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮಾರ್ಚ್ 28 ರಿಂದ ಐಪಿಎಲ್
ವಿಶ್ವದ ಶ್ರೀಮಂತ ಲೀಗ್ ಎಂದೇ ಖ್ಯಾತಿ ಪಡೆದಿರುವ ಐಪಿಎಲ್, ಮಾರ್ಚ್ 28 ರಿಂದ ಆರಂಭವಾಗಲಿದೆ. ಈ ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಕಾದಾಟ ನಡೆಸಲಿವೆ. ಈಗಾಗಲೇ ಬಿಸಿಸಿಐ ಲೀಗ್ ಹಂತದ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಲೀಗ್ ಹಂತದಲ್ಲಿ ಒಟ್ಟು 70 ಪಂದ್ಯಗಳು ನಡೆಯಲಿದ್ದು, ಭಾರತದ 12 ನಗರಗಳು ನಡೆಯಲಿವೆ. ಆರ್‌ಸಿಬಿ ಈ ಬಾರಿ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ಪಟ್ಟದೊಂದಿಗೆ ಕಣಕ್ಕೆ ಇಳಿಯಲಿದೆ. ಲೀಗ್ ಹಂತದಲ್ಲಿ ಪ್ರತಿ ತಂಡಗಳು 14 ಪಂದ್ಯಗಳು ಆಡಲಿವೆ. ಆರ್‌ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿ ಇತಿಹಾಸ ನಿರ್ಮಿಸುವ ಕನಸನ್ನು ಹೊಂದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications