IND vs BAN: ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಬಾಂಗ್ಲಾದೇಶ ತಂಡ ಪ್ರಕಟ; ಅನ್‌ಕ್ಯಾಪ್ಡ್ ವಿಕೆಟ್‌ಕೀಪರ್‌ಗೆ ಸ್ಥಾನ
ಭಾರತ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಗೆ ಬಾಂಗ್ಲಾದೇಶ ತನ್ನ ತಂಡವನ್ನು ಪ್ರಕಟಿಸಿದೆ. ಬಾಂಗ್ಲಾದೇಶ ಪ್ರಕಟಿಸಿರುವ 16 ಆಟಗಾರರ ತಂಡವನ್ನು ಪಾಕಿಸ್ತಾನ ವಿರುದ್ಧದ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನ ನೇತೃತ್ವ ವಹಿಸಿದ್ದ ನಜ್ಮುಲ್ ಹುಸೇನ್ ಶಾಂಟೊ ಅವರು ಮುನ್ನಡೆಸಲಿದ್ದಾರೆ.
ಬಾಂಗ್ಲಾದೇಶ ಮತ್ತು ಭಾರತ ನಡುವಿನ ಟೆಸ್ಟ್ ಸರಣಿಯೂ ಸೆಪ್ಟೆಂಬರ್ 19ರಿಂದ ಆರಂಭವಾಗಲಿದೆ. ಈಗಾಗಲೇ ಬಿಸಿಸಿಐ ಕೂಡ ಭಾರತ ತಂಡವನ್ನು ಪ್ರಕಟಿಸಿದೆ. ಉಭಯ ತಂಡಗಳು ಅಭ್ಯಾಸ ಶಿಬರದಲ್ಲಿ ಭರ್ಜರಿ ತಯಾರಿ ನಡೆಸುತ್ತಿವೆ.

ಇತ್ತೀಚೆಗೆ ತವರಿನಲ್ಲಿ ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿದ ಬಾಂಗ್ಲಾದೇಶ ತಂಡದಲ್ಲಿ ಒಂದೇ ಒಂದು ಬದಲಾವಣೆಯಾಗಿದೆ. ಗಾಯದ ಸಮಸ್ಯೆಯಿಂದಾಗಿ ಭಾರತ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿರುವ ವೇಗದ ಬೌಲರ್ ಶೋರಿಫುಲ್ ಇಸ್ಲಾಂ ಬದಲಿಗೆ ಬಾಂಗ್ಲಾದೇಶ ಅನ್‌ಕ್ಯಾಪ್ಡ್ ವಿಕೆಟ್‌ಕೀಪರ್- ಬ್ಯಾಟರ್ ಜಕರ್ ಅಲಿ ಅನಿಕ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.
ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಗಾಯ ಗೊಂಡಿರುವ ಶೋರಿಫುಲ್ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಇವರ ಸ್ಥಾನಕ್ಕೆ ಪಾಕಿಸ್ತಾನ ಎ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ ಎ ಪರ ಶತಕ ಸಿಡಿಸಿದ ಅಲಿ ಅನಿಕ್ ಗಮನ ಸೆಳೆದಿದ್ದರು. ಈಗ ಅವರಿಗೆ ಮೊದಲ ಬಾರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇವರೆಗೆ ಅವರು ಬಾಂಗ್ಲಾದೇಶ ಪರ 17 ಟಿ20 ಪಂದ್ಯಗಳನ್ನು ಆಡಿದ್ದು, ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್ 2024ರಲ್ಲಿ 4 ಪಂದ್ಯಗಳಲ್ಲಿ ಬಾಂಗ್ಲಾದೇಶವನ್ನು ಪ್ರತಿನಿಧಿಸಿದ್ದರು.
ಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಪಂದ್ಯ ಸೆಪ್ಟೆಂಬರ್ 19 ರಂದು ಚೆನ್ನೈನಲ್ಲಿ ಆರಂಭವಾಗಲಿದೆ. ಎರಡನೇ ಟೆಸ್ಟ್ ಕಾನ್ಪುರದಲ್ಲಿ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರ ನಡುವೆ ನಡೆಯಲಿದೆ. ಭಾರತ ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ ತಂಡವು ಪಾಕಿಸ್ತಾನ ವಿರುದ್ಧ ಸರಣಿಯನ್ನು ಗೆದ್ದು ನಾಲ್ಕನೇ ಸ್ಥಾನಕ್ಕೇರಿದೆ.
ಬಾಂಗ್ಲಾದೇಶ ತಂಡ
ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮಹ್ಮುದುಲ್ ಹಸನ್ ಜಾಯ್, ಜಾಕಿರ್ ಹಸನ್, ಶದ್ಮನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್, ಲಿಟನ್ ಕುಮಾರ್ ದಾಸ್ (ವಿಕೆಟ್‌ಕೀಪರ್), ಮೆಹದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ನಯೀಮ್ ಹಸನ್ , ನಹೀದ್ ರಾಣಾ, ಹಸನ್ ಮಹಮೂದ್, ತಸ್ಕಿನ್ ಅಹ್ಮದ್, ಸೈಯದ್ ಖಾಲಿದ್ ಅಹ್ಮದ್, ಜಾಕರ್ ಅಲಿ ಅನಿಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications