Ind vs Ban: 2ನೇ ಟೆಸ್ಟ್ ಪಂದ್ಯ ಗೆಲ್ಲಲು ಭಾರತಕ್ಕೆ ಸುಲಭ ಗುರಿ: ಆರಂಭದಲ್ಲೇ ಎಡವಿದ ಟೀಮ್ ಇಂಡಿಯಾ

ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಢಾಕಾದಲ್ಲಿ ನಡೆಯುತ್ತಿದ್ದು ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿದೆ. ಮೊದಲನೇ ಇನ್ನಿಂಗ್ಸ್ ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದು ಬಾಂಗ್ಲಾದೇಶ ತಂಡವನ್ನು 231 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಗೆಲ್ಲಲು 145 ರನ್‌ಗಳ ಸಾಧಾರಣ ಗುರಿ ಪಡೆದುಕೊಂಡಿದೆ.
ಈ ಮೊತ್ತವನ್ನು ಬೆನ್ನಟ್ಟಿರುವ ಭಾರತ ಎರಡನೇ ಇನ್ನಿಂಗ್ಸ್‌ನ ಆರಂಭದಲ್ಲಿಯೇ ಆಘಾತ ಅನುಭವಿಸಿದೆ. ನಾಯಕ ಕೆಎಲ್ ರಾಹುಲ್ ಹಾಗೂ ಚೇತೇಶ್ವರ್ ಪೂಜಾರ ಅಗ್ಗಕ್ಕೆ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಹಿನ್ನಡೆ ಅನುಭವಿಸಿದೆ.
ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿಯೂ ಬಾಂಗ್ಲಾದೇಶದ ಬ್ಯಾಟಿಂಗ್ ವಿಭಾಗ ನೀರಸ ಪ್ರದರ್ಶನ ನೀಡಿತು. ಜಾಕಿರ್ ಹಸನ್ ಹಾಗೂ ಲಿಟನ್ ದಾಸ್ ಅರ್ಧ ಶತಕಗಳಿಸುವ ಮೂಲಕ ಬಾಂಗ್ಲಾದೇಶ 200ರ ಗಡಿದಾಟಲು ಕಾರಣವಾದರು. ಇನ್ನು ಕೆಳ ಕ್ರಮಾಂಕದಲ್ಲಿ ನೂರುಲ್ ಹಸನ್ ಹಾಗೂ ಟಸ್ಕಿನ್ ಅಹ್ಮದ್ ಅದ್ಭುತ ಪ್ರದರ್ಶನ ನೀಡಿದ. ಇವರಿಬ್ಬರು ಕೂಡ ತಲಾ 31 ರನ್‌ಗಳ ಕೊಡುಗೆ ನೀಡಿದ್ದು ಬಾಂಗ್ಲಾದೇಶ ಇನ್ನಿಂಗ್ಸ್‌ನ ಪ್ರಮುಖ ಅಂಶವಾಗಿದೆ.

ಬೌಲಿಂಗ್ ವಿಭಾಗದ ಭರ್ಜರಿ ಪ್ರದರ್ಶನ
ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಬೌಲಿಂಗ್ ಪಡೆ ಮತ್ತೊಮ್ಮೆ ಸಾಂಘಿಕ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಅಕ್ಷರ್ ಪಟೇಲ್ ಮೂರು ವಿಕೆಟ್ ಕಿತ್ತರೆ ಆರ್ ಅಶ್ವಿನ್ ಹಾಗೂ ಮೊಹಮ್ಮದ್ ಸಿರಾಜ್ ಎರಡು ವಿಕೆಟ್ ಪಡೆದರು. ಇನ್ನು ಉಮೇಶ್ ಯಾದವ್ ಹಾಗೂ ಉನಾದ್ಕಟ್ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಬಾಂಗ್ಲಾದೇಶ ತಂಡದ ವಿರುದ್ಧ ಮತ್ತೊಮ್ಮೆ ಹಿನ್ನಡೆ ಅನುಭವಿಸಲು ಕಾರಣವಾದರು.

ಮೊದಲ ಇನ್ನಿಂಗ್ಸ್‌ನಲ್ಲಿ ಮಹತ್ವದ ಮುನ್ನಡೆ
ಇನ್ನು ಇದಕ್ಕೂ ಮುನ್ನ ಟಾಸ್ ಗೆದ್ದುಮೊದಲಿಗೆ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 227 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬಳಿಕ ಬ್ಯಾಟಿಂಗ್‌ನಲ್ಲಿ ಆರಂಭದಲ್ಲಿ ಹಿನ್ನಡೆ ಅನುಭವಿಸಿತ್ತು. ಆದರೆ ರಿಶಭ್ ಪಂತ್ ಹಾಗೂ ಶ್ರೇಯ್ ಐಯ್ಯರ್ ಅದ್ಭುತ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ನೆರವಾದರು. ಈ ಜೋಡಿ ಭರ್ಜರಿ 159 ರನ್‌ಗಳ ಜೊತೆಯಾಟ ನೀಡುವ ಮೂಲಕ ಭಾರತಕ್ಕೆ ಆಸರೆಯಾದರು. ರಿಷಭ್ ಪಂತ್ ಈ ಪಂದ್ಯದಲ್ಲಿ 93 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಶ್ರೇಯಸ್ ಐಯ್ಯರ್ 87 ರನ್‌ಗಳಿಗೆ ಔಟಾದರು. ಈ ಜೋಡಿ ಬೇರ್ಪಟ್ಟ ಬಳಿಕ ಮತ್ತೆ ಕುಸಿತ ಕಂಡ ಭಾರತ 314 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 87 ರನ್‌ಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು.

ಇತ್ತಂಡಗಳ ಆಡುವ ಬಳಗ ಟೀಮ್ ಇಂಡಿಯಾ
ಕೆಎಲ್ ರಾಹುಲ್(ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಬ್ ಪಂತ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಜಾಕಿರ್ ಹಸನ್, ಮೊಮಿನುಲ್ ಹಕ್, ಲಿಟ್ಟನ್ ದಾಸ್, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್(ನಾಯಕ), ನೂರುಲ್ ಹಸನ್(ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ತಸ್ಕಿನ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications