ಬಾಂಗ್ಲಾದೇಶ vs ಅಫ್ಘಾನಿಸ್ತಾನ 3ನೇ ಏಕದಿನ ಪಂದ್ಯ: ಟಾಸ್ ವರದಿ, ಆಡುವ ಬಳಗ, Live ಸ್ಕೋರ್
ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನ ನಡುವಿನ ಏಕದಿನ ಸರಣಿಯ ಮೂರಮೇ ಹಾಗೂ ಅಂತಿಮ ಪಂದ್ಯ ಆರಂಭವಾಗಿದೆ. ಚಿತ್ತಗಾಂಗ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಪ್ರವಾಸ ಬಾಂಗ್ಲಾದೇಶ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಬಾಂಗ್ಲಾದೇಶ ಆರಂಬದಲ್ಲಿ ಬೌಲಿಂಗ್ ದಾಳಿ ನಡೆಸುವ ಸವಾಲು ಸ್ವೀಕರಿಸಿದೆ.
ಏಕದಿನ ಸರಣಿಯಲ್ಲಿ ಅಫ್ಘಾನಿಸ್ತಾನ ತಂಡ ಅಮೋಘ ಪ್ರದರ್ಶನ ನೀಡಿದ್ದು ಆರಂಭಿಕ ಎರಡು ಪಂದ್ಯಗಳಲ್ಲಿಯೂ ಭರ್ಜರಿ ಗೆಲುವು ಸಾಧಿಸಿತ್ತು. ಹೀಗಾಗಿ ಮೂರು ಪಂದ್ಯಗಳ ಈ ಸರಣಿಯನ್ನು ಅಫ್ಘನ್ ಪಡೆ ಈಗಾಗಲೇ ತನ್ನ ವಶಕ್ಕೆ ಪಡೆದುಕೊಂಡಿದೆ. ಇದೀಗ ಬಾಂಗ್ಲಾದೇಶದ ವಿರುದ್ಧ ಅದರದ್ದೇ ನೆಲದಲ್ಲಿ ವೈಟ್‌ವಾಶ್ ಮಾಡುವ ಅವಕಾಶ ಅಫ್ಘನ್ ಪಡೆಗಿದ್ದು ಅದರ ಮೇಲೆ ಅಫ್ಘನ್ ತಂಡ ಕಣ್ಣಿಟ್ಟಿದೆ. ಮತ್ತೊಂದೆಡೆ ಬಾಂಗ್ಲಾದೇಶ ತಂಡಕ್ಕೆ ಈ ಪಂದ್ಯದಲ್ಲಿ ಗೆದ್ದು ಸರಣಿಯಲ್ಲಿ ವೈಟ್‌ವಾಶ್ ಮುಖಭಂಗವನ್ನು ತಪ್ಪಿಸಿಕೊಳ್ಳುವ ಲೆಕ್ಕಾಚಾರದಲ್ಲಿದ್ದು ಕಠಿಣ ಪೈಪೋಟಿಯ ಪ್ರಯತ್ನದಲ್ಲಿದೆ.

Live ಸ್ಕೋರ್ ಹೀಗಿದೆ
ಆದರೆ ಈ ಪಂದ್ಯದ ಆರಂಭದಲ್ಲಿ ಬಾಂಗ್ಲಾದೇಶ ತಂಡ ಮುನ್ನಡೆ ಸಾಧಿಸಿದ್ದು ಭರ್ಜರಿ ಬೌಲಿಂಗ್ ದಾಳಿ ನಡೆಸಿ ಅಗ್ರಕ್ರಮಾಂಖದ ಆಟಗಾರರನ್ನು ಶೀಘ್ರದಲ್ಲಿ ಫೆವಿಲಿಯನ್‌ಗೆ ಅಟ್ಟುವಂತೆ ಮಾಡಿದೆ. ಹೀಗಾಗಿ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಅಲ್ಪಮೊತ್ತಕ್ಕೆ ಕಲಟ್ಟಿಹಾಕುವ ಸುಳಿವು ನೀಡಿದೆ.
ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನಯಿಮ್, ಲಿಟ್ಟನ್ ದಾಸ್ (ನಾಯಕ), ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೊಯ್, ಶಕೀಬ್ ಅಲ್ ಹಸನ್, ಮುಶ್ಫಿಕುರ್ ರಹೀಮ್ (ವಿಕೆಟ್ ಕೀಪರ್), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ತೈಜುಲ್ ಇಸ್ಲಾಂ
ಬೆಂಚ್: ಹಸನ್ ಮಹಮೂದ್, ಮುಸ್ತಾಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್, ರೋನಿ ತಾಲೂಕ್ದಾರ್
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ನಜೀಬುಲ್ಲಾ ಜದ್ರಾನ್, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರಹಮಾನ್, ಫಝಲ್ಹಕ್ ಫಾರೂಕಿ, ಅಬ್ದುಲ್ ರಹಮಾನ್, ಜಿಯಾ-ಉರ್-ರೆಹಮಾನ್
ಬೆಂಚ್: ರಶೀದ್ ಖಾನ್, ಮೊಹಮ್ಮದ್ ಸಲೀಮ್ ಸಫಿ, ರಿಯಾಜ್ ಹಸನ್, ಶಾಹಿದುಲ್ಲಾ ಕಮಾಲ್, ಇಕ್ರಮ್ ಅಲಿಖಿಲ್, ವಫಾದರ್ ಮೊಮಂಡ್, ಸಯದ್ ಶಿರ್ಜಾದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications