For Quick Alerts
ALLOW NOTIFICATIONS  
For Daily Alerts
 

ಬಾಂಗ್ಲಾದೇಶ vs ಅಫ್ಘಾನಿಸ್ತಾನ: 3ನೇ ಏಕದಿನ ಪಂದ್ಯ, Live ಸ್ಕೋರ್ ಹಾಗೂ ಪ್ಲೇಯಿಂಗ್ XI

Bangladesh vs Afghanistan, ODI series 3rd match, Live score and playing XI, Chattogram

ಬಾಂಗ್ಲಾದೇಶ ಪ್ರವಾಸಕೈಗೊಂಡಿರುವ ಅಫ್ಘಾನಿಸ್ತಾನ ಏಕದಿನ ಸರಣಿಯಲ್ಲಿ ಮೂರನೇ ಪಂದ್ಯವನ್ನು ಇಂದು ಆಡುತ್ತಿದೆ. ಈ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ಮೊದಲ ಎರಡು ಪಂದ್ಯದಲ್ಲಿ ಗೆದ್ದಿರುವ ಆತಿಥೇಯ ಬಾಂಗ್ಲಾದೇಶ ಐದು ಪಂದ್ಯಗಳ ಸರಣಿಯಲ್ಲಿ ಮೂರನೇ ಪಂದ್ಯವನ್ನು ಗೆದ್ದು ಸರಣಿಯನ್ನು ವಶಕ್ಕೆ ಪಡೆಯುವ ಉತ್ಸಾಹದಲ್ಲಿದೆ. ಆದರೆ ಅಫ್ಘಾನಿಸ್ತಾನ ತಂಡ ಸರಣಿಯಲ್ಲಿ ಹೋರಾಟವನ್ನು ಮುಂದುವರಿಸುವ ಪ್ರಯತ್ನದಲ್ಲಿದೆ.

ಇನ್ನು ಸರಣಿಯ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಗೆಲ್ಲುವ ಅದ್ಭುತ ಅವಕಾಶವನ್ನು ಹೊಂದಿತ್ತು. ಆದರೆ 6ನೇ ವಿಕೆಟ್‌ಗೆ ಬಾಂಗ್ಲಾದೇಶ ಪ್ರದರ್ಶಿಸಿದ ದಾಖಲೆಯ ಪ್ರದರ್ಶನ ಆತಿಥೇಯರ ಪರವಾಗಿ ಪಂದ್ಯದ ಫಲಿತಾಂಶ ಬರಲು ಕಾರಣವಾದರು. 45 ರನ್‌ಗಳಿಗೆ 6 ವಿಎಕಟ್ ಕಳೆದುಕೊಂಡು ಸೋಲಿನತ್ತ ಮುಖಮಾಡಿದ್ದ ಬಾಂಗ್ಲಾ ತಂಡದ ಪರವಾಗಿ ಆಫಿಫ್ ಹುಸೈನ್ ಹಾಗೂ ಮೆಹದಿ ಹಸನ್ ದಾಖಲೆಯ ಜೊತೆಯಾಟ ಬಾಂಗ್ಲಾ ತಂಡವನ್ನು ಗೆಲ್ಲಿಸಿತ್ತು. ಇನ್ನು ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ 88 ರನ್‌ಗಳ ಅಂತರದ ಸುಲಭ ಜಯವನ್ನು ದಾಖಲಿಸಿತ್ತು.

Live ಸ್ಕೋರ್‌ಕಾರ್ಡ್ ಹೀಗಿದೆ:

1
53517

ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಅಫ್ಘಾನಿಸ್ತಾನ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಚಟ್ಟೋಗ್ರಾಮ್‌ನಲ್ಲಿ ನಡೆದ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಅಫ್ಘಾನಿಸ್ತಾನ ಆತಿಥೇಯರಿಗೆ ಸರಣಿಯಲ್ಲಿ ಮೊದಲ ಸೋಲಿನ ರುಚಿ ತೋರಿಸುವಲ್ಲಿ ಯಶಸ್ವಿಯಾಗಿದೆ.

ಶ್ರೀಲಂಕಾವನ್ನು ವೈಟ್ ವಾಶ್ ಮಾಡಿದ ಖುಷಿಗೆ ರೋಹಿತ್ ಆಡಿದ ಮಾತು ನೋಡಿ | Oneindia Kannada

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ಉತ್ತಮ ಆರಂಭವನ್ನು ಪಡೆಯಿತು. ಆದರೆ ಮಧ್ಯಮ ಕ್ರಮಾಂಕದ ಆಟಗಾರರು ಸಂಪೂರ್ಣ ವೈಫಲ್ಯ ಅನುಭವಿಸಿದ ಕಾರಣ 192 ರನ್‌ಗಳ ಸಾಧಾರಣ ಮೊತ್ತವನ್ನು ಪೇರಿಸಲಷ್ಟೇ ಬಾಂಗ್ಲಾದೇಶಕ್ಕೆ ಸಾಧ್ಯವಾಯಿತು. ಆರಂಭಿಕ ಆಟಗಾರ ಲಿಟನ್ ದಾಸ್ ಈ ಪಂದ್ಯದಲ್ಲಿಯೂ ಮಿಂಚಿದ್ದು 86 ರನ್‌ಗಳಿಸಿ ಮಿಂಚಿದರು.

ಇನ್ನು ಬೌಲಿಂಗ್‌ನಲ್ಲಿ ಅಫ್ಘಾನಿಸ್ತಾನದ ಪರವಾಗಿ ರಶೀದ್ ಖಾನ್ ಭರ್ಜರಿ ಪ್ರದರ್ಶನ ನೀಡಿದರು. ರಶೀದ್ ಖಾನ್ ತಮ್ಮ 10 ಓವರ್‌ಗಳ ಬೌಲಿಂಗ್ ಕೋಟಾದಲ್ಲಿ ಕೇವಲ 37 ರನ್‌ ನೀಡಿ ಮೂರು ವಿಕೆಟ್ ಸಂಪಾದಿಸಿದರು. ಅನುಭವಿ ನಬಿ ಎರಡು ವಿಕೆಟ್ ಪಡೆದರು. ಈ ಮೂಲಕ ಬಾಂಗ್ಲಾದೇಶಕ್ಕೆ ಆಘಾತ ನೀಡಿದರು.

ಬಾಂಗ್ಲಾದೇಶ ಆಡುವ ಬಳಗ: ಲಿಟನ್ ದಾಸ್, ತಮೀಮ್ ಇಕ್ಬಾಲ್ (ನಾಯಕ), ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಯಾಸಿರ್ ಅಲಿ, ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್, ಶೋರಿಫುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರೆಹಮಾನ್

ಬೆಂಚ್: ಮಹಮ್ಮದುಲ್ ಹಸನ್ ಜಾಯ್, ನಸುಮ್ ಅಹ್ಮದ್, ನಜ್ಮುಲ್ ಹೊಸೈನ್ ಶಾಂಟೊ, ಎಬಾಡೋತ್ ಹೊಸೈನ್

ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಗುಲ್ಬದಿನ್ ನೈಬ್, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ಯಾಮಿನ್ ಅಹ್ಮದ್ಜಾಯ್, ಫಜಲ್ಹಕ್ ಫಾರೂಕಿ
ಬೆಂಚ್ : ರಿಯಾಜ್ ಹಸನ್, ಫರೀದ್ ಅಹ್ಮದ್ ಮಲಿಕ್, ಶಾಹಿದುಲ್ಲಾ ಕಮಾಲ್, ಇಕ್ರಮ್ ಅಲಿಖಿಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್

Story first published: Monday, February 28, 2022, 17:47 [IST]
Other articles published on Feb 28, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+