
ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಅಫ್ಘಾನಿಸ್ತಾನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿಯೂ ಆತಿಥೇಯ ಬಾಂಗ್ಲಾದೇಶ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆಕೊಂಡಿದೆ. ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿರುವ ಬಾಂಗ್ಲಾದೇಶ ತಂಡ ಎರಡನೇ ಪಂದ್ಯವನ್ನೂ ಗೆದ್ದು ಸರಣಿ ವಶಕ್ಕೆ ಪಡೆಯುವ ಉತ್ಸಾಹದಲ್ಲಿದೆ. ಆದರೆ ಬೌಲಿಂಗ್‌ನಲ್ಲಿ ಅಫ್ಘಾನಿಸ್ತಾನ ಬಾಂಗ್ಲಾದೇಶಕ್ಕೆ ಮತ್ತೊಮ್ಮೆ ಆಘಾತ ನೀಡುವಲ್ಲಿ ಯಶಸ್ವಿಯಾಗಿದ್ದು ಬಾಂಗ್ಲಾ ಆರಂಭಿಕ ಹಿನ್ನಡೆ ಅನುಭವಿಸಲು ಕಾರಣವಾಗಿದೆ.
ಈ ಸರಣಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶ ತಂಡ ಗೆದ್ದುಕೊಂಡಿದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಅಫ್ಘಾನಿಸ್ತಾನ ಏಕದಿನ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡ ಬಳಿಕ ಟಿ20 ಸರಣಿಯಲ್ಲಿನ ಸೋಲನ್ನು ತಪ್ಪಿಸಲು ಹರಸಾಹಸ ಪಡುತ್ತಿದೆ. ಸರಣಿಯಲ್ಲಿ ಸಮಬಲ ಸಾಧಿಸಬೇಕಿದ್ದರೆ ಅಫ್ಘಾನಿಸ್ತಾನ ತಂಡಕ್ಕೆ ಈ ಪಂದ್ಯದ ಗೆಲುವು ಅನಿವಾರ್ಯ. ಎರಡು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಬಾಂಗ್ಲಾದೇಶ ಮೊದಲ ಪಂದ್ಯವನ್ನು ಗೆದ್ದು 1-0 ಅಂತರದ ಮುನ್ನಡೆಯಲ್ಲಿದೆ.
Live ಸ್ಕೋರ್‌ಕಾರ್ಡ್ ಹೀಗಿದೆ:
ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನಯಿಮ್, ಲಿಟನ್ ದಾಸ್ (ವಿಕೆಟ್ ಕೀಪರ್), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ (ನಾಯಕ), ಮುನಿಮ್ ಶಹರಿಯಾರ್, ಅಫೀಫ್ ಹೊಸೈನ್, ಮಹೇದಿ ಹಸನ್, ಶೋರಿಫುಲ್ ಇಸ್ಲಾಂ, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್
ಬೆಂಚ್: ಯಾಸಿರ್ ಅಲಿ, ತಸ್ಕಿನ್ ಅಹ್ಮದ್, ಶೋಹಿದುಲ್ ಇಸ್ಲಾಂ
ಅಫ್ಘಾನಿಸ್ತಾನ ಆಡುವ ಬಳಗ: ಹಜರತುಲ್ಲಾ ಝಜೈ, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಉಸ್ಮಾನ್ ಘನಿ, ದರ್ವಿಶ್ ರಸೂಲಿ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಕರೀಂ ಜನತ್, ಫಜಲ್ಹಕ್ ಫಾರೂಕಿ, ಶರಫುದ್ದೀನ್ ಅಶ್ರಫ್
ಬೆಂಚ್: ಖೈಸ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಅಫ್ಸರ್ ಝಜೈ, ಫರೀದ್ ಅಹ್ಮದ್ ಮಲಿಕ್, ನಿಜತ್ ಮಸೂದ್