Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Bangladesh vs England: 2ನೇ ಟಿ20 ಪಂದ್ಯ, ಸರಣಿ ಗೆಲುವಿನ ಮೇಲೆ ಬಾಂಗ್ಲಾ ಚಿತ್ತ, Live ಸ್ಕೋರ್

Bangladesh vs England t20 series: 2nd match, toss report playing XI and Live score, Dhaka

ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ನಡುವಿನ ಟಿ20 ಸರಣಿಯ ಎರಡನೇ ಪಂದ್ಯ ಢಾಕಾದ ಶೇರ್ ಬಾಂಗ್ಲಾ ನ್ಯಾಶನಲ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಈ ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪ್ರವಾಸಿ ಇಂಗ್ಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ಎರಡು ತಂಡದಲ್ಲಿಯೂ ಒಂದೊಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಬಾಂಗ್ಲಾದೇಶ ತಂಡದಲ್ಲಿ ಶಮಿಮ್ ಬದಲಿಗೆ ಮೆಹ್ದಿ ಹಸನ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಇಂಗ್ಲೆಂಡ್ ತಂಡದಲ್ಲಿ ಮಾರ್ಕ್ ವುಡ್ ಆಡುವ ಬಳಗದಿಂದ ಹೊರಬಿದ್ದಿದ್ದು ಅವರ ಸ್ಥಾನದಲ್ಲಿ ರೆಹಾನ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ.

Live ಸ್ಕೋರ್ ಹೀಗಿದೆ

1
56818

ಇನ್ನು ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದ್ದ ಇಂಗ್ಲೆಂಡ್ ತಂಡ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಮುಗ್ಗರಿಸಿತ್ತು. ಚಿತ್ತಗಾಂಗ್‌ನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ಸರ್ವಾಂಗೀಣ ಪ್ರದರ್ಶನ ನೀಡಿ 6 ವಿಕೆಟ್‌ಗಳ ಅಂತರದ ಬೃಹತ್ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿಯೂ ಗೆದ್ದು ಸರಣಿಯನ್ನು ವಶಕ್ಕೆ ಪಡೆಯುವ ವಿಶ್ವಾಸದಲ್ಲಿದೆ ಬಾಂಗ್ಲಾದೇಶ.

ಇನ್ನು ಅದಕ್ಕೂ ಮುನ್ನ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳನ್ನು ಗೆದ್ದ ಇಂಗ್ಲೆಂಡ್ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು. ಆದರೆ ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ಇಂಗ್ಲೆಂಡ್ ತಂಡಕ್ಕೆ ತಿರುಗೇಟು ನೀಡಿ ಸರಣಿಯಲ್ಲಿ ವೈಟ್‌ವಾಶ್ ಅವಮಾನದಿಂದ ಪಾರಾಗಿತ್ತು.

ಬಾಂಗ್ಲಾದೇಶ ಆಡುವ ಬಳಗ: ಲಿಟನ್ ದಾಸ್ (ವಿಕೆಟ್ ಕೀಪರ್), ರೋನಿ ತಾಲುಕ್ದಾರ್, ನಜ್ಮುಲ್ ಹೊಸೈನ್ ಶಾಂಟೋ, ತೌಹಿದ್ ಹೃದಯೋಯ್, ಶಾಕಿಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್, ಹಸನ್ ಮಹಮೂದ್
ಬೆಂಚ್: ಶಮೀಮ್ ಹೊಸೈನ್, ನೂರುಲ್ ಹಸನ್, ತನ್ವಿರ್ ಇಸ್ಲಾಂ, ರೆಜೌರ್ ರೆಹಮಾನ್ ರಾಜಾ

ಇಂಗ್ಲೆಂಡ್ ಆಡುವ ಬಳಗ: ಫಿಲಿಪ್ ಸಾಲ್ಟ್, ಡೇವಿಡ್ ಮಲನ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಬೆನ್ ಡಕೆಟ್, ಮೊಯಿನ್ ಅಲಿ, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್
ಬೆಂಚ್: ಮಾರ್ಕ್ ವುಡ್, ರೀಸ್ ಟಾಪ್ಲಿ

Story first published: Sunday, March 12, 2023, 14:52 [IST]
Other articles published on Mar 12, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+