India Vs Bangladesh : ಕೆಎಲ್ ರಾಹುಲ್, ಕೊಹ್ಲಿ ಅರ್ಧಶತಕ, ಬಾಂಗ್ಲಾದೇಶಕ್ಕೆ 185 ರನ್‌ಗಳ ಗುರಿ ನೀಡಿದ ಟೀಂ ಇಂಡಿಯಾ

ಬಾಂಗ್ಲಾದೇಶದ ವಿರುದ್ಧ ಗೆಲ್ಲಲೇಬೇಕಾದ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿದೆ. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅರ್ಧಶತಕ ಗಳಿಸಿ ಮಿಂಚಿದರು.
ಟಾಸ್ ಗೆದ್ದು ಬಾಂಗ್ಲಾದೇಶ ಫಿಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಭಾರತದ ಆರಂಭಿಕ ಜೋಡಿ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಎಚ್ಚರಿಕೆಯಿಂದಲೇ ಇನ್ನಿಂಗ್ಸ್ ಆರಂಭಿಸಿದರು. ಆರಂಭದಲ್ಲಿ ಕೆಎಲ್ ರಾಹುಲ್ ರನ್ ಗಳಿಸಲು ಪರದಾಡಿದರು. ರೋಹಿತ್ ಶರ್ಮಾ ಒಂದು ಜೀವದಾನ ಪಡೆದರು, ಅದನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಯಶಸ್ವಿಯಾದರು. 8 ಎಸೆತಗಳಲ್ಲಿ ಕೇವಲ 2 ರನ್ ಗಳಿಸಿ ಔಟಾಗುವ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದರು.
ರನ್ ಬರ ಅನುಭವಿಸುತ್ತಿದ್ದ ಕೆಎಲ್ ರಾಹುಲ್ ಕೊನೆಗೂ ತಮ್ಮ ಫಾರ್ಮ್ ಕಂಡುಕೊಳ್ಳುವಲ್ಲಿ ಯಶಸ್ವಿಯಾದರು. ಮೊದಲ ಕೆಲವು ಎಸೆತಗಳಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದರೂ, ನಂತರ ಬೌಂಡಿರಿಗಳನ್ನು ಹೊಡೆದರು. ವಿರಾಟ್ ಕೊಹ್ಲಿ-ಕೆಎಲ್ ರಾಹುಲ್ ಉತ್ತಮ ಜೊತೆಯಾಟ ಆಡಿದರು. ಈ ಜೋಡಿ 67 ರನ್‌ಗಳನ್ನು ಕಲೆ ಹಾಕಿದರು.
ಕೆಎಲ್ ರಾಹುಲ್ 32 ಎಸೆತಗಳಲ್ಲಿ 3 ಬೌಂಡರಿ 4 ಸಿಕ್ಸರ್ ಸಹಿತ 50 ರನ್ ಗಳಿಸಿ ಔಟಾದರು. ನಂತರ ಬಂದ ಸೂರ್ಯಕುಮಾರ್ ಯಾದವ್, 16 ಎಸೆತಗಳಲ್ಲಿ 30 ರನ್ ಗಳಿಸಿ ಔಟಾದರು. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 6 ಎಸೆತಗಳಲ್ಲಿ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ದಿನೇಶ್ ಕಾರ್ತಿಕ್ ಕೂಡ 5 ಎಸೆತಗಳಲ್ಲಿ 7 ರನ್ ಗಳಿಸಿ ರನ್‌ಔಟ್‌ಗೆ ಬಲಿಯಾದರು. ಅಕ್ಷರ್ ಪಟೇಲ್ 7 ರನ್ ಗಳಿಸಿ ಔಟಾದರೆ, ರವಿಚಂದ್ರನ್ ಅಶ್ವಿನ್ 6 ಎಸೆತಗಳಲ್ಲಿ 13 ರನ್ ಗಳಿಸಿದರು.
ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ 2022ರಲ್ಲಿ ತಮ್ಮ 3 ನೇ ಅರ್ಧಶತಕ ಗಳಿಸಿ ಮಿಂಚಿದರು. 44 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 64 ರನ್ ಗಳಿಸುವ ಮೂಲಕ ಭಾರತ ಬೃಹತ್ ಮೊತ್ತ ಕಲೆಹಾಕುವಲ್ಲಿ ಕಾರಣವಾದರು.
ಉಭಯ ತಂಡಗಳ ಆಡುವ ಬಳಗ
ಭಾರತ : ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್(ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ಮೊಸದ್ದೆಕ್ ಹೊಸೈನ್, ಶೋರಿಫುಲ್ ಇಸ್ಲಾಂ, ನೂರುಲ್ ಹಸನ್, ಮುಸ್ತಫಿಜುರ್ ರೆಹಮಾನ್, ಹಸನ್ ಮಹಮೂದ್, ತಸ್ಕಿನ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications