
ನ್ಯೂಜಿಲೆಂಡ್‌ನಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯಲ್ಲಿ ಇಂದು ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಾಕಿಸ್ತಾನ ತಂಡ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ನ್ಯೂಜಿಲೆಂಡ್, ಪಾಕಿಸ್ತಾನ ಹಾಗೂ ಬಾಂಗ್ಲಾದೇಶಗಳು ಭಾಗವಹಿಸಿರುವ ಈ ತ್ರಿಕೋನ ಸರಣಿಯಲ್ಲಿ ಈಗಾಗಲೇ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾ ತಂಡಗಳು ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಬಾಂಗ್ಲಾದೇಶ ತಂಡ ಒಂದೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಟೂರ್ನಿಯಿಂದ ಹೊರಬಿದ್ದರೂ ವಿಶ್ವಕಪ್‌ನಲ್ಲಿ ಭಾಗವಹಿಸುವುದಕ್ಕೂ ಮುನ್ನ ಆತ್ಮವಿಶ್ವಾಸಗಳಿಸಿಕೊಳ್ಳಲು ಈ ಪಂದ್ಯದಲ್ಲಿ ಗೆಲುವು ಪ್ರಮುಖವಾಗಿರಲಿದೆ.
Live ಸ್ಕೋರ್ ಹೀಗಿದೆ
ಈ ಸರಣಿಯಲ್ಲಿ ಆತಿಥೇಯ ನ್ಯೂಜಿಲೆಂಡ್ ತಂಡ ಐದು ಪಂದ್ಯಗಳ ಪೈಕಿ ನಾಲ್ಕು ಗೆಲುವು ಸಾಧಿಸಿದೆ. ಪಾಕಿಸ್ತಾನದ ವಿರುದ್ಧ ಸೋಕು ಅನುಭವಿಸಿದ್ದರೂ ಎರಡನೇ ಬಾರಿಯ ಮುಖಾಮುಖಿಯಲ್ಲಿ ಈ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಈ ತ್ರಿಕೋನ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಳ್ಳಳು ನ್ಯೂಜಿಲೆಂಡ್ ತಂಡ ಹವಣಿಸುತ್ತಿದೆ. ಮತ್ತೊಂದೆಡೆ ಪಾಕಿಸ್ತಾನ ತಂಡ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿಯಾಗಿ ಗೆದ್ದು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿತ್ತು. ಆದರೆ ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲು ತಂಡದ ಮಧ್ಯಮ ಕ್ರಮಾಂಕದ ವೈಫಲ್ಯವನ್ನು ಮತ್ತೊಮ್ಮೆ ತೆರೆದಿಟ್ಟಿದೆ. ಹೀಗಾಗಿ ಮಧ್ಯಮ ಕ್ರಮಾಂಕ ಪಾಕಿಸ್ತಾನ ತಂಡಕ್ಕೆ ವಿಶ್ವಕಪ್‌ನಲ್ಲಿಯೂ ತಲೆನೋವು ತಂದಿಡುವ ಸಾಧ್ಯತೆ ದಟ್ಟವಾಗಿದೆ. ಆರಂಭಿಕರಾದ ಮೊಹಮ್ಮದ್ ರಿಜ್ವಾನ್ ಹಾಗೂ ಬಾಬರ್ ಅಜಂ ಅವರನ್ನೇ ನೆಚ್ಚಿಕೊಂಡಿದೆ ಪಾಕಿಸ್ತಾನ
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ವಿಕೆಟ ಕೀಪರ್), ಬಾಬರ್ ಅಜಮ್ (ನಾಯಕ), ಶಾನ್ ಮಸೂದ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಹೈದರ್ ಅಲಿ, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಮೊಹಮ್ಮದ್ ಹಸ್ನೇನ್
ಬೆಂಚ್: ಶಾನವಾಜ್ ದಹಾನಿ, ಮೊಹಮ್ಮದ್ ಹ್ಯಾರಿಸ್, ಹಾರಿಸ್ ರೌಫ್, ಖುಷ್ದಿಲ್ ಶಾ, ಶಾಹೀನ್ ಅಫ್ರಿದಿ, ಉಸ್ಮಾನ್ ಖಾದಿರ್
ಬಾಂಗ್ಲಾದೇಶ ಆಡುವ ಬಳಗ: ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ಮೊಹಮ್ಮದ್ ಸೈಫುದ್ದೀನ್, ಶೋರಿಫುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಹಸನ್ ಮಹಮೂದ್
ಬೆಂಚ್: ಮೊಸದ್ದೆಕ್ ಹೊಸೈನ್, ಎಬಾಡೋತ್ ಹೊಸೈನ್, ಸಬ್ಬೀರ್ ರೆಹಮಾನ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಮೆಹಿದಿ ಹಸನ್ ಮಿರಾಜ್