ಬಾಂಗ್ಲಾದೇಶ vs ಶ್ರೀಲಂಕಾ, ಟೆಸ್ಟ್ ಸರಣಿ: ಮೊದಲ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯ

ಬಾಂಗ್ಲಾದೇಶ ಹಾಗೂ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಅಂತ್ಯವಾಗಿದ್ದು ನೀರಸ ಡ್ರಾ ಕಂಡಿದೆ. ಚಟ್ಟೋಗ್ರಾಮ್‌ನ ಜಹುರ್ ಅಹ್ಮದ್ ಚೌಧರಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ಉತ್ತಮ ಹೋರಾಟವನ್ನು ನಡೆಸಿದವು. ಆದರೆ ಅಂತಿವಾಗಿ ಪಂದ್ಯ ಡ್ರಾ ಫಲಿತಾಂಶವನ್ನು ಕಂಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಉತ್ತಮ ಪ್ರದರ್ಶನ ನೀಡಿತ್ತು. ಅನುಭವಿ ಆಟಗಾರ ಏಂಜಲೋ ಮ್ಯಾಥ್ಯೂಸ್ ಅವರ ಭರ್ಜರಿ 199 ರನ್‌ಗಳ ಕೊಡುಗೆ ಹಾಗೂ ಚಾಂಡಿಮಲ್ ಹಾಗೂ ಕುಸಲ್ ಮೆಂಡಿಸ್ ಅರ್ಧ ಶತಕದ ನೆರವಿನೊಂದಿಗೆ ಲಂಕಾ 397 ರನ್‌ಗಳನ್ನು ಪೇರಿಸಿ ಆಲೌಟ್ ಆಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶದ ಪರವಾಗಿ ನಯೀಮ್ 6 ವಿಕೆಟ್ ಸಂಪಾದಿಸಿ ಮಿಂಚಿದರು.
ಇನ್ನು ನಂತರ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್ ನಡೆಸಿದ ಬಾಂಗ್ಲಾದೇಶ ಅದ್ಭುತ ಆರಂಭದೊಂದಿಗೆ ಇನ್ನಿಂಗ್ಸ್ ಆರಂಭಿಸಿತು. ಮೊದಲ ವಿಕೆಟ್‌ಗೆ 162 ರನ್‌ಗಳ ಜೊತೆಯಾಟ ಬಂದಿತ್ತು. ಈ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದೇಶದ ಪರವಾಗಿ ತಮೀಮ ಇಕ್ಬಾಲ್ ಹಾಗೂ ಮುಷ್ಫಿಕರ್ ರಹೀಮ್ ಭರ್ಜರಿ ಶತಕ ಸಿಡಿಸಿ ಮಿಂಚಿದರು. ಮಹ್ಮದುಲ್ಲಾ ಹಸನ್ ಜಾಯ್ ಹಾಗೂ ಲಿಟನ್ ದಾಸ್ ಅರ್ಧ ಶತಕದ ಕೊಡುಗೆ ನೀಡಿದರು. ಇನ್ನು ಈ ಬ್ಯಾಟಿಂಗ್ ಪ್ರದರ್ಶನದ ನೆರವಿನೊಂದಿಗೆ 465 ರನ್‌ಗಳನ್ನು ಗಳಿಸಿದ್ದಲ್ಲದೆ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು.
ನಂತರ ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ಆರಂಭದಲ್ಲಿ ಎರಡು ವಿಕೆಟ್‌ಗಳನ್ನು ಶೀಘ್ರವಾಗಿ ಕಳೆದುಕೊಂಡಿತ್ತು. ಈ ಮೂಲಕ ಬಾಂಗ್ಲಾ ಮೇಲುಗೈ ಸಾಧಿಸುವ ಸೂಚನೆ ನೀಡಿತು. ಆದರೆ ಅದಕ್ಕೆ ಲಂಕಾ ಬ್ಯಾಟರ್‌ಗಳು ಅವಕಾಶ ನೀಡಲಿಲ್ಲ. ಅಂತಿಮ ದಿನವಿಡೀ ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಡ್ರಾ ಮಾಡಿಕೊಳ್ಳಲು ನಿರ್ಧರಿಸಿದ್ದು ಸ್ಪಷ್ಟವಾಗಿತ್ತು. ನಿರೀಕ್ಷೆಯಂತೆಯೇ ಪಂದ್ಯ ಡ್ರಾದಲ್ಲಿ ಅಂತ್ಯವಾಯಿತು. ನಾಯಕ ದಿಮುತ್ ಕರುಣ ರತ್ನೆ ಹಾಗೂ ನಿರೋಶನ್ ಡಿಕ್‌ವೆಲ್ಲಾ ಅರ್ಧ ಶತಕದ ಕೊಡುಗೆ ನೀಡಿದ್ದಾರೆ.
ಪ್ಲೇಯಿಂಗ್ XI:
ಬಾಂಗ್ಲಾದೇಶ: ತಮೀಮ್ ಇಕ್ಬಾಲ್, ಮಹಮ್ಮದುಲ್ ಹಸನ್ ಜಾಯ್, ನಜ್ಮುಲ್ ಹುಸೇನ್ ಶಾಂಟೊ, ಮೊಮಿನುಲ್ ಹಕ್ (ನಾಯಕ), ಮುಶ್ಫಿಕರ್ ರಹೀಮ್, ಲಿಟನ್ ದಾಸ್ (ವಿಕೆಟ್ ಕೀಪರ್), ಶಕೀಬ್ ಅಲ್ ಹಸನ್, ನಯೀಮ್ ಹಸನ್, ತೈಜುಲ್ ಇಸ್ಲಾಂ, ಖಲೀದ್ ಅಹ್ಮದ್, ಶೋರಿಫುಲ್ ಇಸ್ಲಾಂ
ಬೆಂಚ್: ಯಾಸಿರ್ ಅಲಿ, ಎಬಾಡೋತ್ ಹೊಸೈನ್, ನೂರುಲ್ ಹಸನ್, ಮೊಸದ್ದೆಕ್ ಹೊಸೈನ್, ಶೋಹಿದುಲ್ ಇಸ್ಲಾಂ, ರೆಜೌರ್ ರೆಹಮಾನ್ ರಾಜಾ
ಶ್ರೀಲಂಕಾ ತಂಡ: ದಿಮುತ್ ಕರುಣಾರತ್ನೆ (ನಾಯಕ), ಓಶದ ಫೆರ್ನಾಂಡೊ, ಕುಸಾಲ್ ಮೆಂಡಿಸ್, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ದಿನೇಶ್ ಚಾಂಡಿಮಲ್, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ರಮೇಶ್ ಮೆಂಡಿಸ್, ಲಸಿತ್ ಎಂಬುಲ್ಡೆನಿಯಾ, ವಿಶ್ವ ಫೆರ್ನಾಂಡೊ, ಅಸಿತ ಫೆರ್ನಾಂಡೊ
ಬೆಂಚ್: ಪ್ರವೀಣ್ ಜಯವಿಕ್ರಮ, ಕಸುನ್ ರಜಿತಾ, ಕಮಿಂದು ಮೆಂಡಿಸ್, ಚಾಮಿಕಾ ಕರುಣಾರತ್ನೆ, ಕಮಿಲ್ ಮಿಶ್ರಾ, ದಿಲ್ಶನ್ ಮಧುಶಂಕ, ಸುಮಿಂದಾ ಲಕ್ಷಣ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications