For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021-ದ್ವಿತೀಯ ಹಂತದ ಸಂಪೂರ್ಣ ವೇಳಾಪಟ್ಟಿ, ಪ್ರಮುಖ ಮಾಹಿತಿಗಳು!

BCCI allows bubble to bubble transfer from England, West Indies and Sri Lanka players for IPL 2021

ನವದೆಹಲಿ: ಕೋವಿಡ್-19 ಕಾರಣದಿಂದಾಗಿ ಅರ್ಧಕ್ಕೆ ನಿಲ್ಲಿಸಲ್ಪಟ್ಟಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2021ರ ಆವೃತ್ತಿ ಮರುಚಾಲನೆಗೊಳ್ಳಲಿದೆ. ಸೆಪ್ಟೆಂಬರ್ 19ರಿಂದ ಅಕ್ಟೋಬರ್ 15ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ (ಯುಎಇ)ನಲ್ಲಿ ಐಪಿಎಲ್ ಶುರುವಾಗಲಿದೆ. ಈ ಬಾರಿಯ ಐಪಿಎಲ್‌ಗೆ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಕೋವಿಡ್-19 ಕ್ವಾರಂಟೈನ್ ನಿಯಮದಲ್ಲಿ ಒಂದಿಷ್ಟು ಬದಲಾವಣೆ ಮಾಡಿಕೊಂಡಿದೆ. ವಿದೇಶಿ ಆಟಗಾರರಿಗೆ ಈ ನಿಯಮದಿಂದ ಹೆಚ್ಚಿನ ಅನುಕೂಲವಾಗಲಿದೆ.

ವಿದೇಶಿ ಸರಣಿಗಳ ವೇಳೆ ಬಯೋಬಬಲ್‌ನಲ್ಲಿದ್ದ ಆಟಗಾರರು ಐಪಿಎಲ್ ಆಟಗಾರರು ಅಲ್ಲಿನ ಬಯೋಬಬಲ್ ಪ್ರವೇಶಿಸುವ ಮುನ್ನ ಮತ್ತೆ ಕ್ವಾರಂಟೈನ್ ಪಾಲಿಸಬೇಕೆಂಬ ನಿಯಮ ಹಿಂದೆಯಿತ್ತು. ಆದರೆ ಈ ನಿಯಮವನ್ನು ಈಗ ಬದಲಾಯಿಸಲಾಗಿದೆ. ಇಂಗ್ಲೆಂಡ್‌, ವೆಸ್ಟ್ ಇಂಡೀಸ್, ಶ್ರೀಲಂಕಾ ಆಟಗಾರರು ಬಯೋಬಬಲ್‌ನಿಂದ ಬಯೋಬಬಲ್‌ಗೆ ನೇರವಾಗಿ ಪ್ರವೇಶಿಸಲು ಬಿಸಿಸಿಐ ಅನುಮತಿ ನೀಡಿದೆ.

ಆಟಗಾರರು ಕೋವಿಡ್-19 ವ್ಯಾಕ್ಸಿನೇಶನ್ ಮುಗಿಸಿರಬೇಕು

ಆಟಗಾರರು ಕೋವಿಡ್-19 ವ್ಯಾಕ್ಸಿನೇಶನ್ ಮುಗಿಸಿರಬೇಕು

ಐಪಿಎಲ್ ದ್ವಿತೀಯ ಹಂತದ ಪಂದ್ಯಗಳು ಆರಂಭವಾಗುವಾಗ ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ಆಟಗಾರರು, ಸಿಬ್ಬಂದಿಗಳು ಪ್ರವಾಸ ಸರಣಿಯಲ್ಲಿರುತ್ತಾರೆ. ಅವರೆಲ್ಲಾ ಬಯೋಬಬಲ್ ಒಳಗೇ ಇರುವುದರಿಂದ ಅಲ್ಲಿನ ಬಯೋಬಬಲ್‌ನಿಂದ ನೇರವಾಗಿ ಯುಎಇಯಲ್ಲಿರುವ ಐಪಿಎಲ್ ಬಯೋಬಬಲ್‌ಗೆ ಪ್ರವೇಶಿಸಬಹುದು ಎಂದು ಬಿಸಿಸಿಐ ಹೇಳಿದೆ. ಹೀಗಾಗಿ ಐಪಿಎಲ್‌ನಲ್ಲಿ ಪಾಲ್ಗೊಳ್ಳುವ ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ಆಟಗಾರರು ಐಪಿಎಲ್ ಆರಂಭಕ್ಕೂ ಮುನ್ನ ಬೇರೆ ಬಯೋಬಬಲ್ ಒಳಗಿದ್ದರೆ ಅವರು ನೇರವಾಗಿ ಐಪಿಎಲ್ ಬಯೋಬಬಲ್ ಒಳಗೆ ಪ್ರವೇಶಿಸಬಹುದು ಎಂದು ಬಿಸಿಸಿಐ ಹೇಳಿದೆ. ಅಂದ್ಹಾಗೆ ಐಪಿಎಲ್ ಮಾಜಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಗಸ್ಟ್ 13ರಂದು ಐಪಿಎಲ್‌ಗಾಗಿ ಯುಎಇಗೆ ತೆರಳಲಿದೆ. ಯುಎಇಗೆ ತೆರಳುವುದಕ್ಕೂ ಮುನ್ನ ಎಲ್ಲಾ 8 ತಂಡಗಳ ಆಟಗಾರರು ಕೋವಿಡ್-19 ವ್ಯಾಕ್ಸಿನೇಶನ್ ಮುಗಿಸಿರಬೇಕು ಎಂದು ಬಿಸಿಸಿಐ ಹೇಳಿದೆ.

ದ್ವಿತೀಯ ಹಂತದ ಐಪಿಎಲ್ ಯಾವಾಗ ಆರಂಭ?

ದ್ವಿತೀಯ ಹಂತದ ಐಪಿಎಲ್ ಯಾವಾಗ ಆರಂಭ?

ಮೊದಲ ಹಂತದ ಐಪಿಎಲ್‌ನಲ್ಲಿ ಒಟ್ಟು 29 ಪಂದ್ಯಗಳು ನಡೆದಿದ್ದವು. ಇನ್ನು ಉಳಿದ 31 ಪಂದ್ಯಗಳು ಯುನೈಟೆಡ್ ಅರಬ್ ಎಮಿರೇಟ್ಸ್‌ (ಯುಎಇ)ನಲ್ಲಿ ನಡೆಯಲಿವೆ. ದ್ವಿತೀಯ ಹಂತದ ಐಪಿಎಲ್ ಪಂದ್ಯಗಳು ಸೆಪ್ಟೆಂಬರ್‌ 19ರಿಂದ ಆರಂಭಗೊಳ್ಳಲಿವೆ. ಅಕ್ಟೋವರ್‌ 13ರಂದು ಫೈನಲ್‌ ನಡೆಯಲಿದೆ. ನಡೆಯಲಿರುವ 31 ಪಂದ್ಯಗಳಲ್ಲಿ 13 ಪಂದ್ಯಗಳು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯಗಳು ಇದೇ ಸ್ಟೇಡಿಯಂನಲ್ಲಿ ನಡೆಯಲಿವೆ. ಶಾರ್ಜಾ ಸ್ಟೇಡಿಯಂನಲ್ಲಿ 10 ಪಂದ್ಯಗಳು ನಡೆಯಲಿವೆ. ಇದರಲ್ಲಿ ದ್ವಿತೀಯ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯ ಸೇರಿದೆ. ಐಪಿಎಲ್ ದ್ವಿತೀಯ ಹಂತದ ಐಪಿಎಲ್ ಪಂದ್ಯಗಳ ವೇಳೆ ಒಟ್ಟು 7 ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿವೆ.

ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ

ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ

ಐಪಿಎಲ್ ದ್ವಿತೀಯ ಹಂತದ ಪಂದ್ಯಗಳ ವೇಳೆ ನಡೆಯುವ 7 ಡಬಲ್ ಹೆಡ್ಡರ್ ಪಂದ್ಯಗಳಲ್ಲಿ ಮೊದಲ ಡಬಲ್ ಹೆಡ್ಡರ್ ಪಂದ್ಯ ಸೆಪ್ಟೆಂಬರ್‌ 25ರಂದು ನಡೆಯಲಿದೆ. ಕಳೆದ ಸೀಸನ್‌ನಂತೆ ಡಬಲ್ ಹೆಡ್ಡರ್ ವೇಳೆ ಮೊದಲ ಪಂದ್ಯ ಭಾರತೀಯ ಕಾಲಮಾನ 3:30 PMಕ್ಕೆ (14:00 ಯುಎಇ ಸಮಯ) ನಡೆದರೆ, ಎರಡನೇ ಪಂದ್ಯ 7:30 PMಗೆ (18:00) ಶುರುವಾಗಲಿದೆ. ಡಬಲ್ ಹೆಡ್ಡರ್ ವೇಳೆ ಎಲ್ಲಾ ತಂಡಗಳಿಗೂ ಕನಿಷ್ಠ ಒಂದು ಪಂದ್ಯ ಮಧ್ಯಾಹ್ನ ಸಿಗಲಿದೆ. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 3 ಮಧ್ಯಾಹ್ನದ ಪಂದ್ಯಗಳನ್ನಾಡಿದರೆ, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್‌ ಎರಡೆರಡು ಮಧ್ಯಾಹ್ನದ ಪಂದ್ಯಗಳನ್ನಾಡಲಿವೆ. ಐಪಿಎಲ್ ದ್ವಿತೀಯ ಹಂತದಲ್ಲಿ ಮೊದಲ ಪಂದ್ಯವಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ಮುಖಾಮುಖಿಯಾಗಲಿವೆ.

ಐಪಿಎಲ್ 2021 ದ್ವಿತೀಯ ಹಂತದ ಸಂಪೂರ್ಣ ವೇಳಾಪಟ್ಟಿ ಕೆಳಗಿದೆ. ಫೈನಲ್ ಪಂದ್ಯ ಅಕ್ಟೋಬರ್ 15ರಂದು ದುಬೈನಲ್ಲಿ ನಡೆಯಲಿದೆ.

BCCI allows bubble to bubble transfer from England, West Indies and Sri Lanka players for IPL 2021

Story first published: Saturday, August 7, 2021, 17:48 [IST]
Other articles published on Aug 7, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+