ಒಲಿಂಪಿಕ್ಸ್‌ಗೆ ಸೇರ್ಪಡೆಯಾಗುತ್ತಾ ಕ್ರಿಕೆಟ್?: ಭಾರತದ ಭಾಗವಹಿಸುವಿಕೆ ಬಗ್ಗೆ ಜಯ್ ಶಾ ಸ್ಪಷ್ಟನೆ

ಟೋಕಿಯೋ ಒಲಿಂಪಿಕ್ಸ್ 2020 ಭಾನುವಾರ ಅಂತ್ಯವಾಗಿದೆ. ಈ ಮಹತ್ವದ ಕ್ರೀಡಾಕೂಟ ಅಂತ್ಯಗೊಳ್ಳುವ ವೇಳೆಗೆ ಭಾರತ 7 ಪದಕಗಳನ್ನು ಖಾತೆಗೆ ಹಾಕಿಕೊಳ್ಳುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಆಧುನಿಕ ಒಲಿಂಪಿಕ್ಸ್ ಆರಂಭವಾದ ಬಳಿಕ ಭಾರತ ಒಲಿಂಪಿಕ್ಸ್‌ನಲ್ಲಿ ಪಡೆದ ಅತ್ಯುತ್ತಮ ಪ್ರದರ್ಶನ ಇದಾಗಿದೆ. ಹೀಗಾಗಿ ಭಾರತದ ಕ್ರೀಡಾಪಟುಗಳ ಈ ಬಾರಿಯ ಸಾಧನೆ ದೇಶದ ಎಲ್ಲಾ ನಾಗರೀಕರಿಗೆ ಹೆಮ್ಮೆ ಮೂಡಿಸುವಂತಿದೆ. ಈ ಮಧ್ಯೆ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್‌ಅನ್ನು ಕೂಡ ಸೇರ್ಪಡೆಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ. ಹೀಗಾಗಿ ಈ ಬೆಳವಣಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಯಾಗುವ ಸಾಧ್ಯತೆ ಹೆಚ್ಚಾಗಿದೆ. 8 ತಂಡಗಳ ಮಧ್ಯೆ ಪದಕಕ್ಕಾಗಿ ಕದನ ನಡೆಯುವ ಸಾಧ್ಯತೆಯಿದೆ. ಈ ಮೂಲಕ ಒಲಿಂಪಿಕ್ಸ್‌ಗೆ ಕ್ರಿಕೆಟ್ ಮರು ಸೇರ್ಪಡೆಯಾಗಲು ವೇದಿಕೆ ಸಜ್ಜಾಗುತ್ತಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಆಡುವ ಕ್ರೀಡೆಗಳ ಪೈಕಿ ಕ್ರಿಕೆಟ್ ಕೂಡ ಒಂದಾಗಿದ್ದರೂ ಒಲಿಂಪಿಕ್ಸ್‌ನಲ್ಲಿ ಸೇರ್ಪಡೆಯಾಗದಿರುವುದು ಕ್ರಿಕೆಟ್ ಪ್ರೇಮಿಗಳ ನಿರಾಸೆಗೆ ಕಾರಣವಾಗಿತ್ತು. ಆದರೆ ಆ ದಿನಗಳು ಹತ್ತಿರವಾಗುವ ಸಾಧ್ಯತೆ ಕಾಣಿಸುತ್ತಿದೆ.

ಒಲಿಂಪಿಕ್ಸ್‌ನ ಭಾಗವಾಗಿತ್ತಾ ಕ್ರಿಕೆಟ್?
ಹೌದು, ಬಹುತೇಕರಿಗೆ ಈ ವಿಚಾರ ತಿಳಿದಿರುವ ಸಾಧ್ಯತೆ ತುಂಬಾ ಕಡಿಮೆ. ಕ್ರಿಕೆಟ್ ಈವರೆಗೆ ಒಲಿಂಪಿಕ್ಸ್‌ನಲ್ಲಿ ಭಾಗವಾಗಿಲ್ಲ ಎಂದೇ ಭಾವಿಸಿದ್ದಾರೆ. ಆದರೆ 1900ನೇ ಇಸವಿಯಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಕೂಡ ಸ್ಪರ್ಧೆಯಲ್ಲಿತ್ತು. ಈ ಸಂದರ್ಭದಲ್ಲಿ ಕೇವಲ ಎರಡು ತಂಡಗಳು ಮಾತ್ರವೇ ಕ್ರಿಕೆಟ್‌ನಲ್ಲಿ ಪದಕ್ಕಾಗಿ ಭಾಗವಹಿಸಿದ್ದವು. ಫ್ರಾನ್ಸ್ ಹಾಗೂ ಗ್ರೇಟ್ ಬ್ರಿಟನ್ ಮಧ್ಯೆ ಪದಕಕ್ಕಾಗಿ ಸ್ಪರ್ಧೆ ಏರ್ಪಟ್ಟಿತ್ತು. ಎರಡು ದಿನಗಳ ಕ್ರಿಕೆಟ್ ಪಂದ್ಯವನ್ನು ಒಲಿಂಪಿಕ್ಸ್‌ನಲ್ಲಿ ಆಯೋಜಿಸಲಾಗಿದ್ದು ಇದರಲ್ಲಿ ಗ್ರೇಟ್ ಬ್ರಿಟನ್ ಗೆದ್ದು ಚಿನ್ನದ ಪದಕ ಗಳಿಸಿದ್ದರೆ ಫ್ರಾನ್ಸ್ ಸೋಲು ಕಾಣುವ ಮೂಲಕ ಬೆಳ್ಳಿಯ ಪದಕವನ್ನು ಮುಡಿಗೇರಿಸಿಕೊಂಡಿತ್ತು.

ಕ್ರಿಕೆಟ್ ಸೇರ್ಪಡೆಗೆ ಐಸಿಸಿ ಪ್ರಸ್ತಾವನೆ
ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ಅನ್ನು ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಈ ಹಿಂದೆಯೇ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಗೆ ಪ್ರಸ್ತಾವನೆಯನ್ನು ಕಳುಹಿಸಿತ್ತು. ಆದರೆ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ನ ಸೇರ್ಪಡೆಗೆ ಬಿಸಿಸಿಐ ಹಿಂದೇಟು ಹಾಕಿತ್ತು. ಹೀಗಾಗಿ ಐಸಿಸಿ ಕೂಡ ಈ ಪ್ರಸ್ತಾವನೆಯ ಬಗ್ಗೆಮರು ಚಿಂತನೆ ನಡೆಸುವಂತಾಗಿತ್ತು.

ಒಲಿಂಪಿಕ್ಸ್‌ಗೆ ಸೇರ್ಪಡೆಯಾದರೆ ಭಾರತ ಭಾಗವಹಿಸಲಿದೆ
ಈಗಿನ ವರದಿಗಳ ಪ್ರಕಾರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಈ ಬಗ್ಗೆ ಹೇಳಿಕೆಯನ್ನು ನೀಡಿದ್ದು ಕ್ರಿಕೆಟ್ ಒಲಿಂಪಿಕ್ಸ್‌ನ ಭಾಗವಾದರೆ ಭಾರತ ಈ ಟೂರ್ನಿಯಲ್ಲಿ ಭಾಗಿಯಾಗಲಿದೆ ಎಂದಿದ್ದಾರೆ ಎಂದು ವರದಿಯಾಗಿದೆ. "ಕ್ರಿಕೆಟ್ ಒಲಿಂಪಿಕ್ಸ್‌ನಲ್ಲಿ ಸೇರ್ಪಡೆಯಾದಲ್ಲಿ ಭಾರತ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದೆ" ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಟಿ20 ಮಾದರಿ ಸೇರ್ಪಡೆಗೊಳಿಸುವ ಸಾಧ್ಯತೆ
ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ಅನ್ನು ಸೇರ್ಪಡೆಗಿಳಿಸುವ ಬಗ್ಗೆ ಇನ್ನೂ ಸ್ಪಷ್ಟನೆಯಿಲ್ಲ. ಅಲ್ಲದೆ ಯಾವ ಮಾದರಿಯ ಕ್ರಿಕೆಟ್‌ಅನ್ನು ಆಡಿಸಲಾಗುತ್ತದೆ ಎಂಬ ಬಗ್ಗೆಯೂ ಗೊಂದಲಗಳು ಇವೆ. ಎರಡು ತಂಡಗಳು ಭಾಗವಹಿಸುವ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಟಿ20 ಮಾದರಿಯನ್ನು ಸೇರ್ಪಡೆಗೊಳಿಸುವ ಸಾಧ್ಯತೆಯಿದೆ. ನಾಲ್ಕು ಗಂಟೆಗಳ ಅವಧಿಯಲ್ಲಿ ಫಲಿತಾಂಶ ಪಡೆಯುವ ಸಾಧ್ಯತೆಯಿರುವ ಕಾರಣದಿಂದಾಗಿ ಚುಟುಕು ಮಾದರಿಯೇ ಸೂಕ್ತ ಎನ್ನಲಾಗುತ್ತಿದೆ.

ಟೋಕಿಯೋ ಒಲಿಂಪಿಕ್ಸ್ ಸಾಧನೆಗೆ ಬಿಸಿಸಿಐ ಹರ್ಷ
ಇನ್ನು ಮತ್ತೊಂದೆಡೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ನೀಡಿದ ಪ್ರದರ್ಶನದಿಂದಾಗಿ ಬಿಸಿಸಿಐ ಸಂತಸಗೊಂಡಿದೆ. ಭಾರತ ಸರ್ಕಾರದೊಂದಿಗೆ ಜೊತೆಯಾಗಿ ಸೇರಿಕೊಂಡು ಭಾರತದ ಪದಕದ ಅವಕಾಶಗಳನ್ನು ಹೆಚ್ಚಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧಿಕಾರಿಯೊಬ್ಬರು ಹಿಂದೂಸ್ತಾನ್ ಟೈಮ್ಸ್‌ಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications