For Quick Alerts
ALLOW NOTIFICATIONS  
For Daily Alerts
 

WTC Final: ಗಾಯಗೊಂಡಿದ್ದ ಕೆಎಲ್ ರಾಹುಲ್ ತಂಡದಿಂದ ಔಟ್; ಬದಲಿ ಆಟಗಾರನ ನೇಮಕ!

BCCI announce revised India squad for WTC final and Ishan Kishan is replacing injured KL Rahul

ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿ ಫೈನಲ್‌ಗೆ ಆಸ್ಟ್ರೇಲಿಯಾ ಹಾಗೂ ಟೀಮ್ ಇಂಡಿಯಾ ತಂಡಗಳು ಅರ್ಹತೆ ಗಿಟ್ಟಿಸಿಕೊಂಡಿವೆ. ಆಸ್ಟ್ರೇಲಿಯಾ ಎಲ್ಲಾ ತಂಡಗಳಿಗಿಂತ ಹೆಚ್ಚು ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಮೊದಲೇ ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿತ್ತು.

ನಂತರ ಇದೇ ವರ್ಷದ ಫೆಬ್ರವರಿ ಹಾಗೂ ಮಾರ್ಚ್ ತಿಂಗಳುಗಳಲ್ಲಿ ಭಾರತದಲ್ಲಿಯೇ ನಡೆದ ಬಾರ್ಡರ್ - ಗವಾಸ್ಕರ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 2-1 ಅಂತರದಲ್ಲಿ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅರ್ಹತಾ ತಂಡಗಳ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಮೂರನೇ ಸ್ಥಾನಕ್ಕೆ ತಳ್ಳಿ ತಾನು ದ್ವಿತೀಯ ಸ್ಥಾನವನ್ನು ಅಲಂಕರಿಸಿಕೊಂಡಿತು.

ಹೀಗೆ ಆಸ್ಟ್ರೇಲಿಯಾ ತಂಡದ ವಿರುದ್ಧ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದು ಟ್ರೋಫಿಗಾಗಿ ಸೆಣಸಾಡಲು ಭಾರತ ಅರ್ಹತೆಯನ್ನು ಗಿಟ್ಟಿಸಿಕೊಂಡಿತು. ಇನ್ನು ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿಯೂ ಭಾರತ ಫೈನಲ್ ಪಂದ್ಯವನ್ನು ತಲುಪಿತ್ತು ಹಾಗೂ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ವಿರುದ್ಧ ಕಣಕ್ಕಳಿದಿತ್ತು. ಸೌಥಂಪ್ಟನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದ ಆ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ 8 ವಿಕೆಟ್‌ಗಳ ಗೆಲುವನ್ನು ಸಾಧಿಸಿದ್ದ ನ್ಯೂಜಿಲೆಂಡ್ ಪ್ರಥಮ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟೂರ್ನಿಯಲ್ಲಿಯೇ ಚಾಂಪಿಯನ್ ಆಗಿತ್ತು.

ಹೀಗೆ ಪ್ರಥಮ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದ ಟೀಮ್ ಇಂಡಿಯ್ ಈ ಬಾರಿ ಚಾಂಪಿಯನ್ ಆಗುವತ್ತ ಚಿತ್ತ ನೆಟ್ಟಿದೆ. ಆದರೆ ಟೂರ್ನಿ ಆರಂಭವಾಗುವ ಮುನ್ನವೇ ತಂಡದ ಪ್ರಮುಖ ಆಟಗಾರರು ಗಾಯಕ್ಕೊಳಗಾಗಿ ಟೂರ್ನಿಗೆ ಅಲಭ್ಯರಾಗುತ್ತಿರುವುದು ತಂಡಕ್ಕೆ ಹಿನ್ನಡೆಯಾಗಿದೆ.

ಅದರಲ್ಲಿಯೂ ತಂಡದ ಮುಖ್ಯ ಹಾಗೂ ಓಪನರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಗಾಯಕ್ಕೊಳಗಾಗಿ ಟೂರ್ನಿಯಿಂದ ಹೊರಬಿದ್ದಿದ್ದು, ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ ಎಂಬ ಸುದ್ದಿಯನ್ನು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ.

ಟ್ವೀಟ್ ಮೂಲಕ ಈ ವಿಷಯವನ್ನು ಹಂಚಿಕೊಂಡಿರುವ ಬಿಸಿಸಿಐ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಿಂದ ಹೊರಬಿದ್ದ ಕೆಎಲ್ ರಾಹುಲ್ ಬದಲಾಗಿ ಇಶಾನ್ ಕಿಶನ್ ತಂಡ ಸೇರಿದ್ದು, ರಿಸರ್ವ್ ಪ್ಲೇಯರ್‌ಗಳಾಗಿ ರುತುರಾಜ್ ಗಾಯಕ್ವಾಡ್, ಮುಕೇಶ್ ಕುಮಾರ್ ಹಾಗೂ ಸೂರ್ಯಕುಮಾರ್ ಯಾದವ್ ಸಹ ತಂಡ ಸೇರಿದ್ದಾರೆ ಎಂದು ಪ್ರಕಟಿಸಿದೆ.

ಈ ಬದಲಾವಣೆಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿರುವ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾಡ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್)

ಸ್ಟ್ಯಾಂಡ್‌ಬೈ ಆಟಗಾರರು: ರುತುರಾಜ್ ಗಾಯಕ್‌ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್

Story first published: Monday, May 8, 2023, 18:37 [IST]
Other articles published on May 8, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+