ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ದ.ಆಫ್ರಿಕಾ ಪ್ರವಾಸಕ್ಕೆ 18 ಆಟಗಾರರ ಟೆಸ್ಟ್ ತಂಡ ಪ್ರಕಟಿಸಿದ ಬಿಸಿಸಿಐ; ಕಳಪೆ ಆಟಗಾರರಿಗೆ ಮತ್ತೆ ಅವಕಾಶ!

BCCI announced Indias 18 men squad for the test series against South Africa

ಇತ್ತೀಚೆಗಷ್ಟೇ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಜಯ ಸಾಧಿಸುವ ಮೂಲಕ ಎರಡೂ ಸರಣಿಗಳನ್ನು ಸಹ ವಶಕ್ಕೆ ಪಡೆದುಕೊಂಡಿತು.

ಟಿ20 ವಿಶ್ವಕಪ್ vs ಐಪಿಎಲ್ vs ಒಲಿಂಪಿಕ್ಸ್: ಕ್ರೀಡಾ ಟೂರ್ನಿಗಳಲ್ಲಿ ನಂ.1 ಯಾವುದೆಂಬುದು ಬಹಿರಂಗಟಿ20 ವಿಶ್ವಕಪ್ vs ಐಪಿಎಲ್ vs ಒಲಿಂಪಿಕ್ಸ್: ಕ್ರೀಡಾ ಟೂರ್ನಿಗಳಲ್ಲಿ ನಂ.1 ಯಾವುದೆಂಬುದು ಬಹಿರಂಗ

ಹೌದು, ಇತ್ತೀಚೆಗಷ್ಟೇ ಯುಎಇ ನೆಲದಲ್ಲಿ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡು ಮೊದಲಿಗೆ ಟೀಮ್ ಇಂಡಿಯಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಾದಾಟ ನಡೆಸಿತ್ತು. ಈ 3 ಪಂದ್ಯಗಳ ಪೈಕಿ ಎಲ್ಲಾ ಪಂದ್ಯಗಳಲ್ಲಿಯೂ ನ್ಯೂಜಿಲೆಂಡ್ ತಂಡಕ್ಕೆ ಮಣ್ಣು ಮುಕ್ಕಿಸಿದ್ದ ಟೀಮ್ ಇಂಡಿಯಾ ವೈಟ್ ವಾಷ್ ಸಾಧನೆ ಮಾಡಿತ್ತು. ನಂತರ ಇತ್ತಂಡಗಳ ನಡುವೆ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ ಪಂದ್ಯವನ್ನು ಸೋಲಿನ ಸುಳಿಯಿಂದ ಪಾರಾಗಿ ಡ್ರಾ ಮಾಡಿಕೊಂಡಿದ್ದ ನ್ಯೂಜಿಲೆಂಡ್ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತಿತ್ತು.

ಕಿವೀಸ್ ವಿರುದ್ಧ ಮಾಡಿದ ಆ ತಪ್ಪನ್ನು ಮಾಡಬೇಡಿ; ದ.ಆಫ್ರಿಕಾ ಪ್ರವಾಸ ಕೈಗೊಳ್ಳುವ ಭಾರತಕ್ಕೆ ಲಕ್ಷ್ಮಣ್ ಸಲಹೆಕಿವೀಸ್ ವಿರುದ್ಧ ಮಾಡಿದ ಆ ತಪ್ಪನ್ನು ಮಾಡಬೇಡಿ; ದ.ಆಫ್ರಿಕಾ ಪ್ರವಾಸ ಕೈಗೊಳ್ಳುವ ಭಾರತಕ್ಕೆ ಲಕ್ಷ್ಮಣ್ ಸಲಹೆ

ಹೌದು, ನ್ಯೂಜಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಬೃಹತ್ ಅಂತರದಿಂದ ಜಯ ಸಾಧಿಸುವುದರ ಮೂಲಕ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿರುವ ಟೀಮ್ ಇಂಡಿಯಾ ಇದೀಗ 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಗಳನ್ನು ಆಡಲು ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲು ತಯಾರಿ ನಡೆಸುತ್ತಿದೆ. ದಕ್ಷಿಣ ಆಫ್ರಿಕಾ ಪ್ರವಾಸವನ್ನು ಡಿಸೆಂಬರ್ 17ಕ್ಕೆ ಕೈಗೊಳ್ಳಲಿರುವ ಟೀಮ್ ಇಂಡಿಯಾ ಮೊದಲಿಗೆ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲಿದೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಈ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಮಂಗಳವಾರದಂದೇ ಪ್ರಕಟಿಸಬೇಕಿತ್ತು. ಆದರೆ ಏಕದಿನ ತಂಡದ ನಾಯಕತ್ವದ ಬದಲಾವಣೆ ಕುರಿತಾಗಿ ಸಾಕಷ್ಟು ಚರ್ಚೆಗಳು ನಡೆದ ಕಾರಣ ಒಂದು ದಿನ ತಡವಾಗಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಬಿಸಿಸಿಐ 18 ಆಟಗಾರರನ್ನೊಳಗೊಂಡ ಟೆಸ್ಟ್ ತಂಡವನ್ನು ಪ್ರಕಟಿಸಿದ್ದು, ಸ್ಥಾನ ಪಡೆದುಕೊಂಡಿರುವ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ..

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಪ್ರಕಟವಾಗಿರುವ ಭಾರತ ಟೆಸ್ಟ್ ತಂಡ

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಪ್ರಕಟವಾಗಿರುವ ಭಾರತ ಟೆಸ್ಟ್ ತಂಡ

ಬಿಸಿಸಿಐ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ 18 ಆಟಗಾರರ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಿದ್ದು, 4 ಹೆಚ್ಚುವರಿ ಆಟಗಾರರನ್ನೂ ಕೂಡಾ ನೇಮಿಸಿದೆ. ಒಟ್ಟಾರೆ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲಿರುವ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಎಲ್ಲಾ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.

ತಂಡ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊ. ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.

ಹೆಚ್ಚುವರಿ ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜನ್ ನಾಗ್ವಾಸ್ವಾಲ್ಲಾ

ಸಾಲು ಸಾಲು ಕಳಪೆ ಪ್ರದರ್ಶನ ನೀಡಿರುವ ಆಟಗಾರರಿಗೆ ಮತ್ತೆ ಮಣೆ ಹಾಕಿದ ಬಿಸಿಸಿಐ

ಸಾಲು ಸಾಲು ಕಳಪೆ ಪ್ರದರ್ಶನ ನೀಡಿರುವ ಆಟಗಾರರಿಗೆ ಮತ್ತೆ ಮಣೆ ಹಾಕಿದ ಬಿಸಿಸಿಐ

ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ಟೆಸ್ಟ್ ತಂಡದಲ್ಲಿ ದೊಡ್ಡ ಬದಲಾವಣೆಗಳು ನಡೆಯಲಿವೆ ಎಂಬ ನಿರೀಕ್ಷೆಯಲ್ಲಿ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳಿದ್ದರು. ಸಾಲು ಸಾಲು ಕಳಪೆ ಪ್ರದರ್ಶನಗಳನ್ನು ನೀಡಿರುವ ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ ಮತ್ತು ಇಶಾಂತ್ ಶರ್ಮಾ ತಂಡದಿಂದ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬ ಈ ಚರ್ಚೆಗಳು ನಡೆದಿದ್ದವು. ಆದರೆ ಇದ್ಯಾವುದಕ್ಕೂ ಸೊಪ್ಪು ಹಾಕದ ಬಿಸಿಸಿಐ ಕಳಪೆ ಪ್ರದರ್ಶನ ನೀಡುತ್ತಾ ಬಂದಿರುವ ಆಟಗಾರರಿಗೆ ಮತ್ತೆ ಮಣೆ ಹಾಕಿದೆ.

ಉಪನಾಯಕ ಸ್ಥಾನ ಕಳೆದುಕೊಂಡ ಅಜಿಂಕ್ಯಾ ರಹಾನೆ

ಉಪನಾಯಕ ಸ್ಥಾನ ಕಳೆದುಕೊಂಡ ಅಜಿಂಕ್ಯಾ ರಹಾನೆ

ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಪ್ರಕಟವಾಗಿರುವ ಭಾರತ ಟೆಸ್ಟ್ ತಂಡದಲ್ಲಿ ದೊಡ್ಡಮಟ್ಟದ ಬದಲಾವಣೆಗಳೇನು ಇಲ್ಲದಿದ್ದರೂ ಸಹ ಉಪನಾಯಕನ ಸ್ಥಾನದಲ್ಲಿ ನಿರೀಕ್ಷಿತ ಬದಲಾವಣೆಯಾಗಿದೆ. ಅಜಿಂಕ್ಯ ರಹಾನೆ ಭಾರತ ಟೆಸ್ಟ್ ತಂಡದ ಉಪನಾಯಕನ ಸ್ಥಾನವನ್ನು ಕಳೆದುಕೊಂಡಿದ್ದು, ರೋಹಿತ್ ಶರ್ಮಾ ಭಾರತ ಟೆಸ್ಟ್ ತಂಡದ ನೂತನ ಉಪನಾಯಕನಾಗಿ ನೇಮಕಗೊಂಡಿದ್ದಾರೆ.

Ashes ಸರಣಿಯ ಮೊದಲನೇ ದಿನ ಮಳೆಯಲ್ಲಿ ಕೊಚ್ಚಿ ಹೋದ England | Oneindia Kannada

Story first published: Thursday, December 9, 2021, 9:31 [IST]
Other articles published on Dec 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X