For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಅಜಿಂಕ್ಯಾ ರಹಾನೆಗೆ ನಾಯಕತ್ವ

Team india

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯಾ ರಹಾನೆ ಟೀಮ್ ಇಂಡಿಯಾವನ್ನು ಮುನ್ನೆಡೆಸಲಿದ್ದಾರೆ. ವಿರಾಟ್ ಕೊಹ್ಲಿ ಎರಡನೇ ಟೆಸ್ಟ್‌ ಪಂದ್ಯದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದು, ತಂಡವನ್ನು ಮುನ್ನೆಡೆಸಲಿದ್ದಾರೆ.

ಪಾಕಿಸ್ತಾನದ ಕಡೆಗಿದ್ದ ಗೆಲುವು ಆಸ್ಟ್ರೇಲಿಯಾ ಕಡೆಗೆ ವಾಲಿದ್ದು ಹೇಗೆ? | Oneindia Kannada

ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ವಿರಾಟ್‌ ಕೊಹ್ಲಿಗೆ ವಿಶ್ರಾಂತಿಯನ್ನು ನೀಡಲಾಗಿದೆ. ನಂತರ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳಲ್ಲೂ ವಿರಾಟ್‌ ಕೊಹ್ಲಿ ಆಡ್ತಾರ ಎಂಬ ಅನುಮಾನವಿತ್ತು. ಆದ್ರೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭಾಗವಹಿಸ್ತಾರೆ ಎಂದು ಬಿಸಿಸಿಐ ತಿಳಿಸಿದೆ.

ಇನ್ನು ಮೊದಲ ಟೆಸ್ಟ್‌ನಲ್ಲಿ ರೋಹಿತ್ ಕೂಡ ವಿಶ್ರಾಂತಿ ಪಡೆಯುವುದರಿಂದ ಅಜಿಂಕ್ಯ ರಹಾನೆಗೆ ಟೀಮ್ ಇಂಡಿಯಾ ನಾಯಕತ್ವನ್ನು ನೀಡಲಾಗಿದೆ. ಗಮನಾರ್ಹವೆಂದರೆ, ರಹಾನೆ ಈ ವರ್ಷ ಸುದೀರ್ಘ ಸ್ವರೂಪದಲ್ಲಿ ರನ್‌ಗಳ ಕೊರತೆ ಎದುರಿಸುತ್ತಿದ್ದಾರೆ. ಆದ್ದರಿಂದ, ಕೊಹ್ಲಿ ಮತ್ತು ರೋಹಿತ್ ಅನುಪಸ್ಥಿತಿಯಲ್ಲಿ ಅವರು ಕಿವೀಸ್ ತಂಡವನ್ನು ಹೇಗೆ ಎದುರಿಸುತ್ತಾರೆ ಎಂಬುದು ಸಹ ಪ್ರಶ್ನೆಯಾಗಿದೆ.

ಟೀಂ ಇಂಡಿಯಾ ಟೆಸ್ಟ್ ತಂಡ:
ಅಜಿಂಕ್ಯಾ ರಹಾನೆ (ನಾಯಕ), ಚೇತೇಶ್ವರ ಪೂಜಾರ (ಉಪನಾಯಕ), ಕೆ.ಎಲ್. ರಾಹುಲ್, ಮಯಾಂಕ್ ಅಗರ್ವಾಲ್, ಶುಭ್‌ಮನ್ ಗಿಲ್, ಶ್ರೇಯಸ್‌ ಅಯ್ಯರ್, ವೃದ್ದಿಮಾನ್ ಸಹಾ (ಡಬ್ಲ್ಯುಕೆ), ಕೆ.ಎಸ್ ಭರತ್ (ವಿಕೆಟ್ ಕೀಪರ್), ಆರ್ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ , ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್‌ ಕೃಷ್ಣ

ನ್ಯೂಜಿಲೆಂಡ್ ಟೆಸ್ಟ್ ತಂಡ:

ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಡೆವೊನ್ ಕಾನ್ವೆ, ಹೆನ್ರಿ ನಿಕೋಲ್ಸ್, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ವಿಲ್ ಸೋಮರ್ವಿಲ್ಲೆ, ಟಿಮ್ ಸೌಥಿ, ರಾಸ್ ಟೇಲರ್ , ನೀಲ್ ವ್ಯಾಗ್ನರ್ ಮತ್ತು ವಿಲ್ ಯಂಗ್

ಟೀಂ ಇಂಡಿಯಾ ಟಿ20 ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಆರ್ ಅಶ್ವಿನ್, ಅಕ್ಷರ್ ಪಟೇಲ್ , ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

ನ್ಯೂಜಿಲೆಂಡ್ ಟಿ20 ತಂಡ:
ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲೂಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್ ಮತ್ತು ಟಿಮ್ ಸೀಫರ್ಟ್

ಭಾರತ-ನ್ಯೂಜಿಲೆಂಡ್ ಟಿ20 ಸರಣಿ ವೇಳಾಪಟ್ಟಿ

17 ನವೆಂಬರ್ 2021: ಮೊದಲ ಟಿ20 ಪಂದ್ಯ, ಸವಾಯಿ ಮಾನ್‌ಸಿಂಗ್ ಸ್ಟೇಡಿಯಂ, ಜೈಪುರ (7PM IST)
19 ನವೆಂಬರ್ 2021: ಎರಡನೇ ಟಿ20 ಪಂದ್ಯ, ಜಿಎಸ್‌ಸಿಎ ಸ್ಟೇಡಿಯಂ, ರಾಂಚಿ (7PM IST)
21 ನವೆಂಬರ್ 2021: ಮೂರನೇ ಟಿ20 ಪಂದ್ಯ, ಈಡನ್ ಗಾರ್ಡನ್, ಕೋಲ್ಕತ್ತಾ (7PM IST)

ಭಾರತ-ನ್ಯೂಜಿಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ

ನವೆಂಬರ್ 25-29: ಮೊದಲ ಟೆಸ್ಟ್ ಪಂದ್ಯ, ಗ್ರೀನ್ ಪಾರ್ಕ್, ಕಾನ್ಪುರ (9.30AM)
ಡಿಸೆಂಬರ್ 3-7: ಎರಡನೇ ಟೆಸ್ಟ್ ಪಂದ್ಯ, ವಾಂಖೆಡೆ ಸ್ಟೇಡಿಯಂ, ಮುಂಬೈ (9.30AM)

Story first published: Friday, November 12, 2021, 13:37 [IST]
Other articles published on Nov 12, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+