For Quick Alerts
ALLOW NOTIFICATIONS  
For Daily Alerts
 

ವಿಂಡೀಸ್ ವಿರುದ್ಧದ ಏಕದಿನಕ್ಕೆ ತಂಡ ಪ್ರಕಟ: ಪಾದಾರ್ಪಣೆಗೆ ಪಂತ್ ಸಿದ್ಧತೆ

BCCI announces 12 for first ODI; Rishabh Pant to make debut

ನವದೆಹಲಿ, ಅಕ್ಟೋಬರ್ 20: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಬಿಸಿಸಿಐ 12 ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಿದೆ. ಪ್ರಕಟಿತ ಪಟ್ಟಿಯಲ್ಲಿ ಯುವ ಆಟಗಾರ ರಿಷಬ್ ಪಂತ್ ಕೂಡ ಇದ್ದು, ಪಂತ್ ಮೊದಲ ಅಂತಾರಾಷ್ಟ್ರೀಯ ಏಕದಿನಕ್ಕೆ ಪಾದಾರ್ಪಣೆ ಮಾಡುವುದರಲ್ಲಿದ್ದಾರೆ.

ವೆಸ್ಟ್ ಇಂಡೀಸ್ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ದೆಹಲಿ ಆಟಗಾರ ಪಂತ್ ಉತ್ತಮ ಪ್ರದರ್ಶನ ನೀಡಿದ್ದರು. ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನು ಭಾರತ 2-0ಯಿಂದ ಗೆದ್ದಿತ್ತು. ಹೀಗಾಗಿ ಸ್ಫೋಟಕ ಬ್ಯಾಟ್ಮನ್ ರಿಷಬ್ ಗೆ ಏಕದಿನ ತಂಡದಲ್ಲೂ ಅವಕಾಶ ನೀಡಲಾಗಿದೆ.

ಮೊದಲ ಏಕದಿನ ತಂಡದಲ್ಲಿ ಆರಂಭಿಕ ಆಟಗಾರರಾದ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಅವರೂ ಸ್ಥಾನ ಪಡೆದುಕೊಂಡಿದ್ದಾರೆ. ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 21ರಂದು ಗುವಾಹಟಿಯ ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯ 1.30 pmಗೆ ಆರಂಭಗೊಳ್ಳಲಿದೆ.

ಭಾರತ ತಂಡ: ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ಕ್ಯಾಪ್ಟನ್), ಅಂಬಾಟಿ ರಾಯುಡು, ರಿಷಬ್ ಪಂತ್, ಎಂಎಸ್ ಧೋನಿ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಖಲೀಲ್ ಅಹ್ಮದ್.

Story first published: Saturday, October 20, 2018, 18:27 [IST]
Other articles published on Oct 20, 2018
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+