Team India: U19 ಟಿ20 ವಿಶ್ವಕಪ್ ಗೆದ್ದ ಭಾರತ ವನಿತೆಯರ ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ
ಸತತ ಎರಡನೇ ಬಾರಿಗೆ ಅಂಡರ್-19 ಐಸಿಸಿ ಮಹಿಳಾ ಟಿ20 ವಿಶ್ವಕಪ್ ಅನ್ನು ಭಾರತ ತಂಡ ಗೆದ್ದಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚಾಂಪಿಯನ್ ಆದ ಟೀಮ್ ಇಂಡಿಯಾಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಗದು ಬಹುಮಾನವನ್ನು ಘೋಷಿಸಿದೆ. ಟೂರ್ನಿಯುದ್ದಕ್ಕೂ ನಿಕ್ಕಿ ಪ್ರಸಾದ್ ನೇತೃತ್ವದ ಭಾರತ ತಂಡ ಅಜೇಯರಾಗಿ ಉಳಿದು ಅದ್ಭುತ ಆಟ ಪ್ರದರ್ಶಿಸಿತು. ಇದೀಗ ಚಾಂಪಿಯನ್ ಭಾರತ ವನಿತೆಯರ ತಂಡಕ್ಕೆ ಬಿಸಿಸಿಐ ಭಾನುವಾರ 5 ಕೋಟಿ ರೂಪಾಯಿ ನಗದು ಬಹುಮಾನ ಘೋಷಿಸಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಳ್ಳಲು ಭಾರತದ ಅಂಡರ್-19 ತಂಡವನ್ನು ಪ್ರೋತ್ಸಾಹಿಸುತ್ತಿದೆ. ಮಲೇಷ್ಯಾದಲ್ಲಿ 2025 ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಐತಿಹಾಸಿಕ ಸಾಧನೆಯನ್ನು ಗೌರವಿಸಲು ಬಿಸಿಸಿಐ ಮುಖ್ಯ ಕೋಚ್ ನುಶಿನ್ ಅಲ್ ಖದೀರ್ ನೇತೃತ್ವದ ವಿಜೇತ ತಂಡಕ್ಕೆ 5 ಕೋಟಿ ರೂಪಾಯಿ ನಗದು ಬಹುಮಾನ ಮತ್ತು ಸಹಾಯಕ ಸಿಬ್ಬಂದಿಗೆ ಘೋಷಿಸಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ಹೇಳಿದೆ. ಇದೇ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಚಾಂಪಿಯನ್ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, 'ಅಂಡರ್-19 ಮಹಿಳಾ ವಿಶ್ವಕಪ್ ಅನ್ನು ಉಳಿಸಿಕೊಂಡಿರುವ ನಮ್ಮ ಹುಡುಗಿಯರಿಗೆ ಅಭಿನಂದನೆಗಳು. ಈ ಟ್ರೋಫಿಯು ಭಾರತದಲ್ಲಿ ಮಹಿಳಾ ಕ್ರಿಕೆಟ್‌ನ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ. ಪ್ರತಿಯೊಬ್ಬ ಆಟಗಾರರು ಮಿಂಚುವುದನ್ನು ನೋಡಲು ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.
ಮಹಿಳಾ ಶಕ್ತಿಯ ಬಗ್ಗೆ ಬಹಳ ಹೆಮ್ಮೆ
ಇದಕ್ಕೂ ಮೊದಲು, ವಿಶ್ವ ಚಾಂಪಿಯನ್ ಆದ ಭಾರತದ ಯುವ ಮಹಿಳಾ ತಂಡಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದರು. ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, 'ನಮ್ಮ ಮಹಿಳಾ ಶಕ್ತಿಯ ಬಗ್ಗೆ ತುಂಬಾ ಹೆಮ್ಮೆ ಇದೆ! ಐಸಿಸಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ 2025 ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ಈ ಗೆಲುವು ನಮ್ಮ ಅತ್ಯುತ್ತಮ ಸಾಂಘಿಕ ಕೆಲಸ ಹಾಗೂ ಸಂಕಲ್ಪ ಮತ್ತು ತಾಳ್ಮೆಯ ಫಲವಾಗಿದೆ. ಇದು ಅನೇಕ ಉದಯೋನ್ಮುಖ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ. ತಂಡದ ಮುಂದಿನ ಪ್ರಯತ್ನಗಳಿಗಾಗಿ ನನ್ನ ಶುಭಾಶಯಗಳು ಎಂದು ನುಡಿದ್ದರು.
ಐಸಿಸಿ ಅಂಡರ್-19 ಐಸಿಸಿ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬೌಲಿಂಗ್ ಮಾಡಿತು. ದಕ್ಷಿಣ ಆಫ್ರಿಕಾ ತಂಡವನ್ನು ನಿಗದಿತ 20 ಓವರ್‌ಗಳಲ್ಲಿ ಕೇವಲ 82 ರನ್‌ಗಳಿಗೆ ಭಾರತ ಆಲೌಟ್ ಮಾಡಿತು. ದಕ್ಷಿಣ ಆಫ್ರಿಕಾ ನೀಡಿದ 83 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಭಾರತ ಗೊಂಗಡಿ ತ್ರಿಶಾ ಅವರ ಅಜೇಯ 44 ರನ್ ಮತ್ತು ಸಾನಿಕಾ ಚಲ್ಕೆ ಅವರ ಅಜೇಯ 26 ರನ್‌ಗಳ ಇನ್ನಿಂಗ್ಸ್ ಆಡಿದರು. ಇದರ ಫಲವಾಗಿ ಭಾರತ 11.2 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications