For Quick Alerts
ALLOW NOTIFICATIONS  
For Daily Alerts
 

Duleep Trophy: ಆಡಲು ಒಪ್ಪದ ವಿರಾಟ್, ರೋಹಿತ್: ನಾಯಕರ ಹೆಸರು ಘೋಷಣೆ: ಐವರು ಕನ್ನಡಿಗರಿಗೆ ಸ್ಥಾನ

ದುಲೀಪ್ ಟ್ರೋಫಿಗೆ ತಂಡವನ್ನು ಪ್ರಕಟಿಸಲಾಗಿದೆ. ದೇಶೀಯ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರರಿಗೆ ಅವಕಾಶ ನೀಡಲಾಗಿದೆ. ಸೆಪ್ಟಂಬರ್ 5 ರಿಂದ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಟೀಮ್ ಇಂಡಿಯಾದ ನಾಯಕ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ದುಲೀಪ್‌ ಟ್ರೋಫಿಯಲ್ಲಿ ಆಡುವುದಿಲ್ಲ.

ಟೀಮ್ ಇಂಡಿಯಾದ ಪರ ಆಡುತ್ತಿರುವ ಭಾರತದ ಸ್ಟಾರ್ ಆಟಗಾರರು ಈ ಬಾರಿಯ ಟೂರ್ನಿಯಲ್ಲಿ ಆಡಲಿದ್ದಾರೆ. ಸೆಪ್ಟಂಬರ್ 19ರ ವರೆಗೆ ಭಾರತ ತಂಡಕ್ಕೆ ಯಾವುದೇ ಪಂದ್ಯಗಳು ಇಲ್ಲದೇ ಇರುವುದರಿಂದ ಸ್ಟಾರ್‌ ಆಟಗಾರರಿಗೂ ದುಲೀಪ್‌ ಟ್ರೋಫಿ ಆಡಲು ಬುಲಾವ್ ನೀಡಲಾಗಿತ್ತು. ಈ ಸರಣಿಯಲ್ಲಿ ಆಡಿದ್ದರೆ ಮ್ಯಾಚ್‌ ಪ್ರ್ಯಾಕ್ಟಿಸ್‌ ಆಗುತ್ತದೆ ಎಂದು ಎಲ್ಲರು ಭಾವಿಸಿದ್ದರು. ಆದರೆ ವಿರಾಟ್‌, ರೋಹಿತ್‌ಗೆ ವಿಶ್ರಾಂತಿ ನೀಡಲಾಗಿದೆ.

BCCI Announces Duleep Trophy 2024-25 Squads No Kohli or Sharma See All Four Captains

ಯಾವೆಲ್ಲಾ ಆಟಗಾರರು ಮಿಸ್

ಜಸ್ಪ್ರೀತ್ ಬುಮ್ರಾ, ರವಿಚಂದ್ರನ್ ಅಶ್ವಿನ್, ಸಂಜು ಸಾಸ್ಮಾನ್, ಯುಜ್ವೇಂದ್ರ ಚಾಹಲ್, ಶಾರ್ದೂಲ್ ಠಾಕೂರ್ ಮತ್ತು ಹಾರ್ದಿಕ್ ಪಾಂಡ್ಯ ದುಲೀಪ್‌ ಟ್ರೋಫಿಯಲ್ಲಿ ಆಡುವುದನ್ನು ಕಾಣುವುದಿಲ್ಲ. ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ ಪೂಜಾರ ಕೂಡ ದುಲೀಪ್ ಟ್ರೋಫಿಯನ್ನು ಆಡುತ್ತಿಲ್ಲ. ಈ ಇಬ್ಬರು ಸ್ಟಾರ್ ಆಟಗಾರರ ಹೆಸರನ್ನು ಯಾವುದೇ ತಂಡದಲ್ಲಿ ಸೇರಿಸಲಾಗಿಲ್ಲ. ಈ ಇಬ್ಬರೂ ಆಟಗಾರರು ದೀರ್ಘಕಾಲದವರೆಗೆ ಕೇವಲ ಟೆಸ್ಟ್ ಪಂದ್ಯಗಳನ್ನು ಆಡುತ್ತಿದ್ದರು.

ತಂಡ ಎ: ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ತಂಡ ಬಿ: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್, ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಾಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ , ಎನ್ ಜಗದೀಸನ್ (ವಿಕೆಟ್‌ ಕೀಪರ್).

ತಂಡ ಸಿ: ರುತುರಾಜ್ ಗಾಯಕ್‌ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್‌ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಉಮ್ರಾನ್ ಮಲಿಕ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮರ್ಕಂಡೆ (ವಿಕೆಟ್‌ ಕೀಪರ್), ಸಂದೀಪ್ ವಾರಿಯರ್.

ತಂಡ ಡಿ: ಶ್ರೇಯಸ್ ಲೈಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

Story first published: Wednesday, August 14, 2024, 17:57 [IST]
Other articles published on Aug 14, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+