ವೆಸ್ಟ್‌ ಇಂಡೀಸ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ: ಬುಮ್ರಾ, ಶಮಿಗೆ ವಿಶ್ರಾಂತಿ

KL Rahul ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಡುತ್ತಿಲ್ಲ | Oneindia Kannada

ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿ ಮುಗಿದ ಬಳಿಕ ಫೆಬ್ರವರಿ 16ರಿಂದ ಆರಂಭಗೊಳ್ಳಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾ 18 ಸದಸ್ಯರನ್ನೊಳಗೊಂಡ ತಂಡವನ್ನ ಪ್ರಕಟಿಸಲಾಗಿದೆ.

ನ್ಯೂಜಿಲೆಂಡ್ ವಿರುದ್ಧ ಚೊಚ್ಚಲ ಟಿ20 ನಾಯಕತ್ವದಲ್ಲೇ ಯಶಸ್ವಿಯಾಗಿ ತಂಡವನ್ನ ಮುನ್ನಡೆಸಿದ್ದ ರೋಹಿತ್ ಶರ್ಮಾ ವಿಂಡೀಸ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಯಲ್ಲಿ ಭಾರತದ ನಾಯಕತ್ವ ವಹಿಸಲಿದ್ದಾರೆ. ವಿರಾಟ್ ಕೊಹ್ಲಿ ಏಕದಿನ ಮತ್ತು ಟಿ20 ಎರಡೂ ಸರಣಿಗೂ ಲಭ್ಯರಾಗಿದ್ದು, ದಕ್ಷಿಣ ಆಫ್ರಿಕಾ ನೆಲದಲ್ಲಿ ವಿಕೆಟ್ ಪಡೆಯದೇ ನಿರಾಸೆ ಮೂಡಿಸಿದ ಭುವನೇಶ್ವರ್ ಕುಮಾರ್‌ಗೆ ಟಿ20 ಸ್ಕ್ವಾಡ್‌ನಲ್ಲಿ ಸ್ಥಾನ ನೀಡಲಾಗಿದೆ.

ಟೀಂ ಇಂಡಿಯಾ ಟಿ20 ಸ್ಕ್ವಾಡ್‌

ಟೀಂ ಇಂಡಿಯಾ ಟಿ20 ಸ್ಕ್ವಾಡ್‌

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಸರ್ ಪಟೇಲ್, ಯುಜವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್, ಅವೇಶ್ ಖಾನ್, ಹರ್ಷಲ್ ಪಟೇಲ್

ಕೋವಿಡ್‌ನಿಂದ ಗುಣಮುಖರಾಗಿ ತಂಡಕ್ಕೆ ಕಂಬ್ಯಾಕ್ ಮಾಡಿದ ಸುಂದರ್

ಕೋವಿಡ್‌ನಿಂದ ಗುಣಮುಖರಾಗಿ ತಂಡಕ್ಕೆ ಕಂಬ್ಯಾಕ್ ಮಾಡಿದ ಸುಂದರ್

ಕೋವಿಡ್-19 ಸೋಂಕಿನ ಕಾರಣದಿಂದಾಗಿ ಕೊನೆಯ ಕ್ಷಣದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಮಿಸ್ ಮಾಡಿಕೊಂಡಿದ್ದ ತಮಿಳುನಾಡು ಮೂಲದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಸುಂದರ್ ಸುಮಾರು 10 ತಿಂಗಳಿನಿಂದ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಹೊರಗುಳಿದಿದ್ದಾರೆ. ಅವರು ಕೊನೆಯದಾಗಿ ಮಾರ್ಚ್ 2021 ರಲ್ಲಿ ಭಾರತಕ್ಕಾಗಿ ಆಡಿದ್ದರು. ಗಾಯಗಳ ಕಾರಣ ತಂಡದಿಂದ ಹೊರಬಿದ್ದ ಬಳಿಕ ಇತ್ತೀಚೆಗೆ ಚೇತರಿಸಿಕೊಂಡರು ಮತ್ತು ವಿಜಯ್ ಹಜಾರೆ ಟ್ರೋಫಿಗಾಗಿ ತಮಿಳುನಾಡು ತಂಡದ ಭಾಗವಾಗಿದ್ದರು. ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಪರಿಣಾಮ ಇವರನ್ನ ದ. ಆಫ್ರಿಕಾ ವಿರುದ್ಧ ಏಕದಿನ ತಂಡದಲ್ಲಿ ಆಯ್ಕೆ ಮಾಡಲಾಗಿತ್ತು. ಆದ್ರೆ ಕೋವಿಡ್ ಕಾರಣದಿಂದ ಸರಣಿ ಮಿಸ್‌ ಮಾಡಿಕೊಂಡಿದ್ರು.

ವೆಸ್ಟ್ ಇಂಡೀಸ್‌ ವಿರುದ್ಧದ ಓಡಿಐ ಸರಣಿಗೆ ಟೀಂ ಇಂಡಿಯಾ ಆಯ್ಕೆ: ರೋಹಿತ್ ಶರ್ಮಾ ನಾಯಕತ್ವ

2021ರ ಐಪಿಎಲ್ ಪರ್ಪಲ್ ಕ್ಯಾಪ್ ವಿನ್ನರ್ ಹರ್ಷಲ್ ಪಟೇಲ್‌ಗೆ ಸ್ಥಾನ

2021ರ ಐಪಿಎಲ್ ಪರ್ಪಲ್ ಕ್ಯಾಪ್ ವಿನ್ನರ್ ಹರ್ಷಲ್ ಪಟೇಲ್‌ಗೆ ಸ್ಥಾನ

2021ರ ಐಪಿಎಲ್ ಸೀಸನ್‌ನಲ್ಲಿ ಆರ್‌ಸಿಬಿ ತಂಡದ ಪರ ಧೂಳೆಬ್ಬಿಸಿದ ಬೌಲರ್ ಹರ್ಷಲ್ ಪಟೇಲ್ ಟೀಂ ಇಂಡಿಯಾ ಚುಟುಕು ಕ್ರಿಕೆಟ್‌ ಸ್ಕ್ವಾಡ್‌ನಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2021ರ ಐಪಿಎಲ್‌ನ ಪರ್ಪಲ್ ಕ್ಯಾಪ್ ವಿನ್ನರ್ ಹರ್ಷಲ್ ಪಟೇಲ್‌ ಜೊತೆಗ ಯುವ ಲೆಗ್‌ ಸ್ಪಿನ್ನರ್ ರವಿ ಬಿಷ್ಣೋಯಿ, ಆಲ್‌ರೌಂಡರ್ ಅಕ್ಷರ್‌ ಪಟೇಲ್ ಸ್ಥಾನ ಪಡೆದಿದ್ದಾರೆ.

ಏಕದಿನ, ಟಿ20 ಸರಣಿ ಮಿಸ್ ಮಾಡಿಕೊಂಡ ರವೀಂದ್ರ ಜಡೇಜಾ

ಏಕದಿನ, ಟಿ20 ಸರಣಿ ಮಿಸ್ ಮಾಡಿಕೊಂಡ ರವೀಂದ್ರ ಜಡೇಜಾ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ಆದ ಗಾಯದಿಂದಾಗಿ ಜಡ್ಡು ಕೈ ಊದಿಕೊಂಡ ಪರಿಣಾಮ ಇಡೀ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ರು. ನಂತರ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಯಲ್ಲಿ ಚೇತರಿಕೆ ವಿಳಂಭಗೊಂಡ ಹಿನ್ನಲೆಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮಿಸ್ ಮಾಡಿಕೊಂಡಿದ್ದರು. ಆದ್ರೀಗ ಸಂಪೂರ್ಣ ಚೇತರಿಸಿಕೊಳ್ಳದ ಜಡೇಜಾ ವೆಸ್ಟ್ ಇಂಡೀಸ್ ವಿರುದ್ಧ ಎರಡು ಸರಣಿಗೂ ಅಲಭ್ಯರಾಗಿದ್ದಾರೆ. ಪರಿಣಾಮ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ.

ಇನ್ನು ಭಾರತದ ಪ್ರಮುಖ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿಗೆ ಎರಡು ಸರಣಿಯಲ್ಲೂ ವಿಶ್ರಾಂತಿ ನೀಡಲಾಗಿದೆ. ಕೆ.ಎಲ್ ರಾಹುಲ್ ಮೊದಲ ಏಕದಿನ ಪಂದ್ಯದಲ್ಲಿ ಆಡುವುದಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವನ್ನ ಸೇರಲಿದ್ದಾರೆ.

ವೆಸ್ಟ್ ಇಂಡಿಸ್ ವಿರುದ್ಧ ಟಿ20 ಸರಣಿಯ ವೇಳಾಪಟ್ಟಿ

ವೆಸ್ಟ್ ಇಂಡಿಸ್ ವಿರುದ್ಧ ಟಿ20 ಸರಣಿಯ ವೇಳಾಪಟ್ಟಿ

ಟಿ20 ಸರಣಿಯ ವೇಳಾಪಟ್ಟಿ:

1 ನೇ T20, ಫೆಬ್ರವರಿ 16 , ಬುಧವಾರ, ಕೋಲ್ಕತ್ತಾ (7PM)

2 ನೇ T20, ಫೆಬ್ರವರಿ 18 , ಶುಕ್ರವಾರ, ಕೋಲ್ಕತ್ತಾ (7PM)

3ನೇ T20, ಫೆಬ್ರವರಿ 20 , ಭಾನುವಾರ, ಕೋಲ್ಕತ್ತಾ (7PM)

For Quick Alerts
ALLOW NOTIFICATIONS
For Daily Alerts
Story first published: Wednesday, January 26, 2022, 23:30 [IST]
Other articles published on Jan 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X