ನ್ಯೂಜಿಲೆಂಡ್ ವಿರುದ್ಧದ ಟಿ20ಐ, ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ಆಕ್ಲೆಂಡ್, ಜನವರಿ 21: ಗಾಯಕ್ಕೀಡಾಗಿರುವ ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಮುಂಬರಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಲ್ಲಿ ಆಡುತ್ತಿಲ್ಲ. ಹೀಗಾಗಿ ಈ ಸರಣಿಗಾಗಿ ಬಿಸಿಸಿಐಯು ಧವನ್‌ಗೆ ಬದಲಿ ಆಟಗಾರರನ್ನು ಹೆಸರಿಸಿದೆ.
ಶಿಖರ್ ಧವನ್ ಬದಲಿಗೆ 5 ಪಂದ್ಯಗಳ ಟಿ20 ಸರಣಿಗಾಗಿ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಅವರನ್ನು ಬಿಸಿಸಿಐ ಮಂಗಳವಾರ (ಜನವರಿ 21) ಹೆಸರಿಸಿದೆ. ಇನ್ನು ಮೂರು ಪಂದ್ಯಗಳ ಏಕದಿನ ಸರಣಿಗೆ ಧವನ್ ಬದಲಿಗೆ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾಗೆ ಅವಕಾಶ ನೀಡಲಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಏಕದಿನ ಸರಣಿಗಾಗಿ ಬಿಸಿಸಿಐ ಪ್ರಕಟಿಸಿರುವ ತಂಡಗಳು ಕೆಳಗಿನಂತಿವೆ.

ಆಸೀಸ್ ಸರಣಿಯಲ್ಲಿ ಧವನ್‌ಗೆ ಗಾಯ
ಬೆಂಗಳೂರಿನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಕೊನೆಯ ಏಕದಿನ ಪಂದ್ಯದ ವೇಳೆ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಗಾಯ ಮಾಡಿಕೊಂಡಿದ್ದರು. ಅದಾಗಿ ಧವನ್ ಭಾರತದ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿರಲಿಲ್ಲ. ಆದರೆ ಮೂರು ಪಂದ್ಯಗಳ ಈ ಏಕದಿನ ಸರಣಿಯಲ್ಲಿ ಭಾರತ 2-1ರ ಗೆಲುವನ್ನಾಚರಿಸಿತ್ತು.

ಪೃಥ್ವಿ ಸ್ಫೋಟಕ ಬ್ಯಾಟಿಂಗ್
ಶನಿವಾರ (ಜನವರಿ 18) ಭಾರತ 'ಎ' ತಂಡದ ಪರ, ನ್ಯೂಜಿಲೆಂಡ್ XI ವಿರುದ್ಧದ ಎರಡನೇ ಅಭ್ಯಾಸ ಪಂದ್ಯದಲ್ಲಿ ಪೃಥ್ವಿ ಶಾ 100 ಎಸೆತಗಳಿಗೆ 150 ರನ್ ಸಿಡಿಸಿದ್ದರು. ಹೀಗಾಗಿ ಏಕದಿನ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಪೃಥ್ಬಿ ಶಾ ಯಶಸ್ವಿಯಾಗಿದ್ದಾರೆ. ಇನ್ನು ಟಿ20 ತಂಡಲ್ಲಿ ಸ್ಯಾಮ್ಸನ್‌ಗೆ ಸ್ಥಾನ ಲಭಿಸಿರುವುದೂ ಯುವ ಬ್ಯಾಟ್ಸ್‌ಮನ್‌ಗೆ ಹುರುಪು ತುಂಬಿದೆ.

ಭಾರತದ ಟಿ20ಐ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ) ಸಂಜು ಸ್ಯಾಮ್ಸನ್, ಕೆಎಲ್ ರಾಹುಲ್, ಶ್ರೇಯಸ್ ಐಯ್ಯರ್, ಮನೀಷ್ ಪಾಂಡೆ, ರಿಷಬ್ ಪಂತ್ (ವಿಕೆ), ಶಿವಂ ದೂಬೆ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್.

ಭಾರತ ಏಕದಿನ ತಂಡ
ವಿರಾಟ್ ಕೊಹ್ಲಿ (ಸಿ), ರೋಹಿತ್ ಶರ್ಮಾ (ವಿಸಿ), ಪೃಥ್ವಿ ಶಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆ), ಶಿವಮ್ ದೂಬೆ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ರವೀಂದ್ರ ಜಡೇಜಾ, ಜಸ್‌ಪ್ರೀತ್ ಶಮ್ರಾ, ಶಾರ್ದೂಲ್ ಠಾಕೂರ್, ಕೇದಾರ್ ಜಾಧವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications