Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC T20 World Cup 2022: ಟಿ20 ವಿಶ್ವಕಪ್‌ಗಾಗಿ ಭಾರತ ತಂಡ ಪ್ರಕಟ

BCCI Announces Team India Squad For T20 World Cup 2022

ಭಾರತ ಹಿರಿಯರ ಕ್ರಿಕೆಟ್ ಆಯ್ಕೆ ಸಮಿತಿ ಸೋಮವಾರ ಸಭೆ ನಡೆಸಿದ ನಂತರ, ಮುಂಬರುವ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ.

ರೋಹಿತ್ ಶರ್ಮಾ ಮೊದಲ ಬಾರಿಗೆ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತವನ್ನು ಮುನ್ನಡೆಸಲಿದ್ದು, ಆರಂಭಿಕ ಬ್ಯಾಟರ್ ಕೆಎಲ್ ರಾಹುಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಗಿದೆ. ಏಷ್ಯಾ ಕಪ್‌ನಲ್ಲಿ ಭಾರತದ ಕಳಪೆ ಪ್ರದರ್ಶನ ನೀಡಿದ್ದರೂ ತಂಡದಲ್ಲಿ ಯಾವುದೇ ಮಹತ್ವದ ಬದಲಾವಣೆಗಳನ್ನು ಮಾಡಲಾಗಿಲ್ಲ.

ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ವೇಗದ ಜೋಡಿ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದು, ಇದರಿಂದಾಗಿ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಬೌಲಿಂಗ್ ಶಕ್ತಿ ವೃದ್ಧಿಯಾದಂತಾಗಿದೆ.

ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಟಾರ್ ಆಲ್‌ರೌಂಡರ್

ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಟಾರ್ ಆಲ್‌ರೌಂಡರ್

ಗಾಯಾಳು ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ತಂಡದಲ್ಲಿ ಸ್ಥಾನ ಪಡೆದಿದ್ದು, ಏಷ್ಯಾ ಕಪ್‌ನಲ್ಲಿ ಆಡಿದ ತಂಡವೇ ಮುಂದುವರೆದಿದೆ. ಯುವ ಆಟಗಾರರಾದ ರವಿ ಬಿಷ್ಣೋಯ್ ಮತ್ತು ಅವೇಶ್ ಖಾನ್ ಅವರ ಸ್ಥಾನಕ್ಕೆ ಮರಳಿದರು.

ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ತಂಡದಲ್ಲಿರುವ ಇತರ ಇಬ್ಬರು ಅಗ್ರ ಕ್ರಮಾಂಕದ ಬ್ಯಾಟರ್‌ಗಳಾಗಿದ್ದು, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟರ್ ದೀಪಕ್ ಹೂಡಾ ಕೂಡ ಹೆಸರಿಸಿದ್ದಾರೆ. ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಟಾರ್ ಆಲ್‌ರೌಂಡರ್ ಆಗಿದ್ದು, ದಿನೇಶ್ ಕಾರ್ತಿಕ್ ಮತ್ತು ರಿಷಭ್ ಪಂತ್ ಜೋಡಿಯನ್ನು ವಿಕೆಟ್ ಕೀಪರ್ ಕಂ ಬ್ಯಾಟರ್ ಆಯ್ಕೆಯಾಗಿ ಸೇರಿಸಿಕೊಳ್ಳಲಾಗಿದೆ.

ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್

ಯುಜ್ವೇಂದ್ರ ಚಹಾಲ್ ಮತ್ತು ರವಿಚಂದ್ರನ್ ಅಶ್ವಿನ್ ಇಬ್ಬರು ಸ್ಪಿನ್ ಬೌಲಿಂಗ್ ಆಯ್ಕೆಯ ಜೊತೆಗೆ ಅಕ್ಷರ್ ಪಟೆಲ್ ಇದ್ದಾರೆ. ಭುವನೇಶ್ವರ್ ಕುಮಾರ್ ಮತ್ತು ಅರ್ಶ್‌ದೀಪ್ ಸಿಂಗ್ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸುತ್ತಾರೆ.

ಅನುಭವಿ ವೇಗಿ ಮೊಹಮ್ಮದ್ ಶಮಿ, ಆಲ್‌ರೌಂಡರ್ ದೀಪಕ್ ಚಹಾರ್, ಸ್ಪಿನ್ನರ್ ರವಿ ಬಿಷ್ಣೋಯ್ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಸೇರಿದಂತೆ ನಾಲ್ವರು ಆಟಗಾರರನ್ನು ಆಯ್ಕೆಗಾರರು ಸ್ಟ್ಯಾಂಡ್‌ಬೈ ಆಟಗಾರರನ್ನಾಗಿ ಘೋಷಿಸಿದ್ದಾರೆ.

ಟಿ20 ವಿಶ್ವಕಪ್‌ಗಾಗಿ ಭಾರತ ತಂಡ

ಟಿ20 ವಿಶ್ವಕಪ್‌ಗಾಗಿ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್

ಸ್ಟ್ಯಾಂಡ್‌ಬೈ ಆಟಗಾರರು: ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್

ಆಸ್ಟ್ರೇಲಿಯಾ ಟಿ20 ಸರಣಿಗೆ ಭಾರತ ತಂಡ:

ಆಸ್ಟ್ರೇಲಿಯಾ ಟಿ20 ಸರಣಿಗೆ ಭಾರತ ತಂಡ:

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ ಟಿ20 ಸರಣಿಗಳಿಗೂ ಆಯ್ಕೆಗಾರರು ತಂಡವನ್ನು ಪ್ರಕಟಿಸಿದ್ದಾರೆ.

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಭಾರತ ತಂಡ:

ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.

Story first published: Tuesday, September 13, 2022, 8:08 [IST]
Other articles published on Sep 13, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+