ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

TNPLನಲ್ಲಿ ಮ್ಯಾಚ್ ಫಿಕ್ಸಿಂಗ್ ಸುಳಿವು, ಬಿಸಿಸಿಐ ತನಿಖೆ ಆರಂಭ

BCCIs Anti-Corruption Unit begins probe amid reports of bookies approaching TNPL cricketers on WhatsApp

ಚೆನ್ನೈ, ಸೆ. 16: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್​) ಕಾಡಿದ್ದ ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್ ಭೂತ ಈಗ ತಮಿಳುನಾಡು ಕ್ರಿಕೆಟ್ ಪ್ರೀಮಿಯರ್ ಲೀಗ್ ಗೂ ಆವರಿಸಿದೆ.

ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್​ಪಿಎಲ್​) ಟಿ-20 ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಆಡಿದ ಪ್ರಮುಖ ಆಟಗಾರರನ್ನು ಬುಕ್ಕಿಗಳು ವಾಟ್ಸಾಪ್ ಮೂಲಕ ಸಂಪರ್ಕಿಸಲು ಯತ್ನಿಸಿದ್ದರು ಎಂಬ ಸುದ್ದಿ ಹೊರಬಂದಿದೆ. ಈ ಕುರಿತಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ತಮಿಳುನಾಡು ಪ್ರೀಮಿಯರ್ ಲೀಗ್​ನ ಪ್ರಮುಖ ಆಟಗಾರರ ಸ್ಮಾರ್ಟ್ ಫೋನಿಗೆ ಅನಾಮಿಕ ವ್ಯಕ್ತಿಗಳಿಂದ ವಾಟ್ಸಾಪ್ ಸಂದೇಶ ಬಂದಿದೆ. ಆಟಗಾರರು ಈ ವಿಷಯವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದಾರೆ.

"ಕೆಲ ಆಟಗಾರರು ವಾಟ್ಸಾಪ್ ಸಂದೇಶ ಬಂದಿದ್ದರ ಬಗ್ಗೆ ದೂರು ನೀಡಿದ್ದು, ಅಪರಿಚಿತ ವ್ಯಕ್ತಿಗಳಿಂದ ವಾಟ್ಸಪ್ ಸಂದೇಶಗಳನ್ನು ಸ್ವೀಕರಿಸಿದ್ದಾರೆ. ಈ ಕುರಿತಂತೆ ತನಿಖೆ ಪ್ರಾರಂಭಿಸಿದ್ದೇವೆ, ಆಟಗಾರರ ಹೇಳಿಕೆ ಪಡೆಯಲಾಗಿದೆ" ಎಂದು ಬಿಸಿಸಿಐ ಎಸಿಯು ಮುಖ್ಯಸ್ಥ ಅಜೀತ್ ಸಿಂಗ್ ಹೇಳಿದ್ದಾರೆ.

ತಮಿಳುನಾಡು ಕ್ರಿಕೆಟ್ ಮಂಡಳಿ(ಟಿಎನ್ ಸಿಎ) ಆಯೋಜನೆಯ ಪ್ರೀಮಿಯರ್ ಲೀಗ್​ ಟಿ20 ಪಂದ್ಯಾವಳಿಯಲ್ಲಿ ದಿನೇಶ್ ಕಾರ್ತಿಕ್, ಮುರಳಿ ವಿಜಯ್, ಆರ್ ಅಶ್ವಿನ್, ವಿಜಯ್ ಶಂಕರ್ ಹಾಗೂ ವಾಷಿಂಗ್ಟನ್ ಸುಂದರ್ ಮುಂತಾದವರು ಆಡಿದ್ದರು. ಸ್ಟಾರ್ ಸ್ಫೋರ್ಟ್ಸ್ ನೆಟ್ವರ್ಕ್ ನಲ್ಲಿ ನೇರ ಪ್ರಸಾರ ಮಾಡಲಾಗಿತ್ತು.

Story first published: Monday, September 16, 2019, 15:27 [IST]
Other articles published on Sep 16, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X