ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs NZ T20 Series: ಟಿ20 ತಂಡಕ್ಕೆ ಆಯ್ಕೆಯಾದ ಆಟಗಾರರಿಗೆ ರಾಂಚಿಗೆ ಬರುವಂತೆ ಬಿಸಿಸಿಐ ಸೂಚನೆ

ಭಾರತ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಮಂಗಳವಾರ, ಜನವರಿ 24ರಂದು ಇಂದೋರ್ ನಲ್ಲಿ ನಡೆಯಲಿದೆ. ಏಕದಿನ ಸರಣಿಯ ನಂತರ ಭಾರತ ಕಿವೀಸ್ ವಿರುದ್ಧ 3 ಪಂದ್ಯಗಳ ಟಿ20 ಸರಣಿ ಆಡಲಿದೆ.

ಜನವರಿ 27ರಂದು ಟಿ20 ಸರಣಿಯ ಮೊದಲ ಪಂದ್ಯ ನಡೆಯಲಿದ್ದು, ಟಿ20 ತಂಡಕ್ಕೆ ಆಯ್ಕೆಯಾದ ಆಟಗಾರರಿಗೆ ರಾಂಚಿಗೆ ಬರುವಂತೆ ಬಿಸಿಸಿಐ ಸೂಚನೆ ನೀಡಿದೆ. ಟಿ20 ತಂಡಕ್ಕೆ ಆಯ್ಕೆಯಾಗಿರುವ ಕೆಲವು ಆಟಗಾರರು ರಣಜಿ ಟ್ರೋಫಿಯಲ್ಲಿ ಆಡುತ್ತಿದ್ದು, ಜನವರಿ 24ರಿಂದ ಆರಂಭವಾಗಲಿರುವ ರಣಜಿ ಪಂದ್ಯಗಳಿಂದ ಹೊರಗುಳಿಯಲಿದ್ದು, ಬುಧವಾರದಂದು ರಾಂಚಿಗೆ ತಲುಪಲಿದ್ದಾರೆ.

1
56732

ಪೃಥ್ವಿ ಶಾ, ರಾಹುಲ್ ತ್ರಿಪಾಠಿ, ಅರ್ಷದೀಪ್ ಸಿಂಗ್ ಸೇರಿದಂತೆ ಹಲವು ಕ್ರಿಕೆಟಿಗರು ರಣಜಿಯಲ್ಲಿ ಆಡುತ್ತಿದ್ದರು. ಮಂಗಳವಾರ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಕೊನೆಯ ಏಕದಿನ ಪಂದ್ಯದ ಬಳಿಕ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಸೇರಿದಂತೆ ಟಿ20 ತಂಡಕ್ಕೆ ಆಯ್ಕೆಯಾಗಿರುವ ಇತರೆ ಆಟಗಾರರು ಇಂದೋರ್ ನಿಂದ ರಾಂಚಿಗೆ ಪ್ರಯಾಣ ಬೆಳೆಸಲಿದ್ದಾರೆ.

ಉಜ್ಜೈನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಟೀಂ ಇಂಡಿಯಾ ಆಟಗಾರರು: ಪಂತ್ ಗುಣಮುಖವಾಗುವಂತೆ ಪ್ರಾರ್ಥನೆಉಜ್ಜೈನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಟೀಂ ಇಂಡಿಯಾ ಆಟಗಾರರು: ಪಂತ್ ಗುಣಮುಖವಾಗುವಂತೆ ಪ್ರಾರ್ಥನೆ

ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ, ಸರಣಿಯನ್ನು ವೈಟ್ ಮಾಡುವ ವಿಶ್ವಾಸದಲ್ಲಿದೆ. ಮಂಗಳವಾರ ನಡೆಯುವ ಏಕದಿನ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದರೆ, ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ನಂಬರ್ 1 ತಂಡವಾಗಲಿದೆ.

 ಪೃಥ್ವಿ ಶಾ, ರಾಹುಲ್ ತ್ರಿಪಾಠಿ ಆಯ್ಕೆ

ಪೃಥ್ವಿ ಶಾ, ರಾಹುಲ್ ತ್ರಿಪಾಠಿ ಆಯ್ಕೆ

ದೇಶೀಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಆಯ್ಕೆದಾರರಿಂದ ಕಡೆಗಣಿಸಲ್ಪಟ್ಟಿದ್ದ ಪೃಥ್ವಿ ಶಾ ಕೊನೆಗೂ ಭಾರತ ತಂಡಕ್ಕೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಮುಂಬೈ ಪರವಾಗಿ ರಣಜಿ ಟ್ರೋಫಿಯಲ್ಲಿ ಆಡುತ್ತಿರುವ ಅರವನ್ನು ತಂಡದಿಂದ ಮಂಗಳವಾರದಿಂದ ಆರಂಭವಾಗುವ ರಣಜಿ ಪಂದ್ಯದಿಂದ ಹೊರಗಿಡಲಾಗಿದೆ. ಪೃಥ್ವಿ ಶಾ ಬದಲಾಗಿ ದಿವ್ಯಾಂಶ್ ಸಕ್ಸೇನಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಪೃಥ್ವಿ ಶಾ ಮಾತ್ರವಲ್ಲದೆ ಸದ್ಯ ರಣಜಿಯಲ್ಲಿ ಆಡುತ್ತಿರುವ ರಾಹುಲ್ ತ್ರಿಪಾಠಿ ಮತ್ತು ದೀಪಕ್ ಹೂಡಾ, ಅರ್ಷದೀಪ್ ಸಿಂಗ್ ಕೂಡ ಮುಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದು, ರಾಂಚಿಗೆ ತೆರಳಲಿದ್ದಾರೆ.

 ಯುವ ಪ್ರತಿಭೆಗಳಿಗೆ ತಂಡದಲ್ಲಿ ಸ್ಥಾನ

ಯುವ ಪ್ರತಿಭೆಗಳಿಗೆ ತಂಡದಲ್ಲಿ ಸ್ಥಾನ

ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹಲವು ಯುವ ಆಟಗಾರರಿಗೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಅವಕಾಶ ನೀಡಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಹಿರಿಯ ಆಟಗಾರರು ಟಿ20 ತಂಡದಲ್ಲಿ ಸ್ಥಾನ ಪಡೆಯುತ್ತಿಲ್ಲ. ಅಕ್ಷರ್ ಪಟೇಲ್ ಮತ್ತು ಕೆಎಲ್ ರಾಹುಲ್ ತಮ್ಮ ವಿವಾಹದ ಕಾರಣ ಸರಣಿಯಿಂದ ಹೊರಗುಳಿದಿದ್ದಾರೆ.

ರುತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ ಮತ್ತು ದೀಪಕ್ ಹೂಡಾ ತಂಡದಲ್ಲಿ ಸ್ಥಾನ ಪಡಿದಿದ್ದಾರೆ. ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಉಮ್ರಾನ್ ಮಲಿಕ್, ಇಶಾನ್ ಕಿಶನ್ ಸೇರಿದಂತೆ ಮತ್ತಿತರ ಆಟಗಾರರು, ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದ ನಂತರ ರಾಂಚಿಗೆ ಪ್ರಯಾಣಿಸಲಿದ್ದಾರೆ.

ಆಸೀಸ್ ವಿರುದ್ಧ ಟೆಸ್ಟ್ ಸರಣಿಗೂ ಮುನ್ನ ರಣಜಿ ಟ್ರೋಫಿ ಆಡಲೇಬೇಕಾದ ನಾಲ್ವರು ಪ್ರಮುಖ ಆಟಗಾರರು

 ಟಿ 20 ಸರಣಿಗೆ ಟೀಂ ಇಂಡಿಯಾ

ಟಿ 20 ಸರಣಿಗೆ ಟೀಂ ಇಂಡಿಯಾ

ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (‍ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ‍ಯುಜುವೇಂದ್ರ ಚಹಾಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್ , ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್.

Story first published: Monday, January 23, 2023, 14:04 [IST]
Other articles published on Jan 23, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X