ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊರೊನಾ ವಿರುದ್ಧ ಹೋರಾಟ: 51 ಕೋಟಿ ರೂ. ನೆರವು ಘೋಷಿಸಿದ ಬಿಸಿಸಿಐ

Bcci Contributes Rs 51 Crore In Pm’s Relief Fund To Fight Covid-19

ವಿಶ್ವಾದ್ಯಂತ ಕೊರೊನಾ ವೈರಸ್‌ನ ವ್ಯಾಪ್ತಿ ಹೆಚ್ಚಾಗುತ್ತಲೇ ಇದೆ. ದೇಶದಲ್ಲೂ ಕೊರೊನಾ ತನ್ನ ಪ್ರಭಾವವನ್ನು ದಿನದಿಂದ ದಿನಕ್ಕೆ ಹೆಚ್ಚಿಸಿಕೊಳ್ಳುತ್ತಿದೆ. ಮತ್ತೊಂದೆಡೆ ಕೇಂದ್ರ ಸರ್ಕಾರ ದೇಶಾದ್ಯಂತ ಏಪ್ರಿಲ್ 14ರ ವರೆಗೆ ಲಾಕ್‌ಡೌನ್ ಘೋಷಿಸಿ ಈ ವೈರಸ್‌ ವಿರುದ್ಧ ಹೋರಾಟಕ್ಕೆ ಇಳಿದಿದೆ.

ದೇಶಕ್ಕೆ ದೇಶವೇ ಸ್ಥಬ್ಧಗೊಂಡ ಈ ಸಂದರ್ಭದಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಾಕಷ್ಟು ಆರ್ಥಿಕ ನೆರವಿನ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕೇಂದ್ರ ಸರ್ಕಾರಕ್ಕೆ ದೊಡ್ಡ ಮೊತ್ತದ ನೆರವನ್ನು ಘೋಷಿಸಿದೆ.

ಲಾಕ್‌ಡೌನ್: ಈ ಹೋರಾಟ ಸುಲಭದ್ದಲ್ಲ, ಸಹಕರಿಸಲು ಜನತೆಗೆ ಕೊಹ್ಲಿ ಮನವಿಲಾಕ್‌ಡೌನ್: ಈ ಹೋರಾಟ ಸುಲಭದ್ದಲ್ಲ, ಸಹಕರಿಸಲು ಜನತೆಗೆ ಕೊಹ್ಲಿ ಮನವಿ

ಬಿಸಿಸಿಐ ಪ್ರಧಾನಮಂತ್ರಿ ನಾಗರಿಕ ಸಹಾಯ ಮತ್ತು ತುರ್ತುಪರಿಸ್ಥಿತಿಗಳ ಪರಿಹಾರ ನಿಧಿಗೆ 51 ಕೋಟಿ ರೂಪಾಯಿಗಳ ಪರಿಹಾರವನ್ನು ಘೋಷಿಸಿದೆ. ಈ ಮೂಲಕ ಸಾಂಕ್ರಾಮಿಕವಾಗಿ ಹಬ್ಬುತ್ತಿರುವ ವೈರಸ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಹಾಗೂ ಕಾರ್ಯದರ್ಶಿ ಜೈ ಶಾ ಈ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ದೇಶಾದ್ಯಂತ ಕೊರೊನಾ ವೈರಸ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳು ಮನವಿಯನ್ನೂ ಮಾಡಲಾಗುತ್ತಿದೆ. ಸಾರ್ವಜನಿಕರು ಯಾರೂ ಹೊರಗಡೆ ಬಾರದಂತೆ ಎಚ್ಚರಿಕೆಯನ್ನು ನೀಡಲಾಗುತ್ತಿದೆ.

ಕೊರೊನಾ: ಆಗ ಕ್ರಿಕೆಟರ್, ಬಾಕ್ಸರ್, ಕಬಡ್ಡಿ ಪ್ಲೇಯರ್-ಈಗ ಪೊಲೀಸ್ ಆಫೀಸರ್!ಕೊರೊನಾ: ಆಗ ಕ್ರಿಕೆಟರ್, ಬಾಕ್ಸರ್, ಕಬಡ್ಡಿ ಪ್ಲೇಯರ್-ಈಗ ಪೊಲೀಸ್ ಆಫೀಸರ್!

ಬಿಸಿಸಿಐ ತೆಗೆದುಕೊಂಡಿರುವ ಈ ನಿಲುವಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕ್ರಿಕೆಟ್ ಪ್ರೇಮಿಗಳು ಟ್ವಿಟ್ಟರ್‌ನಲ್ಲಿ ಬಿಸಿಸಿಐನ ನಿರ್ಧಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತಿದ್ದಾರೆ.

Story first published: Sunday, March 29, 2020, 10:51 [IST]
Other articles published on Mar 29, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X