ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

U-19 ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ದಾದಾ ಮೆಚ್ಚುಗೆ

BCCI Former President Sourav Ganguly Praises Indian Womens Team For Winning U-19 T20 World Cup

ಭಾನುವಾರ, ಜನವರಿ 29ರಂದು ಪಾಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಪಾರ್ಕ್‌ನಲ್ಲಿ ನಡೆದ 2023ರ 19 ವರ್ಷದೊಳಗಿನ ಮಹಿಳಾ ಟಿ20 ವಿಶ್ವಕಪ್‌ನ ಮೊದಲ ಆವೃತ್ತಿಯಲ್ಲಿಯೇ ಶಫಾಲಿ ವರ್ಮಾ ನಾಯಕತ್ವದ ಭಾರತ ಮಹಿಳಾ ತಂಡ ಚಾಂಪಿಯನ್ ಆಗಿ ಇತಿಹಾಸ ಸೃಷ್ಟಿಸಿತು.

2007ರಲ್ಲಿ ಎಂಎಸ್ ಧೋನಿ ನಾಯಕತ್ವದ ಭಾರತ ಪುರುಷರ ತಂಡವು ಚೊಚ್ಚಲ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್ ಆಗಿತ್ತು.

ಫೆ.1ರಂದು ಸಚಿನ್, ಬಿಸಿಸಿಐನಿಂದ ಟಿ20 ವಿಶ್ವಕಪ್ ವಿಜೇತ ಭಾರತ ಮಹಿಳಾ ತಂಡಕ್ಕೆ ಸನ್ಮಾನ

ಅಂಡರ್-19 ಮಹಿಳಾ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ವಿಕೆಟ್‌ಗಳ ಅಂತರದಲ್ಲಿ ಸೋಲಿಸುವ ಮೂಲಕ ಐಸಿಸಿ ವಿಶ್ವಕಪ್ ಟ್ರೋಫಿಯನ್ನು ಭಾರತ ಮಹಿಳೆಯರು ಎತ್ತಿ ಹಿಡಿದು, ಭಾರತದ ಕೀರ್ತಿ ಪತಾಕೆ ಹಾರಿಸಿದರು.

ಇದೀಗ U-19 ಟಿ20 ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ಮಾಜಿ ಹಾಗೂ ಹಾಲಿ ಕ್ರಿಕೆಟ್ ಆಟಗಾರರಿಂದ ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದೆ. ಬಿಸಿಸಿಐ ಕೂಡ ಮಹಿಳಾ ತಂಡಕ್ಕೆ 5 ಕೋಟಿ ರೂ.ಗಳ ಬಹುಮಾನ ಘೋಷಿಸಿದೆ.

BCCI Former President Sourav Ganguly Praises Indian Womens Team For Winning U-19 T20 World Cup

ಇದೀಗ ಭಾರತದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ದಕ್ಷಿಣ ಆಫ್ರಿಕಾದಲ್ಲಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಶ್ಲಾಘಿಸಿದ್ದಾರೆ.

ಭಾರತ ಮಹಿಳಾ ತಂಡದ ಗೆಲುವಿನ ಬಗ್ಗೆ ನೀವು ಏನು ಹೇಳುವಿರಿ ಎಂದು ಕೇಳಿದಾಗ, "ವಿಶ್ವಕಪ್ ಪ್ರಶಸ್ತಿ ಗೆಲ್ಲುವುದು ಅಸಾಧಾರಣವಾಗಿದೆ. ಇದೊಂದು ಅದ್ಭುತ ಸಾಧನೆಯಾಗಿದೆ," ಎಂದು ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಹೇಳಿದ್ದಾರೆ.

ಇದಕ್ಕೂ ಮೊದಲು, ಭಾರತ ತಂಡವನ್ನು ಕಟ್ಟಿದ ಶ್ರೇಷ್ಠ ನಾಯಕರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಸೌರವ್ ಗಂಗೂಲಿ ಟ್ವಿಟ್ವರ್‌ನಲ್ಲಿ ಭಾರತೀಯ ಕಿರಿಯ ಮಹಿಳಾ ತಂಡವನ್ನು ಅಭಿನಂದಿಸಿದ್ದಾರೆ.

"ವಿಶ್ವಕಪ್ ಗೆದ್ದ 19 ವರ್ಷದೊಳಗಿನ ಭಾರತ ಮಹಿಳಾ ತಂಡಕ್ಕೆ ಅಭಿನಂದನೆಗಳು. ಭಾರತೀಯ ಯುವತಿಯರು ತಮ್ಮ ಆಟವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಇದು ಉತ್ತಮ ಮೆಟ್ಟಿಲು," ಎಂದು ಬರೆದುಕೊಂಡಿದ್ದಾರೆ.

ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ ಭಾರತ ತಂಡ, ತಮ್ಮ ಎದುರಾಳಿ ತಂಡವನ್ನು 68 ರನ್‌ಗಳಿಗೆ ಆಲೌಟ್ ಮಾಡಿತು. ನಂತರ, ಭಾರತ ತಂಡ ಇನ್ನೂ ಆರು ಓವರ್‌ಗಳು ಬಾಕಿ ಇರುವಂತೆಯೇ ಗುರಿಯನ್ನು ಬೆನ್ನಟ್ಟಿತು.

ಬೌಲಿಂಗ್‌ನಲ್ಲಿ ತಮ್ಮ ನಾಲ್ಕು ಓವರ್‌ಗಳ ಕೋಟಾದಲ್ಲಿ ಕೇವಲ 6 ರನ್‌ಗಳನ್ನು ನೀಡಿ 2 ವಿಕೆಟ್‌ಗಳನ್ನು ಪಡೆದ ಟಿಟಾಸ್ ಸಾಧು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್‌ಪ್ರೀತ್ ಕೌರ್ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್‌ಪ್ರೀತ್ ಕೌರ್

ಭಾರತದ ಆರಂಭಿಕ ಜೊತೆಗಾರ್ತಿ ಶ್ವೇತಾ ಸೆಹ್ರಾವತ್ ಇಡೀ ಪಂದ್ಯಾವಳಿಯಲ್ಲಿ ಹೆಚ್ಚಿನ ರನ್ ಗಳಿಸಿದ ಆಟಗಾರ್ತಿ ಎನಿಸಿದರೆ, ನಾಯಕಿ ಶಫಾಲಿ ವರ್ಮಾ ಎರಡನೇ ಸ್ಥಾನ ಪಡೆದರು.

ಶ್ವೇತಾ ಸೆಹ್ರಾವತ್ ಏಳು ಪಂದ್ಯಗಳಿಂದ 99ರ ಸರಾಸರಿಯಲ್ಲಿ 139.43ರ ಸ್ಟ್ರೈಕ್‌ರೇಟ್‌ನೊಂದಿಗೆ 297 ರನ್ ಗಳಿಸಿದರು. ಅದರಲ್ಲಿ ಅಜೇಯ 92 ರನ್ ಸೇರಿದಂತೆ ಮೂರು ಅರ್ಧ ಶತಕಗಳನ್ನು ಬಾರಿಸಿದ್ದಾರೆ.

ಇನ್ನು ಲೆಗ್ ಸ್ಪಿನ್ನರ್ ಪಾರ್ಶವಿ ಚೋಪ್ರಾ 6 ಪಂದ್ಯಗಳಿಂದ 3.66 ಎಕಾನಮಿ ದರದಲ್ಲಿ 11 ವಿಕೆಟ್‌ಗಳನ್ನು ಪಡೆದು ಪಂದ್ಯಾವಳಿಯಲ್ಲಿ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

Story first published: Tuesday, January 31, 2023, 22:21 [IST]
Other articles published on Jan 31, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X