Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

2024-25ರ ಭಾರತ ತಂಡದ ತವರಿನ ಸರಣಿಯ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 2024-25ರ ಭಾರತದ ಹಿರಿಯ ಪುರುಷರ ತಂಡದ ಬಹು ನಿರೀಕ್ಷಿತ ಅಂತಾರಾಷ್ಟ್ರೀಯ ತವರಿನ ಆವೃತ್ತಿಗಾಗಿ ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಅಂತಾರಾಷ್ಟ್ರೀಯ ತವರಿನ ಸರಣಿಯು ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಎರಡು ಪಂದ್ಯಗಳ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ನಂತರ ಮೂರು ಪಂದ್ಯಗಳ ಟಿ20 ಸರಣಿಯನ್ನು ನಡೆಸಲಿದೆ.

BCCI has Announced The Complete Schedule of Indian Team s Home Series for 2024-25

ಸೆಪ್ಟೆಂಬರ್ 19ರಿಂದ ಮೊದಲ ಟೆಸ್ಟ್ ಪಂದ್ಯಕ್ಕೆ ಚೆನ್ನೈ ಆತಿಥ್ಯ ವಹಿಸಲಿದ್ದು, ಸೆಪ್ಟೆಂಬರ್ 27ರಿಂದ ಕಾನ್ಪುರ ಎರಡನೇ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಮೂರು ಟಿ20 ಪಂದ್ಯಗಳು ಕ್ರಮವಾಗಿ ಧರ್ಮಶಾಲಾ, ದೆಹಲಿ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿವೆ.

ಇದಾದ ನಂತರ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಅಕ್ಟೋಬರ್ 16ರಂದು ಬೆಂಗಳೂರಿನಲ್ಲಿ ಆರಂಭವಾಗಲಿದೆ. ಪುಣೆ ಮತ್ತು ಮುಂಬೈ ಕ್ರಮವಾಗಿ ಎರಡು ಮತ್ತು ಮೂರನೇ ಟೆಸ್ಟ್ ಪಂದ್ಯಕ್ಕೆ ಆತಿಥ್ಯ ವಹಿಸಲಿವೆ.

ಹೊಸ ವರ್ಷದ ಆಗಮನವು ಐದು ಟಿ20 ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ಇಂಗ್ಲೆಂಡ್ ತಂಡವು ಭಾರತಕ್ಕೆ ಭೇಟಿ ನೀಡುವುದರೊಂದಿಗೆ ಅತ್ಯಾಕರ್ಷಕ ವೈಟ್-ಬಾಲ್ ಮುಖಾಮುಖಿಯನ್ನು ಎದುರು ನೋಡುತ್ತದೆ. ತವರಿನ ಅವೃತ್ತಿಯಲ್ಲಿ ಭಾರತ ಕ್ರಿಕೆಟ್ ತಂಡದ ಹೊಸ ಕೋಚ್ ಉಸ್ತುವಾರಿ ವಹಿಸಲಿದ್ದಾರೆ.

ಕೇವಲ 3 ಏಕದಿನ ಪಂದ್ಯಗಳು

ಇಡೀ ತವರಿನ ಋತುವಿನಲ್ಲಿ ಕೇವಲ ಮೂರು ಏಕದಿನ ಪಂದ್ಯಗಳನ್ನು ನಿಯೋಜಿಸಲಾಗಿದೆ. 2025ರ ಚಾಂಪಿಯನ್ಸ್ ಟ್ರೋಫಿಯನ್ನು ಗಮನದಲ್ಲಿಟ್ಟುಕೊಂಡು ಇದು ಸ್ವಲ್ಪ ಮಟ್ಟಿಗೆ ಸಂಬಂಧಿಸಿದೆ.

ಬಲಿಷ್ಠ ಇಂಗ್ಲೆಂಡ್ ತಂಡವು ಐದು ಪಂದ್ಯಗಳ ಟಿ20 ಸರಣಿಗಾಗಿ ಭಾರತಕ್ಕೆ ಭೇಟಿ ನೀಡಲಿದೆ. 2025ರ ನಂತರ ಮೂರು ಪಂದ್ಯಗಳ ಏಕದಿನ ಸರಣಿಯನ್ನು ನಡೆಸುತ್ತದೆ.

ಆದಾಗ್ಯೂ, ಇಂಗ್ಲೆಂಡ್ ತಂಡ ಭಾರತಕ್ಕೆ ಭೇಟಿ ನೀಡುವ ಮೊದಲು, ಟೀಮ್ ಇಂಡಿಯಾ ಡಿಸೆಂಬರ್‌ನಲ್ಲಿ ಹೈ-ವೋಲ್ಟೇಜ್ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ತೊಡಗಿಸಿಕೊಳ್ಳುತ್ತದೆ. ನವೆಂಬರ್ 22ರಿಂದ ಜನವರಿ 3ರವರೆಗೆ ಐದು ಟೆಸ್ಟ್‌ ಪಂದ್ಯಗಳ ಸರಣಿಗಾಗಿ ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಆತಿಥ್ಯ ವಹಿಸಲಿದೆ.

Story first published: Thursday, June 20, 2024, 21:57 [IST]
Other articles published on Jun 20, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+