ಐಪಿಎಲ್‌ನಲ್ಲಿ ವಿದೇಶಿ ಆಟಗಾರರು ಪಾಲ್ಗೊಳ್ಳುವಂತೆ ಸೌರವ್ ಗಂಗೂಲಿ ರಣತಂತ್ರ

ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳು ಯುಎಇಯಲ್ಲಿ ಸೆಪ್ಟೆಂಬರ್ ಮೂರನೇ ವಾರದಿಂದ ಮುಂದುವರಿಯಲಿದೆ. ಏಪ್ರಿಲ್ 9ರಂದು ಭಾರತದಲ್ಲಿ ಆರಂಭವಾಗಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ 29 ಪಂದ್ಯಗಳು ಯಶಸ್ವಿಯಾಗಿ ಮುಗಿದ ನಂತರ ವಿವಿಧ ತಂಡಗಳ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಟೂರ್ನಿಯನ್ನು ಮುಂದೂಡಲಾಗಿತ್ತು.
ಶನಿವಾರ ನಡೆದ ಬಿಸಿಸಿಐನ ವಿಶೇಷ ಸಾಮಾನ್ಯ ಸಭೆಯಲ್ಲಿ ಉಳಿದ ಐಪಿಎಲ್ ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ತೀರ್ಮಾನಿಸಿದ್ದು ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ಐಪಿಎಲ್ ಟೂರ್ನಿ ಮುಂದುವರೆಯಲಿದೆ. ಈ ತಿಂಗಳುಗಳಲ್ಲಿ ಭಾರತದಲ್ಲಿ ಹೆಚ್ಚಾಗಿ ಮಳೆ ಸುರಿಯುವ ಕಾರಣ ಬಿಸಿಸಿಐ ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದೆ. ಐಪಿಎಲ್ ಟೂರ್ನಿಯನ್ನು ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ಆಯೋಜಿಸಿದರೆ ವಿದೇಶಿ ಆಟಗಾರರ ಅಲಭ್ಯತೆಯ ಸಮಸ್ಯೆ ಎದುರಾಗಲಿದೆ ಎಂಬ ಮಾತುಗಳು ಸಹ ಸಾಕಷ್ಟು ಕೇಳಿಬಂದಿದ್ದವು.
ಅದರಲ್ಲಿಯೂ ಕೆರಿಬಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆಗಸ್ಟ್ 28ರಿಂದ ಸೆಪ್ಟೆಂಬರ್ 19ರವರೆಗೆ ನಡೆಯುವುದರಿಂದ ಐಪಿಎಲ್ ಮುಂದುವರಿಕೆಯ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎನ್ನಲಾಗುತ್ತಿತ್ತು. ಈ ಸಮಸ್ಯೆಗೆ ಇದೀಗ ಸೌರವ್ ಗಂಗೂಲಿ ಪರಿಹಾರ ಹುಡುಕಿಕೊಳ್ಳುವ ಯತ್ನದಲ್ಲಿದ್ದು ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಜೊತೆ ಸಂಪರ್ಕ ಬೆಳೆಸಿ ಕೆರಿಬಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಹತ್ತು ದಿನ ಮುಂಚಿತವಾಗಿ ಆರಂಭಿಸಿ ಹತ್ತು ದಿನ ಮುಂಚಿತವಾಗಿ ಮುಗಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಹೀಗೆ ಮಾಡುವುದರಿಂದ ಕೆರಿಬಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮತ್ತು ಐಪಿಎಲ್ ಟೂರ್ನಿ ಎರಡನ್ನೂ ಆಡುವ ಆಟಗಾರರಿಗೆ ಅನುಕೂಲವಾಗಲಿದೆ ಎಂಬುದು ಸೌರವ್ ಗಂಗೂಲಿ ಚಿಂತನೆ. ಗಂಗೂಲಿ ಮಾಡಿರುವ ಈ ಮನವಿಗೆ ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ಸ್ಪಂದಿಸಲಿದೆ ಎನ್ನುವ ಮಾತುಗಳು ಸಹ ಕೇಳಿಬರುತ್ತಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications