ಎನ್‌ಸಿಎ ಮುಖ್ಯಸ್ಥರ ಸ್ಥಾನಕ್ಕೆ ಅರ್ಜಿ ಕರೆದ ಬಿಸಿಸಿಐ, ದ್ರಾವಿಡ್ ಮರು ಅರ್ಜಿ ಸಲ್ಲಿಕೆ ನಿರೀಕ್ಷೆ

ನವದೆಹಲಿ: ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರ ಸ್ಥಾನಕ್ಕೆ ಅರ್ಜಿ ಕರೆದಿದೆ. ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಮತ್ತೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ಭಾರತೀಯ ಅಂಡರ್-19 ತಂಡ ಬಲಿಷ್ಠಗೊಳಿಸಿ ಈಗಿನ ಟೀಮ್ ಇಂಡಿಯಾದ ಬೆಂಚ್‌ಗೆ ಬಲ ತುಂಬಿರುವವರಲ್ಲಿ ರಾಹುಲ್ ಪ್ರಮುಖ ಪಾತ್ರ ವಹಿಸಿದ್ದರು. 2019ರ ಜುಲೈನಲ್ಲಿ ದ್ರಾವಿಡ್ ಎನ್‌ಸಿಎ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು.

ಕೆಎಲ್ ರಾಹುಲ್ ಬದಲಿಗೆ ಬೇರೆ ಆಟಗಾರನಿಗೆ ಅವಕಾಶ ನೀಡಬೇಕು: ಸಂಜಯ್ ಮಂಜ್ರೇಕರ್ಕೆಎಲ್ ರಾಹುಲ್ ಬದಲಿಗೆ ಬೇರೆ ಆಟಗಾರನಿಗೆ ಅವಕಾಶ ನೀಡಬೇಕು: ಸಂಜಯ್ ಮಂಜ್ರೇಕರ್

ಗ್ರೇಟ್ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಅವರು ಈವರೆಗೆ ಎನ್‌ಸಿಎ ಮುಖ್ಯಸ್ಥರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ ಸ್ಥಾನದ ಒಪ್ಪಂದದ ಅವಧಿ ಮುಕ್ತಾಯಗೊಂಡಿರುವುದರಿಂದ ವಾಡಿಕೆಯಂತೆ ಮತ್ತೆ ಅರ್ಜಿ ಕರೆಯಲಾಗಿದೆ. ದ್ರಾವಿಡ್ ಮತ್ತೆ ಅರ್ಜಿ ಸಲ್ಲಿಸುವುದನ್ನು ನಿರೀಕ್ಷಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಆಗಸ್ಟ್ 15 ಕಡೇಯ ದಿನ
ಎನ್‌ಸಿಎ ಮುಖ್ಯಸ್ಥರ ಸ್ಥಾನಕ್ಕೆ ಬಿಸಿಸಿಐ ಅರ್ಜಿ ಕರೆದಿದ್ದು ಅರ್ಜಿ ಸಲ್ಲಿಕೆಗೆ ಆಗಸ್ಟ್ 15ರಂದು ಕಡೇಯ ದಿನವೆಂದು ಹೇಳಿದೆ. ಎನ್‌ಸಿಎ ಮುಖ್ಯಸ್ಥರಾಗಿ ದ್ರಾವಿಡ್ ಅವರ ಎರಡು ವರ್ಷಗಳ ಅವಧಿ ಮುಕ್ತಾಯಗೊಂಡಿದೆ. ಹೀಗಾಗಿ ದ್ರಾವಿಡ್ ಇನ್ನೆರಡು ವರ್ಷ ಒಪ್ಪಂದ ಮುಂದುವರೆಸಲು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇತ್ತೀಚೆಗಷ್ಟೇ ದ್ರಾವಿಡ್ ಅವರು ಭಾರತೀಯ ಸೀಮಿತ ಓವರ್‌ಗಳ ತಂಡದ ಜೊತೆಗೆ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ತಂಡದ ಮುಖ್ಯ ಕೋಚ್ ಆಗಿ ಶ್ರೀಲಂಕಾ ಪ್ರವಾಸಕ್ಕೆ ಹೋಗಿದ್ದರು. ಈ ವೇಳೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-1ರಿಂದ ಗೆದ್ದಿದ್ದರೆ, ಟಿ20ಐ ಸರಣಿಯಲ್ಲಿ 2-1ರಿಂದ ಸೋತಿತ್ತು. ಭಾರತೀಯ ಒಂದು ತಂಡ ಟೆಸ್ಟ್‌ ಸರಣಿಗಾಗಿ ಇಂಗ್ಲೆಂಡ್‌ನಲ್ಲಿದ್ದಿದ್ದರಿಂದ ಮತ್ತೊಂದು ತಂಡಕ್ಕೆ ದ್ರಾವಿಡ್ ಕೋಚ್ ಜವಾಬ್ದಾರಿ ಹೊತ್ತು ಲಂಕಾಕ್ಕೆ ಹೋಗಿದ್ದರು. ಈ ವೇಳೆ ಭಾರತೀಯ ತಂಡಕ್ಕೆ ಅನುಭವಿ ಬ್ಯಾಟ್ಸ್‌ಮನ್‌ ಶಿಖರ್ ಧವನ್ ನಾಯಕರಾಗಿದ್ದರೆ, ವೇಗಿ ಭುವನೇಶ್ವರ್ ಕುಮಾರ್ ಉಪ ನಾಯಕನ ಜವಾಬ್ದಾರಿ ಹೊತ್ತಿದ್ದರು.

ಟೋಕಿಯೋ ಒಲಿಂಪಿಕ್ಸ್‌ ಪದಕ ಗೆದ್ದವರಲ್ಲಿ ಯಾರಿಗೆ ಎಷ್ಟೆಷ್ಟು ಹಣ?: ಸಂಪೂರ್ಣ ಮಾಹಿತಿಟೋಕಿಯೋ ಒಲಿಂಪಿಕ್ಸ್‌ ಪದಕ ಗೆದ್ದವರಲ್ಲಿ ಯಾರಿಗೆ ಎಷ್ಟೆಷ್ಟು ಹಣ?: ಸಂಪೂರ್ಣ ಮಾಹಿತಿ

ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ಅರ್ಜಿ ಸಲ್ಲಿಸುತ್ತಾರಾ?
"ಎನ್‌ಸಿಎ ಮುಖ್ಯಸ್ಥರ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಮರು ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಭಾರತೀಯ ತಂಡದ ಮುಖ್ಯ ಕೋಚ್ ಆಗಿರುವ ರವಿ ಶಾಸ್ತ್ರಿ ಅವರ ಒಪ್ಪಂದ ನವೆಂಬರ್‌ನಲ್ಲಿ ಟಿ20 ವಿಶ್ವಕಪ್ ಬಳಿಕ ಮುಕ್ತಾಯಗೊಳ್ಳಲಿರುವುದರಿಂದ ಮುಖ್ಯ ಕೋಚ್‌ ಸ್ಥಾನಕ್ಕೆ ರಾಹುಲ್ ಬರುವ ಸಾಧ್ಯತೆಗಳೂ ಇವೆ. ಒಂದಂತೂ ಸ್ಪಷ್ಟವಾಗಿ ಹೇಳುವುದಾದರೆ ರಾಹುಲ್ ದ್ರಾವಿಡ್ ಅವರು ಭಾರತೀಯ ಕ್ರಿಕೆಟ್ ವ್ಯವಸ್ಥೆಯಲ್ಲಿ ಇನ್ನೊಂದಿಷ್ಟು ಕಾಲ ಇರಲಿದ್ದಾರೆ," ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

Shardul Thakur ಎರಡನೇ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ | oneindia kannada

ಕೋಚ್ ಜವಾಬ್ದಾರಿಯ ಬಗ್ಗೆ ರಾಹುಲ್ ದ್ರಾವಿಡ್ ಏನು ಹೇಳ್ತಾರೆ?
ಶ್ರೀಲಂಕಾಕ್ಕೆ ಪ್ರವಾಸ ಹೋಗಿದ್ದ ಭಾರತೀಯ ತಂಡದ ಜೊತೆ ತೆರಳಿದ್ದ ರಾಹುಲ್ ದ್ರಾವಿಡ್ ಅವರಲ್ಲಿ ಮುಖ್ಯ ಕೋಚ್ ಸ್ಥಾನದಲ್ಲಿ ಮುಂದವರೆಯುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದ್ದರು. ಈ ವೇಳೆ ದ್ರಾವಿಡ್ ಉತ್ತರ ನೀಡಲು ಹಿಂದೇಟು ಹಾಕಿದರು. "ಮುಖ್ಯ ಕೋಚ್ ಬಗ್ಗೆ ನಾನು ನಿಜಕ್ಕೂ ಯೋಚಿಸಿಲ್ಲ. ನಾನೀಗ ಏನು ಮಾಡುತ್ತಿದ್ದೇನೋ ಅದನ್ನು ಎಂಜಾಯ್ ಮಾಡುತ್ತಿದ್ದೇನೆಯೇ ಹೊರತು ಬೇರೆ ಕಡೆ ಚಿಂತಿಸಿಲ್ಲ," ಎಂದು ದ್ರಾವಿಡ್ ಹೇಳಿದ್ದರು. ಟೀಮ್ ಇಂಡಿಯಾದ ಮುಖ್ಯಕೋಚ್ ಸ್ಥಾನಕ್ಕೆ ವಯೋಮಿತಿ 60 ವರ್ಷ. ಈಗಿರುವ ಕೋಚ್ ಶಾಸ್ತ್ರಿಗೆ ಈಗಾಗಲೇ 59 ವರ್ಷವಾಗಿರುವುದರಿಂದ ಅವರು ಈ ವರ್ಷವೂ ಮುಖ್ಯಕೋಚ್ ಸ್ಥಾನದಲ್ಲಿ ಮುಂದುವರೆಯುವ ಸಾಧ್ಯತೆಯಿಲ್ಲ. ಹೀಗಾಗಿ 48ರ ಹರೆಯದ ದ್ರಾವಿಡ್‌ಗೆ ಮುಖ್ಯಕೋಚ್ ಅವಕಾಶ ಹೆಚ್ಚಿದೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, August 10, 2021, 23:58 [IST]
Other articles published on Aug 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X